ನಿವೃತ್ತಿ ಪಡೆಯುವುದು ನಿಜವೇ? ಕೊನೆಗೂ ಮೌನಮುರಿದ ರೋಹಿತ್ ಶರ್ಮಾ ಹೇಳಿದ್ದು ಹೀಗೆ...
Rohit Sharma statement on retirement: ಕಳಪೆ ಫಾರ್ಮ್‌ನಿಂದ ಹೋರಾಡುತ್ತಿರುವ ರೋಹಿತ್ ಶರ್ಮಾ ಸಿಡ್ನಿ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದು, ಅವರ ಸ್ಥಾನಕ್ಕೆ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ನಾಯಕತ್ವ ವಹಿಸಿದ್ದಾರೆ. ಇದರಿಂದಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಭವಿಷ್ಯದ ಬಗ್ಗೆ ಊಹಾಪೋಹಗಳು ಶುರುವಾಗಿವೆ.
Rohit Sharma statement on Retirement: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ನಿವೃತ್ತಿಯ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ. "ನಾನು ಎಲ್ಲಿಯೂ ಹೋಗುತ್ತಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಸಿಡ್ನಿ ಟೆಸ್ಟ್‌ನಿಂದ ಹೊರಗೆ ಉಳಿಯಲು ಕಳಪೆ ಫಾರ್ಮ್ ಕಾರಣ" ಎಂದು ಹೇಳಿದ್ದಾರೆ.
ಇದನ್ನೂ ಓದಿ: ಖ್ಯಾತ ನಟಿ ಜೊತೆ ಫ್ಲಾಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ರಾ ಸಲ್ಮಾನ್ ಖಾನ್.!
ಕಳಪೆ ಫಾರ್ಮ್‌ನಿಂದ ಹೋರಾಡುತ್ತಿರುವ ರೋಹಿತ್ ಶರ್ಮಾ ಸಿಡ್ನಿ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದು, ಅವರ ಸ್ಥಾನಕ್ಕೆ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ನಾಯಕತ್ವ ವಹಿಸಿದ್ದಾರೆ. ಇದರಿಂದಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಭವಿಷ್ಯದ ಬಗ್ಗೆ ಊಹಾಪೋಹಗಳು ಶುರುವಾಗಿವೆ.
ಸ್ಟಾರ್ ಸ್ಪೋರ್ಟ್ಸ್ ಜೊತೆ ನೀಡಿದ ಸಂದರ್ಶನದಲ್ಲಿ ರೋಹಿತ್ ಶರ್ಮಾ, "ನಾನು ನಿವೃತ್ತಿಯಾಗಿಲ್ಲ. ನಾನು ಹೊರಗಿದ್ದೇನೆ ಅಷ್ಟೇ. ರನ್ ಗಳಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ಈ ಮಹತ್ವದ ಪಂದ್ಯದಿಂದ ಹೊರಗಿದ್ದೇನೆ. ಈ ಬಗ್ಗೆ ಸ್ವತಃ ನಾನೇ ಕೋಚ್ ಮತ್ತು ಆಯ್ಕೆದಾರರಿಗೆ ಹೇಳಿದೆ. ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಂಡದಲ್ಲಿ ಫಾರ್ಮ್ ಇಲ್ಲದ ಆಟಗಾರರು ಹೆಚ್ಚು ಇರಬಾರದು. ಅದನ್ನು ಹೊರತುಪಡಿಸಿದ ನಾನು ಎಲ್ಲಿಯೂ ಹೋಗುತ್ತಿಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ರೋಹಿತ್ ಶರ್ಮಾ ಕೆಲವು ಕ್ರಿಕೆಟ್ ಪರಿಣತರನ್ನೂ ಹೆಸರಿಸದೆ ಟಾಂಟ್ ಮಾಡಿದ್ದಾರೆ. "ನಾನು ಸಾಕಷ್ಟು ಕ್ರಿಕೆಟ್ ನೋಡಿದ್ದೇನೆ, ಪ್ರತಿ ನಿಮಿಷ, ಪ್ರತಿ ಸೆಕೆಂಡ್ ಮತ್ತು ಪ್ರತಿದಿನ ಜೀವನ ಬದಲಾಗುತ್ತದೆ. ವಿಷಯಗಳು ಬದಲಾಗುತ್ತವೆ. ಆದರೆ ಅದೇ ಸಮಯದಲ್ಲಿ ವಾಸ್ತವದಲ್ಲಿ ಬದುಕಬೇಕು. ಒಳಗೆ ಮೈಕ್ ಹಿಡಿದು ಕುಳಿತವರು ಅಥವಾ ಕೈಯಲ್ಲಿ ಲ್ಯಾಪ್‌ಟಾಪ್ ಹಿಡಿದು ಬರೆಯುವವರು ನನ್ನ ಭವಿಷ್ಯ ಏನಾಗಬಹುದು ಎಂಬುದನ್ನು ನಿರ್ಧರಿಸುವುದಿಲ್ಲ" ಎಂದು ಕಟು ಸ್ಟೇಟ್‌ಮೆಂಟ್ ನೀಡಿದ್ದಾರೆ. ಈ ಹೇಳಿಕೆ ಸುನಿಲ್ ಗವಾಸ್ಕರ್ ಮತ್ತು ರವಿಶಾಸ್ತ್ರಿ ಅವರಂತಹ ಕ್ರಿಕೆಟ್ ದಿಗ್ಗಜರಿಗೆ ರೋಹಿತ್ ಹೇಳುತ್ತಿದ್ದಾರೆ ಎಂದು ಅನುಮಾನ ಮೂಡಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.