ನವದೆಹಲಿ: ನವೆಂಬರ್ 3 ರಿಂದ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟ್ವೆಂಟಿ -20 ಅಂತರರಾಷ್ಟ್ರೀಯ (ಟಿ 20 ಐ) ಸರಣಿಗೆ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾ 15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಪ್ರಕಟಿಸಿದೆ. 



COMMERCIAL BREAK
SCROLL TO CONTINUE READING

ಕೇರಳ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಬಾಂಗ್ಲಾದೇಶ ವಿರುದ್ಧದ ಟಿ 20 ಐ ಸರಣಿಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸ್ಯಾಮ್ಸನ್ ಇತ್ತೀಚೆಗೆ ಗೋವಾ ವಿರುದ್ಧದ ವಿಜಯ್ ಹಜಾರೆ ಟ್ರೋಫಿ 2019 ರಲ್ಲಿ ದ್ವಿಶತಕ ಬಾರಿಸಿದರು. ಆಲ್‌ರೌಂಡರ್ ಶಿವಂ ದುಬೆ ಬಾಂಗ್ಲಾದೇಶ ವಿರುದ್ಧದ ತವರಿನ  ಟಿ 20 ಸರಣಿಗಾಗಿ ತಂಡದಲ್ಲಿ ಮೊದಲ ಬಾರಿಗೆ ಸ್ಥಾನ ಪಡೆದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.



ಬಾಂಗ್ಲಾದೇಶ ವಿರುದ್ಧದ ಟಿ-20 ಸರಣಿಗೆ ಭಾರತದ ತಂಡ: 


ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಾರ), ವಾಷಿಂಗ್ಟನ್ ಸುಂದರ್, ಕ್ರುನಾಲ್ ಪಾಂಡ್ಯ, ಯುಜ್ವೇಂದ್ರ ಚಹಲ್, ರಾಹುಲ್ ಚಹರ್, ದೀಪಕ ಖಲೀಲ್ ಅಹ್ಮದ್, ಶಿವಮ್ ದುಬೆ, ಶಾರ್ದುಲ್ ಠಾಕೂರ್


ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮಾ ವಿಹಾರಿ, ಸಹಾ (ವಾರ), ಆರ್ ಜಡೇಜಾ, ಆರ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್ ಶರ್ಮಾ, ಶುಬ್ಮನ್ ಗಿಲ್, ರಿಷಭ್ ಪಂತ್


ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ 20 ಸರಣಿ ನವೆಂಬರ್ 3 ರಂದು ನವದೆಹಲಿಯಲ್ಲಿ ಪ್ರಾರಂಭವಾಗಲಿದೆ. ಎರಡನೇ ಟಿ20 ನವೆಂಬರ್ 7 ರಂದು ರಾಜ್‌ಕೋಟ್‌ನಲ್ಲಿ ನಡೆಯಲಿದ್ದು, ಮೂರನೇ ಪಂದ್ಯ ನಾಗ್ಪುರದಲ್ಲಿ ನವೆಂಬರ್ 10 ರಂದು ನಡೆಯಲಿದೆ.


ಟೆಸ್ಟ್ ಸರಣಿಯು ನವೆಂಬರ್ 14 ರಿಂದ ಇಂದೋರ್ನಲ್ಲಿ ಪ್ರಾರಂಭವಾಗಲಿದೆ. ಎರಡನೇ ಟೆಸ್ಟ್ ನವೆಂಬರ್ 22 ರಿಂದ ಈಡನ್ ಗಾರ್ಡನ್‌ನಲ್ಲಿ ನಡೆಯಲಿದೆ. ಈ ಸರಣಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಒಂದು ಭಾಗವಾಗಿದೆ. ಈಗಾಗಲೇ ಭಾರತ 240 ಪಾಯಿಂಟ್‌ಗಳೊಂದಿಗೆ ಅಗ್ರಸ್ತಾನದಲ್ಲಿದೆ.