ICC ಯಿಂದ ರೋಹಿತ್‌ಗೆ ಬಿಗ್‌ ಶಾಕ್‌..! ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್ ತಲುಪಿದರೂ ಹಿಟ್‌ ಮ್ಯಾನ್‌ಗೆಕೆ ಈ ಶಿಕ್ಷೆ

Rohit Sharma : ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಮೆಂಟ್‌ನ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಕ್ಯಾಪ್ಟನ್‌ ಹಿಟ್‌ ಮ್ಯಾನ್‌ ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ.. ಅಷ್ಟಕ್ಕೂ ಆಗಿದ್ದೇನು..? ಬನ್ನಿ ನೋಡೋಣ..

Written by - Krishna N K | Last Updated : Mar 5, 2025, 05:37 PM IST
    • ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಮೆಂಟ್‌ನ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿ
    • ಭಾರತ ತಂಡ ಸತತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದೆ.
    • ಇದಾದ ಕೆಲವೇ ಗಂಟೆಗಳಲ್ಲಿ ಕ್ಯಾಪ್ಟನ್‌ ಹಿಟ್‌ ಮ್ಯಾನ್‌ ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ..
ICC ಯಿಂದ ರೋಹಿತ್‌ಗೆ ಬಿಗ್‌ ಶಾಕ್‌..! ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್ ತಲುಪಿದರೂ ಹಿಟ್‌ ಮ್ಯಾನ್‌ಗೆಕೆ ಈ ಶಿಕ್ಷೆ

??? ??? rankings Rohit Sharma : ಮಾರ್ಚ್ 4 ರಂದು ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಮೆಂಟ್‌ನ ಫೈನಲ್ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಸತತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದೆ. ಈ ಗೆಲುವಿನೊಂದಿಗೆ ಕಾಂಗರೂಗಳ ಸೋಲಿನ ಸೇಡನ್ನು ತಂಡ ತೀರಿಸಿಕೊಂಡಿತು. 

Add Zee News as a Preferred Source

ಹೌದು.. ಇದೇ ಕಾಂಗರೂಗಳು 2023 ರ ವಿಶ್ವಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸಿತ್ತು.. ಅದಕ್ಕೆ ಈಗ ಪ್ರತ್ಯುತ್ತರ ನೀಡಿದ್ದಾರೆ.. ಇದು ದುಬೈನಲ್ಲಿ ಟೀಮ್ ಇಂಡಿಯಾದ ಒಂಬತ್ತನೇ ಏಕದಿನ ಗೆಲುವು. ಈಗ ಟೀಮ್ ಇಂಡಿಯಾ ಅಂತಿಮ ಸುತ್ತಿಗೆ ಸಿದ್ಧವಾಗಿದೆ. ಅಂತಿಮ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಭಾರತ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ವಿಜೇತರನ್ನು ಎದುರಿಸಲಿದೆ. ಆದರೆ ಅದಕ್ಕೂ ಮುನ್ನ ಭಾರತ ತಂಡದ ನಾಯಕ ರೋಹಿತ್ ಶರ್ಮಾ ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ.

ಇದನ್ನೂ ಓದಿ:ಕೇವಲ 1 ಸಿಕ್ಸರ್ ಬಾರಿಸಿ ಕ್ರಿಸ್ ಗೇಲ್ ದಾಖಲೆ ಮುರಿದ ಕ್ಯಾಪ್ಟನ್‌ ರೋಹಿತ್‌ ಶರ್ಮಾ..!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC Ranks) ಏಕದಿನ ಶ್ರೇಯಾಂಕವನ್ನು ಪ್ರಕಟಿಸಿದೆ. ಈ ಶ್ರೇಯಾಂಕದಲ್ಲಿ ರೋಹಿತ್ ಹಿನ್ನಡೆ ಅನುಭವಿಸಿದ್ದಾರೆ. ಬ್ಯಾಟಿಂಗ್ ಶ್ರೇಯಾಂಕದಲ್ಲಿ ರೋಹಿತ್ ಶರ್ಮಾ 2 ಸ್ಥಾನಗಳನ್ನು ಕಳೆದುಕೊಂಡಿದ್ದಾರೆ. ಕ್ಯಾಪ್ಟನ್‌ ಮೂರನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ. ರೋಹಿತ್ ಹೊರತುಪಡಿಸಿ, ಟೀಮ್ ಇಂಡಿಯಾದ ಇತರ ಬ್ಯಾಟ್ಸ್‌ಮನ್‌ಗಳು ತಮ್ಮ ಸ್ಥಾನ ಕಾಪಾಡಿಕೊಂಡಿದ್ದಾರೆ.

ಈ ??? ??? rankingsನಲ್ಲಿ ಅಗ್ರ 10 ರಲ್ಲಿ 4 ಬ್ಯಾಟ್ಸ್‌ಮನ್‌ಗಳು ಸೇರಿದ್ದಾರೆ. ಉಪನಾಯಕ ಶುಭಮನ್ ಗಿಲ್ ತಮ್ಮ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ. ವಿರಾಟ್ ಐದನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಪಾಕಿಸ್ತಾನದ ಅನುಭವಿ ಬ್ಯಾಟ್ಸ್‌ಮನ್ ಬಾಬರ್ ಅಜಮ್ ಎರಡನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಹೆನ್ರಿಚ್ ಕ್ಲಾಸೆನ್ ಮೂರನೇ ಸ್ಥಾನದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News