Asia Cup 2023 News : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಏಷ್ಯಾ ಕಪ್ 2023 ರ ಸೂಪರ್ -4 ಪಂದ್ಯ  ಇಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಇಂದು ಮಧ್ಯಾಹ್ನ 3ಗಂಟೆಯಿಂದ ಮ್ಯಾಚ್ ಆರಂಭವಾಗಲಿದೆ. 2023ರ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಈಗಾಗಲೇ ಫೈನಲ್‌ ಪ್ರವೇಶಿಸಿದೆ. 2023ರ ಏಷ್ಯಾಕಪ್‌ನಲ್ಲಿ ಫೈನಲ್ ಸೇರಿದಂತೆ ಭಾರತ ಇನ್ನೂ ಎರಡು ಪಂದ್ಯಗಳನ್ನು ಆಡಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾದ ಬಲಿಷ್ಠ ಓಪನರ್ ಹಾಗೂ ನಾಯಕ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಮುರಿಯುವತ್ತ ಹೆಜ್ಜೆ ಹಾಕುತ್ತಿದ್ದಾರೆ.  


COMMERCIAL BREAK
SCROLL TO CONTINUE READING

ಕ್ರಿಸ್ ಗೇಲ್ ವಿಶ್ವ ದಾಖಲೆಯನ್ನು ಮುರಿಯುವತ್ತ ರೋಹಿತ್ ಶರ್ಮಾ : 
ಟೀಂ ಇಂಡಿಯಾದ ಸ್ಫೋಟಕ ಓಪನರ್ ಹಾಗೂ ನಾಯಕ ರೋಹಿತ್ ಶರ್ಮಾ ಮುಂದಿನ 2 ಪಂದ್ಯಗಳಲ್ಲಿ 9 ಸಿಕ್ಸರ್ ಸಿಡಿಸಿದರೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್ ಮನ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ರೋಹಿತ್ ಶರ್ಮಾ ಇನ್ನೂ 9 ಸಿಕ್ಸರ್‌ಗಳನ್ನು ಬಾರಿಸಿದರೆ, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಒಟ್ಟು 554 ಸಿಕ್ಸರ್‌ಗಳನ್ನು ಪೂರ್ಣಗೊಳಿಸುತ್ತಾರೆ. ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಲ್ಲಿ ಒಟ್ಟು 553 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ ಮುಂದಿನ 2 ಪಂದ್ಯಗಳಲ್ಲಿ 9 ಸಿಕ್ಸರ್ ಬಾರಿಸಿದರೆ, ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ  ಹೊಸ ದಾಖಲೆ ಸೃಷ್ಟಿಸಲಿದ್ದಾರೆ. 


ಇದನ್ನೂ ಓದಿ : Asia Cup 2023 Final: ಟೀಂ ಇಂಡಿಯಾ ಪಾಲಿಗೆ ಡೇರ್ ಡೇವಿಲ್ಸ್ ಆಗ್ತಾರಾ ಲಂಕಾ ನಾಲ್ವರು!


ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ :
1. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) - 553 ಸಿಕ್ಸರ್
2. ರೋಹಿತ್ ಶರ್ಮಾ (ಭಾರತ) - 545 ಸಿಕ್ಸರ್‌ಗಳು
3. ಶಾಹಿದ್ ಅಫ್ರಿದಿ (ಪಾಕಿಸ್ತಾನ) – 476 ಸಿಕ್ಸರ್‌ಗಳು
4. ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್) - 398 ಸಿಕ್ಸರ್‌ಗಳು
5. ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್) - 383 ಸಿಕ್ಸರ್‌ಗಳು
6. ಮಹೇಂದ್ರ ಸಿಂಗ್ ಧೋನಿ (ಭಾರತ) - 359 ಸಿಕ್ಸರ್‌ಗಳು


ವಿಶ್ವದ ಮೊದಲ ಮತ್ತು ಏಕೈಕ ಬ್ಯಾಟ್ಸ್‌ಮನ್ ಆಗಲಿದ್ದಾರೆ :
ರೋಹಿತ್ ಶರ್ಮಾ ಪ್ರಸ್ತುತ ಅಂತರಾಷ್ಟ್ರೀಯ ಕ್ರಿಕೆಟ್‌ನ 448 ಪಂದ್ಯಗಳ 469 ಇನ್ನಿಂಗ್ಸ್‌ಗಳಲ್ಲಿ 545 ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. 2023ರ ಏಷ್ಯಾಕಪ್‌ನಲ್ಲಿ 9 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 554 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೊದಲ ಮತ್ತು ಏಕೈಕ ಬ್ಯಾಟ್ಸ್‌ಮನ್  ಎನಿಸಿಕೊಳ್ಳಲಿದ್ದಾರೆ. ಸದ್ಯ ಭಾರತದ ಶ್ರೇಷ್ಠ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಕೂಡ ಈ ಶ್ರೇಷ್ಠ ದಾಖಲೆಯ ಹತ್ತಿರವೂ ಸುಳಿದಿಲ್ಲ. ವಿರಾಟ್ ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ 282 ಸಿಕ್ಸರ್ ಬಾರಿಸಿದ್ದಾರೆ.


ಇದನ್ನೂ ಓದಿ : World Cup 2023: ವಿಶ್ವಕಪ್ ಟೂರ್ನಿಯಿಂದ ಈ ಭಾರತೀಯ ಬೌಲರ್ ಔಟ್..?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.