Rohit Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಭಿಮಾನಿಯೊಬ್ಬ ವಿಚಿತ್ರ ಪ್ರಶ್ನೆ ಕೇಳಿದ್ದಾನೆ. IPL 2025 ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ, ನೀವು ಯಾವ ತಂಡಕ್ಕೆ ಹೋಗುತ್ತೀರಿ? ಎಂದು ರೋಹಿತ್‌ಗೆ ಕೇಳಿದರು. ನಿನೆಗೆ ನಾನು ಯಾವ ತಂಡ ಸೇರುವುದು ಬೇಕು ಎಂದು ರೋಹಿತ್‌ ಶರ್ಮಾ ಅಭಿಮಾನಿಯನ್ನು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಅಭಿಮಾನಿ ಆರ್‌ಸಿಬಿ ತಂಡದ ಹೆಸರು ಸೂಚಿಸಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. 


COMMERCIAL BREAK
SCROLL TO CONTINUE READING

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ವೇಳೆ ಈ ಘಟನೆ ನಡೆದಿದೆ.ಐಪಿಎಲ್ 2025ರ ಧಾರಣೆಗೆ ಸಂಬಂಧಿಸಿದ ನಿಯಮಗಳನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು ಗೊತ್ತೇ ಇದೆ. ಅಕ್ಟೋಬರ್ 31ರೊಳಗೆ ಉಳಿಸಿಕೊಳ್ಳುವ ಪಟ್ಟಿಯನ್ನು ಪ್ರಕಟಿಸುವಂತೆ ಫ್ರಾಂಚೈಸಿಗಳಿಗೆ ಬಿಸಿಸಿಐ ಸೂಚಿಸಿದೆ. ಐಪಿಎಲ್ 2025 ರ ಮೆಗಾ ಹರಾಜು ನವೆಂಬರ್ 30 ರಂದು ಆಯೋಜಿಸಲಾಗಿದೆ. ಮತ್ತೊಂದೆಡೆ, ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ನಲ್ಲಿ ಮುಂದುವರಿಯುತ್ತಾರಾ? ಇಲ್ಲವಾದಲ್ಲಿ ಬೇರೆ ತಂಡ ಸೇರುತ್ತಾರಾ ಎಂಬುದು ಇದೀಗ ಮಿಲಿಯನ್‌ ಡಾಲರ್‌ ಪ್ರಶ್ನೆ ಆಗಿದೆ.


ರೋಹಿತ್ ಮುಂಬೈ ಇಂಡಿಯನ್ಸ್ ಜೊತೆ ಇರಲು ಒಪ್ಪಿಕೊಂಡಿದ್ದಾರೆ ಮತ್ತು ಅವರೊಂದಿಗೆ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಮುಂಬೈ ಇಂಡಿಯನ್ಸ್ ಉಳಿಸಿಕೊಂಡಿದೆ ಎಂದು ವರದಿಗಳಿವೆ. ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದ್ದಕ್ಕಾಗಿ ರೋಹಿತ್ ಶರ್ಮಾ ಅಸಮಾಧಾನಗೊಂಡಿದ್ದಾರೆ ಮತ್ತು ನಾಯಕತ್ವ ನೀಡುವ ತಂಡವನ್ನು ಸೇರಲು ಪ್ರಯತ್ನಿಸುತ್ತಿದ್ದಾರೆ ಎಂಬ ವರದಿಗಳಿವೆ.


ರೋಹಿತ್ ಶರ್ಮಾ ಹರಾಜಿಗೆ ಬಂದರೆ ದಾಖಲೆಯ ಬೆಲೆ ಬರಲಿದೆ ಎಂಬುದು ಕ್ರಿಕೆಟ್ ವಿಶ್ಲೇಷಕರ ಅಭಿಪ್ರಾಯ. ರೋಹಿತ್ ಶರ್ಮಾ ಹರಾಜಿಗೆ ಬಂದರೆ RCB ಜೊತೆಗೆ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಖರೀದಿಸಲು ಸಿದ್ಧವಾಗಿವೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.