Ind vs Eng ಎರಡನೇ ಟಿ20 ಗೆ ಸಂಪೂರ್ಣ ಬದಲಾಗಲಿದೆ ಟೀಂ ಇಂಡಿಯಾ!

ಮೊದಲ ಪಂದ್ಯದಲ್ಲಿ ವಿಶ್ರಾಂತಿ ಪಡೆದ ಅನೇಕ ಅನುಭವಿ ಆಟಗಾರರು ಎರಡನೇ ಪಂದ್ಯದಲ್ಲಿ ಮರಳುತ್ತಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಪ್ಲೇಯಿಂಗ್ 11ರಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ.

Written by - Channabasava A Kashinakunti | Last Updated : Jul 8, 2022, 07:39 PM IST
  • ಟೀಂ ಇಂಡಿಯಾದಲ್ಲಿ ಹಲವು ಪ್ರಮುಖ ಬದಲಾವಣೆಗಳು
  • ಹೊರಗುಳಿಯಲಿದ್ದಾರೆ ಈ 3 ಜನ ಆಟಗಾರರು
  • ಟೀಂ ಇಂಡಿಯಾಗೆ ಭರ್ಜರಿ ಗೆಲುವು
Ind vs Eng ಎರಡನೇ ಟಿ20 ಗೆ ಸಂಪೂರ್ಣ ಬದಲಾಗಲಿದೆ ಟೀಂ ಇಂಡಿಯಾ! title=

IND vs ENG T20 : ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸೆಣಸುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 50 ರನ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಟಿ20 ಗೆಲ್ಲುವ ಮೂಲಕ ಟೀಂ ಇಂಡಿಯಾ ಈ ಸರಣಿಯನ್ನು ಗೆಲ್ಲಲು ದಾಪುಗಾಲಿಟ್ಟಿದೆ. ಮೊದಲ ಪಂದ್ಯದಲ್ಲಿ ವಿಶ್ರಾಂತಿ ಪಡೆದ ಅನೇಕ ಅನುಭವಿ ಆಟಗಾರರು ಎರಡನೇ ಪಂದ್ಯದಲ್ಲಿ ಮರಳುತ್ತಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಪ್ಲೇಯಿಂಗ್ 11ರಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ.

ಟೀಂ ಇಂಡಿಯಾದಲ್ಲಿ ಹಲವು ಪ್ರಮುಖ ಬದಲಾವಣೆಗಳು 

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಎದುರಿಸಿದ್ದ ಹಲವು ಯುವ ಆಟಗಾರರಿಗೆ ಮೊದಲ ಟಿ20 ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿತ್ತು. ಈ ಎಲ್ಲ ಆಟಗಾರರು ಎರಡನೇ ಟಿ20ಯಲ್ಲಿ ಮರಳಲಿದ್ದಾರೆ. ಅದರಲ್ಲೂ ಎಲ್ಲರ ದೃಷ್ಟಿ ಮತ್ತೊಮ್ಮೆ ವಿರಾಟ್ ಕೊಹ್ಲಿಯತ್ತ ನೆಟ್ಟಿದೆ. ಇದಲ್ಲದೆ, ಜಸ್ಪ್ರೀತ್ ಬುಮ್ರಾ, ಮಾರಕ ವಿಕೆಟ್ ಕೀಪರ್ ರಿಷಬ್ ಪಂತ್ ಮತ್ತು ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ ತಂಡಕ್ಕೆ ಮರಳಬಹುದು. ಈ ಆಟಗಾರರಲ್ಲಿ ಪಂತ್ ಮಾತ್ರ ಎರಡನೇ ಟಿ20ಯಿಂದ ಹೊರಗುಳಿಯಲಿದ್ದಾರೆ. ಆದರೆ ಉಳಿದ ಮೂವರು ಆಟಗಾರರು ಪ್ಲೇಯಿಂಗ್ 11 ನಲ್ಲಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ : IND vs ENG : ಟಿ20 ಎರಡನೇ ಮ್ಯಾಚ್ ಗೆ ಬುಮ್ರಾ ರಿಟರ್ನ್ : ಸರಣಿಯಿಂದ ಈ ಬೌಲರ್ ಹೊರಗೆ!

ಹೊರಗುಳಿಯಲಿದ್ದಾರೆ ಈ 3 ಜನ ಆಟಗಾರರು

ಇದೀಗ ಈ ದಿಗ್ಗಜ ಆಟಗಾರರು ಟೀಂ ಇಂಡಿಯಾಗೆ ಮರಳಿದಕ್ಕೆ ಕೆಲ ಆಟಗಾರರು ಪ್ಲೇಯಿಂಗ್ 11 ನಿಂದ ಹೊರಗುಳಿಯುವುದು ಖಚಿತವಾಗಿದೆ. ಅತ್ಯುತ್ತಮ ಫಾರ್ಮ್‌ನಲ್ಲಿರುವ ದೀಪಕ್ ಹೂಡಾ ಬದಲಿಗೆ, ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ, ವಿರಾಟ್ ಗೆ ಈ ಮ್ಯಾಚ್ ತುಂಬಾ ಮುಖ್ಯವಾಗಿದೆ. ಮತ್ತೊಂದೆಡೆ ಅಕ್ಷರ್ ಪಟೇಲ್ ಬದಲಿಗೆ ರವೀಂದ್ರ ಜಡೇಜಾ ಕಣಕ್ಕಿಳಿಯಲಿದ್ದಾರೆ. ಇದಲ್ಲದೇ ಹರ್ಷಲ್ ಪಟೇಲ್ ಬದಲಿಗೆ ಜಸ್ಪ್ರೀತ್ ಬುಮ್ರಾ ಸ್ಥಾನ ತುಂಬಲಿದ್ದಾರೆ. ಈ ಎಲ್ಲಾ ಆಟಗಾರರ ಪ್ರದರ್ಶನವು ಅತ್ಯುತ್ತಮವಾಗಿದೆ, ಆದರೆ ಪ್ಲೇಯಿಂಗ್ 11 ನಲ್ಲಿ ಟೀಂ ಇಂಡಿಯಾದಲ್ಲಿ ಅಗ್ರ ಆಟಗಾರರಿಗೆ ಯಾವಾಗಲೂ ಆದ್ಯತೆ ನೀಡಲಾಗುತ್ತದೆ.

ಟೀಂ ಇಂಡಿಯಾಗೆ ಭರ್ಜರಿ ಗೆಲುವು

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 198 ರನ್ ಗಳಿಸಿತು, ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ 148 ರನ್ ಗಳಿಸಲಷ್ಟೇ ಶಕ್ತವಾಯಿತು ಮತ್ತು ಭಾರತ 50 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದರೊಂದಿಗೆ ಭಾರತ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ 51 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ 19 ಎಸೆತಗಳಲ್ಲಿ 39 ರನ್ ಕೊಡುಗೆ ನೀಡಿದರು.

ಇದನ್ನೂ ಓದಿ : IND vs ENG : ಟಿ20 ಎರಡನೇ ಮ್ಯಾಚ್ ಗೆ ಟೀಂ ಇಂಡಿಯಾ Playing 11 ಲಿಸ್ಟ್

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News