ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ! ರಿಕಿ ಪಾಂಟಿಂಗ್ ನ ಈ ಬೃಹತ್ ದಾಖಲೆ ಮುರಿದ ರೋಹಿತ್ ಶರ್ಮಾ
Rohit Sharma Most Sixes Records:ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ದಿನ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 2 ಸಿಕ್ಸರ್ ಬಾರಿಸುವ ಮೂಲಕ 80 ರನ್ ಗಳಿಸಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆದಿದ್ದಾರೆ.
Rohit Sharma Most Sixes Records : ಪೋರ್ಟ್ ಆಫ್ ಸ್ಪೇನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ಮತ್ತು ಸ್ಫೋಟಕ ಆರಂಭಿಕ ರೋಹಿತ್ ಶರ್ಮಾ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಹೊಡೆತದಲ್ಲಿ ರಿಕಿ ಪಾಂಟಿಂಗ್ ದಾಖಲೆಯನ್ನು ಬದಿಗೊತ್ತಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ದಿನ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 2 ಸಿಕ್ಸರ್ ಬಾರಿಸುವ ಮೂಲಕ 80 ರನ್ ಗಳಿಸಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆದಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಇತಿಹಾಸ ಬರೆದ ರೋಹಿತ್ ಶರ್ಮಾ :
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ದಿನ, ರೋಹಿತ್ ಶರ್ಮಾ ಎರಡು ಸಿಕ್ಸರ್ ಬಾರಿಸಿದ ತಕ್ಷಣ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ಶ್ರೇಷ್ಠ ದಾಖಲೆಯನ್ನು ಮುರಿದಿದ್ದಾರೆ. ಪೋರ್ಟ್ ಆಫ್ ಸ್ಪೇನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ದಿನದಲ್ಲಿ ರೋಹಿತ್ ಶರ್ಮಾ ಎರಡು ಸಿಕ್ಸರ್ ಬಾರಿಸಿದ ತಕ್ಷಣ ಟೆಸ್ಟ್ ಕ್ರಿಕೆಟ್‌ನಲ್ಲಿ 74 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಟೆಸ್ಟ್ ಮಾದರಿಯಲ್ಲಿ ಸಿಕ್ಸರ್ ಸಿಡಿಸಿದ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ರೋಹಿತ್ ಶರ್ಮಾ ಬದಿಗಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 73 ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ರಿಕಿ ಪಾಂಟಿಂಗ್ ಹೊಂದಿದ್ದರು.
ಇದನ್ನೂ ಓದಿ : ICC World Cup 2023: ಐಸಿಸಿ ವಿಶ್ವಕಪ್ ಬ್ರಾಂಡ್ ಅಂಬಾಸಿಡರ್ ಆಗಿ ಶಾರುಖ್ ಖಾನ್ ನೇಮಕ
ಒಂದೇ ಹೊಡೆತದಲ್ಲಿ ರಿಕಿ ಪಾಂಟಿಂಗ್ ಬೃಹತ್ ದಾಖಲೆ ಬ್ರೇಕ್ :
ಟೆಸ್ಟ್ ಕ್ರಿಕೆಟ್‌ನಲ್ಲಿ 74 ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ಇದೀಗ ರೋಹಿತ್ ಶರ್ಮಾ ದಾಖಲಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್‌ನ ಆಲ್‌ರೌಂಡರ್ ಮತ್ತು ನಾಯಕ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. ಬೆನ್ ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್‌ನಲ್ಲಿ 123 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವ ದಾಖಲೆಯನ್ನು ಕ್ರಿಸ್ ಗೇಲ್ ಹೊಂದಿದ್ದಾರೆ. ಕ್ರಿಸ್ ಗೇಲ್ 553 ಸಿಕ್ಸರ್ ಬಾರಿಸಿದ್ದಾರೆ. ಕ್ರಿಸ್ ಗೇಲ್ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ. ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 530 ಸಿಕ್ಸರ್ ಬಾರಿಸಿದ ದಾಖಲೆ ಹೊಂದಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ :
123 ಸಿಕ್ಸರ್‌ಗಳು - ಬೆನ್ ಸ್ಟೋಕ್ಸ್ (ಇಂಗ್ಲೆಂಡ್)
107 ಸಿಕ್ಸರ್‌ಗಳು - ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್)
100 ಸಿಕ್ಸರ್‌ಗಳು - ಆಡಮ್ ಗಿಲ್‌ಕ್ರಿಸ್ಟ್ (ಆಸ್ಟ್ರೇಲಿಯಾ)
98 ಸಿಕ್ಸರ್‌ಗಳು - ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್)
97 ಸಿಕ್ಸರ್‌ಗಳು - ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ)
91 ಸಿಕ್ಸರ್‌ಗಳು - ವೀರೇಂದ್ರ ಸೆಹ್ವಾಗ್ (ಭಾರತ)
88 ಸಿಕ್ಸರ್‌ಗಳು - ಬ್ರಿಯಾನ್ ಲಾರಾ (ವೆಸ್ಟ್ ಇಂಡೀಸ್)
87 ಸಿಕ್ಸರ್‌ಗಳು - ಕ್ರಿಸ್ ಕ್ರೇನ್ಸ್ (ನ್ಯೂಜಿಲೆಂಡ್)
84 ಸಿಕ್ಸರ್‌ಗಳು - ವಿವ್ ರಿಚರ್ಡ್ಸ್ (ವೆಸ್ಟ್ ಇಂಡೀಸ್)
83 ಸಿಕ್ಸರ್‌ಗಳು - ಟಿಮ್ ಸೌಥಿ (ನ್ಯೂಜಿಲೆಂಡ್)
82 ಸಿಕ್ಸರ್‌ಗಳು - ಆಂಡ್ರ್ಯೂ ಫ್ಲಿಂಟಾಫ್ (ಇಂಗ್ಲೆಂಡ್)
82 ಸಿಕ್ಸರ್‌ಗಳು - ಮ್ಯಾಥ್ಯೂ ಹೇಡನ್ (ಆಸ್ಟ್ರೇಲಿಯಾ)
81 ಸಿಕ್ಸರ್‌ಗಳು - ಮಿಸ್ಬಾ-ಉಲ್-ಹಕ್ (ಪಾಕಿಸ್ತಾನ)
81 ಸಿಕ್ಸರ್‌ಗಳು - ಕೆವಿನ್ ಪೀಟರ್ಸನ್ (ಇಂಗ್ಲೆಂಡ್)
80 ಸಿಕ್ಸರ್‌ಗಳು - ಏಂಜೆಲೊ ಮ್ಯಾಥ್ಯೂಸ್ (ಶ್ರೀಲಂಕಾ)
78 ಸಿಕ್ಸರ್‌ಗಳು - ಮಹೇಂದ್ರ ಸಿಂಗ್ ಧೋನಿ (ಭಾರತ)
74 ಸಿಕ್ಸರ್‌ಗಳು - ರೋಹಿತ್ ಶರ್ಮಾ (ಭಾರತ)
73 ಸಿಕ್ಸರ್‌ಗಳು - ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ)
ಇದನ್ನೂ ಓದಿ : ಟೆಸ್ಟ್ ಕ್ರಿಕೆಟ್‌ನಲ್ಲಿ ದ್ವಿ ಶತಕಕ್ಕೆ ಒಂದು ರನ್ ಬಾಕಿ ಇರುವಾಗಲೇ ಔಟ್ ಆದ ಬ್ಯಾಟ್ಸ್ಮನ್ ಗಳಲ್ಲಿ ಈ ಕನ್ನಡಿಗನೂ ಇದ್ದಾನೆ!
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ :
553 ಸಿಕ್ಸರ್‌ಗಳು - ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್)
530 ಸಿಕ್ಸರ್‌ಗಳು - ರೋಹಿತ್ ಶರ್ಮಾ (ಭಾರತ)
476 ಸಿಕ್ಸರ್‌ಗಳು - ಶಾಹಿದ್ ಅಫ್ರಿದಿ (ಪಾಕಿಸ್ತಾನ)
398 ಸಿಕ್ಸರ್‌ಗಳು - ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್)
383 ಸಿಕ್ಸರ್‌ಗಳು - ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್)
359 ಸಿಕ್ಸರ್‌ಗಳು - ಮಹೇಂದ್ರ ಸಿಂಗ್ ಧೋನಿ (ಭಾರತ)
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ :
530 ಸಿಕ್ಸರ್‌ಗಳು - ರೋಹಿತ್ ಶರ್ಮಾ
359 ಸಿಕ್ಸರ್‌ಗಳು - ಮಹೇಂದ್ರ ಸಿಂಗ್ ಧೋನಿ
279 ಸಿಕ್ಸರ್‌ಗಳು - ವಿರಾಟ್ ಕೊಹ್ಲಿ
264 ಸಿಕ್ಸರ್‌ಗಳು - ಸಚಿನ್ ತೆಂಡೂಲ್ಕರ್
251 ಸಿಕ್ಸರ್‌ಗಳು - ಯುವರಾಜ್ ಸಿಂಗ್
247 ಸಿಕ್ಸರ್‌ಗಳು - ಸೌರವ್ ಗಂಗೂಲಿ
243 ಸಿಕ್ಸರ್‌ಗಳು - ವೀರೇಂದ್ರ ಸೆಹ್ವಾಗ್
ಇದನ್ನೂ ಓದಿ : Asia Cup schedule: 15 ದಿನಗಳಲ್ಲಿ ಭಾರತ-ಪಾಕ್ 3 ಬಾರಿ ಮುಖಾಮುಖಿ ಸಾಧ್ಯತೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.