India vs South Africa : ಮುಂಬರುವ ಟಿ20 ವಿಶ್ವಕಪ್‌ಗಾಗಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಟೀಂ ಇಂಡಿಯಾದಲ್ಲಿ ಸ್ತನ ಪಡೆದು ಆಡುತ್ತಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದ ತಂಡ ಈ ಅಂತರಾಷ್ಟ್ರೀಯ ಟೂರ್ನಿಗಾಗಿ ಆಸ್ಟ್ರೇಲಿಯಾ ತಲುಪಿದೆ. ಪಂದ್ಯಾವಳಿಗೆ ಮುಂಚಿತವಾಗಿ ಆಟಗಾರರು ಪರ್ತ್‌ನಲ್ಲಿ ತರಬೇತಿ ಕ್ಯಾಪ್‌ನಲ್ಲಿ ಭಾಗವಹಿಸಿದ್ದಾರೆ. ಇದಾದ ಬಳಿಕ ಕೆಲವು ಅಭ್ಯಾಸ ಪಂದ್ಯಗಳೂ ನಡೆಯಲಿವೆ. ಈ ಮಧ್ಯೆ ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೊ ಇಂದೋರ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಾಗಿದೆ.
ಕಾರ್ತಿಕ್ ಅತ್ಯುತ್ತಮ ಪ್ರದರ್ಶನ, ಆದರೂ ಸೋತ ಭಾರತ
ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯರು 49 ರನ್‌ಗಳಿಂದ ಹೀನಾಯ ಸೋಲು ಅನುಭವಿಸಿತು. ದಕ್ಷಿಣ ಆಫ್ರಿಕಾ ತಂಡ ಮೂರು ವಿಕೆಟ್‌ಗೆ 227 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಇದಾದ ಬಳಿಕ ಭಾರತ ತಂಡ 18.3 ಓವರ್‌ಗಳಲ್ಲಿ 178 ರನ್‌ಗಳಿಗೆ ಆಲೌಟ್ ಆಯಿತು. ದಿನೇಶ್ ಕಾರ್ತಿಕ್ ಖಂಡಿತವಾಗಿಯೂ 46 ರನ್ ಗಳಿಸಲು ಪ್ರಯತ್ನಿಸಿದರು. ಅವರು 219 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದರು. ಕಾರ್ತಿಕ್ ಅವರ 21 ಎಸೆತಗಳ ಇನ್ನಿಂಗ್ಸ್‌ನಲ್ಲಿ ನಾಲ್ಕು ಬೌಂಡರಿ ಮತ್ತು ಅನೇಕ ಸಿಕ್ಸರ್‌ಗಳನ್ನು ಬಾರಿಸಿದರು.
ಇದನ್ನೂ ಓದಿ : T20 WC : ಟೀಂ ಇಂಡಿಯಾಗೆ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಲು ಉತ್ತಮ ಅವಕಾಶ!
ಡಗೌಟ್ ವಿಡಿಯೋ ವೈರಲ್
ಈ ಸೋಲಿನ ಬಳಿಕ ಟೀಂ ಇಂಡಿಯಾ ಡಗೌಟ್ ಆದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾರತದ ಸೋಲಿನ ನಂತರ, ಡಗೌಟ್‌ನಲ್ಲಿದ್ದ ದಿನೇಶ್ ಕಾರ್ತಿಕ್ ಚಪ್ಪಾಳೆ ತಟ್ಟಲು ಪ್ರಾರಂಭಿಸಿದರು. ಇದನ್ನು ನೋಡಿದ, ಕ್ಟಾಪ್ಟನ್ ರೋಹಿತ್ ಶರ್ಮಾ ತಮಾಷೆಯಾಗಿ ದಿನೇಶ್ ಕಾರ್ತಿಕ್ ಬೆನ್ನಿಗೆ ಗುದ್ದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
Bro 😂😂
.@ImRo45 .@DineshKarthik pic.twitter.com/y6W1egfXjx— Manideep 🏹 (@Manideep_Vanga) October 4, 2022
ಟಿ20 ಸರಣಿ ಗೆದ್ದಿದೆ ಟೀಂ ಇಂಡಿಯಾ
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಮೂರು ಪಂದ್ಯಗಳ ಟಿ20ಐ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ. ಸರಣಿಯ ಆರಂಭಿಕ ಎರಡೂ ಟಿ20 ಪಂದ್ಯಗಳನ್ನು ಗೆಲ್ಲುವ ಮೂಲಕ ಆತಿಥೇಯರು ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಿದ್ದಾರೆ. ಇದಕ್ಕೂ ಮುನ್ನ ಆಸ್ಟ್ರೇಲಿಯ ಆತಿಥ್ಯದಲ್ಲಿ ನಡೆದಿದ್ದ ಟಿ20 ಸರಣಿಯಲ್ಲಿ ಆಸ್ಟ್ರೇಲಿಯವನ್ನು ಸೋಲಿಸಿತ್ತು. ಇದೀಗ ಟೀಂ ಇಂಡಿಯಾದ ಕಣ್ಣು ಅಕ್ಟೋಬರ್ 16ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ ಮೇಲೆ ನೆಟ್ಟಿದೆ.
ಇದನ್ನೂ ಓದಿ : India vs South Africa: ಮೂರು ಪ್ರಯತ್ನಗಳ ನಂತರವೂ ಕ್ಯಾಚ್ ಕೈಬಿಟ್ಟ ಮೊಹಮ್ಮದ್ ಸಿರಾಜ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.