“ನೀವು ಟಿ20 ವಿಶ್ವಕಪ್ ಆಡ್ತೀರಾ?”- ಹೀಗೆಂದು ಪ್ರಶ್ನಿಸಿದ ಪತ್ರಕರ್ತನಿಗೆ ನಾಯಕ ರೋಹಿತ್ ಶರ್ಮಾ ಕೊಟ್ಟ ಉತ್ತರವೇನು ಗೊತ್ತಾ?
Rohit Sharma Press Conference: ಐಸಿಸಿ ಏಕದಿನ ವಿಶ್ವಕಪ್-2023ರಲ್ಲಿ ಪವರ್‌ಫುಲ್ ಓಪನರ್ ರೋಹಿತ್ ಶರ್ಮಾ ಟೀಮ್ ಇಂಡಿಯಾದ ನಾಯಕತ್ವವನ್ನು ವಹಿಸಿಕೊಂಡರು. ಸ್ವತಃ ಆಯೋಜಿಸಿದ್ದ ಈ ಐಸಿಸಿ ಟೂರ್ನಿಯಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿ ಯಾವುದೇ ಪಂದ್ಯದಲ್ಲಿ ಸೋಲದೆ ಫೈನಲ್’ಗೆ ಟಿಕೆಟ್ ಗಿಟ್ಟಿಸಿಕೊಂಡಿತ್ತು.
Rohit Sharma in T20 World Cup-2024: ICC T20 ವಿಶ್ವಕಪ್ ಅನ್ನು ಮುಂದಿನ ವರ್ಷ ಜೂನ್’ನಲ್ಲಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ಬಾರಿಯ ಜಾಗತಿಕ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾದ ದಿಗ್ಗಜ ರೋಹಿತ್ ಶರ್ಮಾ ಆಡುವ ಬಗ್ಗೆ ಅನುಮಾನವಿದೆ. ಆದರೆ ಈ ಬೆನ್ನಲ್ಲೇ ಪತ್ರಕರ್ತರೊಬ್ಬರು ರೋಹಿತ್ ಶರ್ಮಾಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದ್ದಾರೆ.
ಇದನ್ನೂ ಓದಿ: ಕ್ರಿಕೆಟ್ ಭವಿಷ್ಯ ಹಾಳು ಮಾಡ್ತೇನೆ ಅಂತಾ ಗಲಾಟೆ! ಬೀದಿಗೆ ಬಿತ್ತು ಕ್ರಿಕೆಟಿಗನ ಪ್ರೇಮ್ ಕಹಾನಿ
ಐಸಿಸಿ ಏಕದಿನ ವಿಶ್ವಕಪ್-2023ರಲ್ಲಿ ಪವರ್‌ಫುಲ್ ಓಪನರ್ ರೋಹಿತ್ ಶರ್ಮಾ ಟೀಮ್ ಇಂಡಿಯಾದ ನಾಯಕತ್ವವನ್ನು ವಹಿಸಿಕೊಂಡರು. ಸ್ವತಃ ಆಯೋಜಿಸಿದ್ದ ಈ ಐಸಿಸಿ ಟೂರ್ನಿಯಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿ ಯಾವುದೇ ಪಂದ್ಯದಲ್ಲಿ ಸೋಲದೆ ಫೈನಲ್’ಗೆ ಟಿಕೆಟ್ ಗಿಟ್ಟಿಸಿಕೊಂಡಿತ್ತು. ಆದರೆ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿತ್ತು. ಅಂದಿನಿಂದ ರೋಹಿತ್ ಕ್ರಿಕೆಟ್’ನಿಂದ ವಿರಾಮ ಪಡೆದಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಮೈದಾನಕ್ಕೆ ಮರಳಲಿದ್ದಾರೆ. ಇದರ ಮೊದಲ ಪಂದ್ಯ ಡಿಸೆಂಬರ್ 26 ಮಂಗಳವಾರದಿಂದ ಸೆಂಚುರಿಯನ್’ನಲ್ಲಿ ಆರಂಭವಾಗಲಿದೆ.
ಇದನ್ನೂ ಓದಿ: ದಕ್ಷಿಣ ಆಫ್ರಿಕಾ ನೆಲದಲ್ಲಿ ಹೊಸ ಇತಿಹಾಸ ಸೃಷ್ಠಿಸಲು ರೋಹಿತ್ ಗೆ ಚಾನ್ಸ್ ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಟಿ20 ವಿಶ್ವಕಪ್’ನಲ್ಲಿ ಆಡುವ ಕುರಿತು ಕೇಳಿದ ಪ್ರಶ್ನೆಗೆ ತಮಾಷೆಯಾಗಿ ಪ್ರತಿಕ್ರಿಯಿಸಿದರು. “ನೋಡಿ, ನಾನು ಏನು ಹೇಳಬೇಕೆಂದು ನನಗೆ ಚೆನ್ನಾಗಿ ತಿಳಿದಿದೆ. ನೀವು ಹುಡುಕುತ್ತಿರುವ ಉತ್ತರವನ್ನು ನೀವು ಶೀಘ್ರದಲ್ಲೇ ಪಡೆಯುತ್ತೀರಿ” ಎಂದಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.