ಮುಂಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡದ ಆಟಗಾರರ ಪಟ್ಟಿ ಪ್ರಕಟವಾಗಿದ್ದು, ಆರಂಭಿಕ ಆಟಗಾರ ರೋಹಿತ್ ಶರ್ಮಾ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. 


COMMERCIAL BREAK
SCROLL TO CONTINUE READING

ಯುನೈಟೆಡ್ ಅರಬ್ ಎಮರೈಟ್ಸ್'ನ ದುಬೈನಲ್ಲಿ ಸೆಪ್ಟೆಂಬರ್ 15ರಿಂದ ನಡೆಯಲಿರುವ ಪಂದ್ಯಾವಳಿಯಲ್ಲಿ 16 ಆಟಗಾರರ ಭಾರತ ಕ್ರಿಕೆಟ್ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು. ತಂಡದಲ್ಲಿ ಶಿಖರ್​ ಧವನ್​ ಗೆ ಉಪನಾಯಕನ ಜವಾಬ್ದಾರಿ ವಹಿಸಲಾಗಿದ್ದು, ಕನ್ನಡಿಗರಾದ ಕೆ.ಎಲ್​.ರಾಹುಲ್​, ಮನೀಷ್​ ಪಾಂಡೆಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಅಲ್ಲದೆ, ಯುವ ಪ್ರತಿಭೆಗಳಾದ ಖಲೀಲ್​ ಅಹಮದ್​, ಶಾರ್ದುಲ್​ ಠಾಕೂರ್​, ಕೇದಾರ್​ ಜಾದವ್​, ಅಂಬಾಟಿ ರಾಯುಡು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.


ಭಾರತ ಕ್ರಿಕೆಟ್ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್ (ಉಪ ನಾಯಕ), ಕೆಎಲ್ ರಾಹುಲ್, ಅಂಬಾಟಿ ರಾಯುಡು, ಮನೀಶ್ ಪಾಂಡೆ, ಕೇದರ್ ಜಾದವ್, ಎಂಎಸ್ ಧೋನಿ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್​ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಖಲೀಲ್ ಅಹಮ್ಮದ್.