IND vs AUS 3rd Test Match: ಬಾರ್ಡರ್ ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದೋರ್‌ನ ಹೋಲ್ಕರ್ ಮೈದಾನದಲ್ಲಿ ಶೀಘ್ರದಲ್ಲೇ ನಡೆಯಲಿದೆ. ಇಂದೋರ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ನಾಯಕ 'ಹಿಟ್‌ಮ್ಯಾನ್' ರೋಹಿತ್ ಶರ್ಮಾ ಭರ್ಜರಿ ದಾಖಲೆ ನಿರ್ಮಿಸುವ ಮೂಲಕ ಇತಿಹಾಸ ನಿರ್ಮಿಸಲಿದ್ದಾರೆ. ಭಾರತದ ಅನುಭವಿ ಬ್ಯಾಟ್ಸ್‌ಮನ್ ಮತ್ತು ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೂಡ ತಮ್ಮ ಇಡೀ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಈ ಶ್ರೇಷ್ಠ ದಾಖಲೆಯನ್ನು ಮಾಡಲು ಸಾಧ್ಯವಾಗಲಿಲ್ಲ. ಇಂದು ಇಂದೋರ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ 'ಹಿಟ್‌ಮ್ಯಾನ್' ರೋಹಿತ್ ಶರ್ಮಾ 45 ರನ್ ಗಳಿಸಿದರೆ ಭಾರತ ಕ್ರಿಕೆಟ್ ಇತಿಹಾಸದಲ್ಲಿ ಅಮೋಘ ಸಾಧನೆ ಮಾಡಲಿದ್ದಾರೆ.
ಈ ದಾಖಲೆಯೊಂದಿಗೆ ಇತಿಹಾಸ ನಿರ್ಮಿಸಲಿದ್ದಾರೆ :
ಇಂದೋರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ 45 ರನ್ ಗಳಿಸಿದರೆ, ನಂತರ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 17,000 ರನ್ ಪೂರ್ಣಗೊಳಿಸುತ್ತಾರೆ. ಭಾರತದ ಪರ ಶ್ರೇಷ್ಠ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ಕೂಡ ತಮ್ಮ ಇಡೀ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಈ ಶ್ರೇಷ್ಠ ದಾಖಲೆ ಮಾಡಲು ಸಾಧ್ಯವಾಗಿಲ್ಲ. ರೋಹಿತ್ ಶರ್ಮಾ ಪ್ರಸ್ತುತ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 16,955 ರನ್ ಗಳಿಸಿದ ದಾಖಲೆ ಹೊಂದಿದ್ದಾರೆ. ರೋಹಿತ್ ಶರ್ಮಾ ಇನ್ನೂ 45 ರನ್ ಗಳಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17,000 ರನ್ ಪೂರೈಸಲಿದ್ದಾರೆ. ಸುನಿಲ್ ಗವಾಸ್ಕರ್ ಅವರು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ 13,214 ರನ್ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ 34,357 ರನ್ ಗಳಿಸಿದ್ದಾರೆ. ಪ್ರಸ್ತುತ ಆಡುತ್ತಿರುವ ಕ್ರಿಕೆಟಿಗರ ಪೈಕಿ ವಿರಾಟ್ ಕೊಹ್ಲಿ 25,012 ಅಂತಾರಾಷ್ಟ್ರೀಯ ರನ್ ಪೂರೈಸಿದ್ದಾರೆ.
ಇದನ್ನೂ ಓದಿ : ಟೀಂ ಇಂಡಿಯಾಗೆ ಮತ್ತೆ ಎಂಟ್ರಿಕೊಡ್ತಾರಾ Rishabh Pant? ಅಪ್ಡೇಟ್ ಹೊರಬರುತ್ತಿದ್ದಂತೆ ಆಘಾತಕ್ಕೊಳಗಾದ ಫ್ಯಾನ್ಸ್!
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ :
1. ಸಚಿನ್ ತೆಂಡೂಲ್ಕರ್ - 34357 ರನ್
2. ವಿರಾಟ್ ಕೊಹ್ಲಿ - 25012 ರನ್
3. ರಾಹುಲ್ ದ್ರಾವಿಡ್ - 24208 ರನ್
4. ಸೌರವ್ ಗಂಗೂಲಿ - 18575 ರನ್
5. ಮಹೇಂದ್ರ ಸಿಂಗ್ ಧೋನಿ - 17266 ರನ್
6. ವೀರೇಂದ್ರ ಸೆಹ್ವಾಗ್ - 17253 ರನ್
7. ರೋಹಿತ್ ಶರ್ಮಾ - 16955 ರನ್
8. ಮೊಹಮ್ಮದ್ ಅಜರುದ್ದೀನ್ - 15593 ರನ್
9. ಸುನಿಲ್ ಗವಾಸ್ಕರ್ - 13214 ರನ್
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು :
1. ಸಚಿನ್ ತೆಂಡೂಲ್ಕರ್ (ಭಾರತ) - 34357 ರನ್
2. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 28016 ರನ್
3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 27483 ರನ್
4. ಮಹೇಲಾ ಜಯವರ್ಧನೆ (ಶ್ರೀಲಂಕಾ) - 25957 ರನ್
5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) - 25534 ರನ್
6. ವಿರಾಟ್ ಕೊಹ್ಲಿ (ಭಾರತ) - 25012 ರನ್
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳು :
1. ಸಚಿನ್ ತೆಂಡೂಲ್ಕರ್ (ಭಾರತ) - 100 ಶತಕಗಳು
2. ವಿರಾಟ್ ಕೊಹ್ಲಿ (ಭಾರತ) - 74 ಶತಕಗಳು
3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 71 ಶತಕಗಳು
4. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 63 ಶತಕಗಳು
5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) - 62 ಶತಕಗಳು
6. ಹಾಶಿಮ್ ಆಮ್ಲಾ (ದಕ್ಷಿಣ ಆಫ್ರಿಕಾ) - 55 ಶತಕಗಳು
ಇದನ್ನೂ ಓದಿ : T20 World Cup 2024: T20 ವಿಶ್ವಕಪ್ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್: ನೇರವಾಗಿ ಅರ್ಹತೆ ಪಡೆದ ಈ 8 ತಂಡಗಳು!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.