IPL 2025: ನಿರ್ಣಾಯಕ ಪಂದ್ಯಕ್ಕೂ ಮುನ್ನವೇ ಅಗ್ರಸ್ಥಾನಕ್ಕೇರಿದ RCB: ಹೊಸ ದಾಖಲೆ ಬರೆದ ರೆಡ್‌ ಆರ್ಮಿ!!

Fans followers in ipl team: ಐದು ಬಾರಿ ಚಾಂಪಿಯನ್ ಆಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇನ್‌ಸ್ಟಾಗ್ರಾಮ್‌ನಲ್ಲಿ 1.86 ಕೋಟಿ ಮಿಲಿಯನ್ ಫಾಲೋವರ್ಸ್‌ನೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ತಂಡವು 1.8 ಕೋಟಿ ಫಾಲೋವರ್ಸ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

Written by - Puttaraj K Alur | Last Updated : May 27, 2025, 06:27 PM IST
  • ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಫಾಲೋವರ್ಸ್‌ಗಳ ಸಂಖ್ಯೆ 2 ಕೋಟಿ ತಲುಪಿದೆ
  • ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇನ್‌ಸ್ಟಾಗ್ರಾಮ್‌ನಲ್ಲಿ 1.86 ಕೋಟಿ ಫಾಲೋವರ್ಸ್‌ ಹೊಂದಿದೆ
  • ಮುಂಬೈ ಇಂಡಿಯನ್ಸ್ ತಂಡವು 1.8 ಕೋಟಿ ಫಾಲೋವರ್ಸ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ
IPL 2025: ನಿರ್ಣಾಯಕ ಪಂದ್ಯಕ್ಕೂ ಮುನ್ನವೇ ಅಗ್ರಸ್ಥಾನಕ್ಕೇರಿದ RCB: ಹೊಸ ದಾಖಲೆ ಬರೆದ ರೆಡ್‌ ಆರ್ಮಿ!!

Indian Premier League 2025: ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಯ ಕೊನೆಯ ಲೀಗ್ ಪಂದ್ಯ ಇಂದು ನಡೆಯಲಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಇಂದು ಲಖನೌ ಸೂಪ‌ರ್ ಜೈಂಟ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಸೋಮವಾರ ನಡೆದ ಪಂದ್ಯದಲ್ಲಿ ಮುಂಬೈ ಮಣಿಸುವ ಮೂಲಕ ಪಂಜಾಬ್‌ ತಂಡವು ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಸೋತ ಹಾರ್ದಿಕ್‌ ಪಾಂಡ್ಯ ಪಡೆ ೪ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಪ್ಲೇಅಫ್‌ ಪ್ರವೇಶಿಸಿದೆ. 18 ಅಂಕಗಳನ್ನ ಹೊಂದಿರುವ ಗುಜರಾತ್‌ ಟೈಟಾನ್ಸ್‌ ಪಾಯಿಂಟ್ಸ್‌ ಪಟ್ಟಿಯಲ್ಲಿ ೨ನೇ ಸ್ಥಾನದಲ್ಲಿದೆ. ಇಂದು ಲಕ್ನೋ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿದೆ ಅಂಕಪಟ್ಟಿಯಲ್ಲಿ ೨ನೇ ಸ್ಥಾನಕ್ಕೇರಲಿದ್ದು, ಕ್ಯಾಲಿಫೈಯರ್‌ಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಆರ್‌ಸಿಬಿ ತಂಡಕ್ಕೆ ಇಂದಿನ ಪಂದ್ಯವು ತುಂಬಾ ಮಹತ್ವದ್ದಾಗಿದೆ. 

Add Zee News as a Preferred Source

ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆಯುವ ದೃಷ್ಟಿಯಿಂದ ಇಂದಿನ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಆರ್‌ಸಿಬಿ ತಂಡವು ಇದುವರೆಗೆ ಒಂದೂ ಬಾರಿಯೂ ಕಪ್ ಗೆದ್ದಿಲ್ಲ. ಆದರೆ ಪ್ರತಿಬಾರಿಯೂ ಆರ್‌ಸಿಬಿ ಅಭಿಮಾನಿಗಳು ʼಈ ಸಲ ಕಪ್‌ ನಮ್ದೆʼ ಅನ್ನೋ ಘೋಷಣೆ ಕೂಗುವುದನ್ನ ನಿಲ್ಲಿಸಿಲ್ಲ. ಈ ಬಾರಿ ಮತ್ತೆ ಆರ್‌ಸಿಬಿ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಆದರೆ ಇಂದಿನ ಪಂದ್ಯದಲ್ಲಿ ಲಕ್ನೋ ವಿರುದ್ಧ ಗೆದ್ದರೆ ಮೊದಲ ಕ್ಯಾಲಿಫೈಯರ್‌ಗೆ ಆರ್‌ಸಿಬಿ ಅರ್ಹತೆ ಪಡೆಯಲಿದೆ. ಈ ಸಲ ಟ್ರೋಫಿ ಗೆಲ್ಲುವ ಫೆವರೀಟ್ ತಂಡಗಳಲ್ಲಿ ಆರ್‌ಸಿಬಿ ಕೂಡ ಒಂದಾಗಿದ್ದು, ತಂಡದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಇದನ್ನೂ ಓದಿ: 1 ರನ್, 1 ವೈಡ್ ಹೀಗೆ ಒಟ್ಟು 2 ರನ್‌ಗೆ ಆಲೌಟ್! ಕ್ರಿಕೆಟ್ ಇತಿಹಾಸದ ಅತ್ಯಂತ ಅದ್ಭುತ ಪಂದ್ಯ, ಶೂನ್ಯಕ್ಕೆ ಔಟಾದ 8 ಬ್ಯಾಟ್ಸ್‌ಮನ್‌ಗಳು!

ಈ ಎಲ್ಲದರ ಮಧ್ಯೆ ಪ್ಲೇಆಫ್ ಪಂದ್ಯಗಳಿಗೂ ಮುಂಚಿತವಾಗಿ ಬೆಂಗಳೂರು ತಂಡವು ಹೊಸದೊಂದು ದಾಖಲೆ ನಿರ್ಮಿಸಿದೆ. ಇದರೊಂದಿಗೆ ಈ ಸಾಧನೆ ಮಾಡಿದ ಮೊದಲ ಐಪಿಎಲ್ ಫ್ರಾಂಚೈಸಿ ಅನ್ನೋ ಹೆಗ್ಗಳಿಕೆ ಪಡೆದಿದೆ. ಹೌದು, ಆರ್‌ಸಿಬಿ ಇನ್‌ಸ್ಟಾಗ್ರಾಮ್‌ನಲ್ಲಿ ಅತಿಹೆಚ್ಚು ಫ್ಯಾನ್ಸ್‌ ಫಾಲೋವರ್ಸ್‌ ಹೊಂದಿರುವ ತಂಡವಾಗಿ ದಾಖಲೆ ಬರೆದಿದೆ. ಈ ಮೂಲಕ ಐದು ಬಾರಿ ಚಾಂಪಿಯನ್ಸ್ ತಂಡಗಳಾದ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನ ಹಿಂದಿಕ್ಕಿದೆ. ತಂಡದ ಸ್ಟಾರ್ ಆಟಗಾರರು ವಿಶೇಷವಾಗಿ ರನ್‌ ಮಷಿನ್‌ ಖ್ಯಾತಿಯ ವಿರಾಟ್ ಕೊಹ್ಲಿಯ ಜನಪ್ರಿಯತೆಯು ತಂಡದ ಫಾಲೋವರ್ಸ್‌ಗಳ ಹೆಚ್ಚಳಕ್ಕೆ ಕಾರಣವಾಗಿದೆ.

ಐದು ಬಾರಿ ಚಾಂಪಿಯನ್ ಆಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇನ್‌ಸ್ಟಾಗ್ರಾಮ್‌ನಲ್ಲಿ 1.86 ಕೋಟಿ ಫಾಲೋವರ್ಸ್‌ನೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ತಂಡವು 1.8 ಕೋಟಿ ಫಾಲೋವರ್ಸ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಆದರೆ ಒಂದೇ ಒಂದು ಬಾರಿ ಕಪ್ ಗೆಲ್ಲದ ಆರ್‌ಸಿಬಿ ಈ ಎರಡೂ ತಂಡಗಳ ದಾಖಲೆಯನ್ನ ಧೂಳಿಪಟ ಮಾಡಿದ್ದು, ಅಗ್ರಸ್ಥಾನ ತಲುಪಿದೆ. ಇದೀಗ ಆರ್‌ಸಿಬಿ ತಂಡದ ಫಾಲೋವರ್ಸ್‌ಗಳ ಸಂಖ್ಯೆ 2 ಕೋಟಿ ತಲುಪಿದೆ.

ಇದನ್ನೂ ಓದಿ: PBKS vs MI: ಮುಂಬೈ ಮಣಿಸಿ ಅಗ್ರಸ್ಥಾನಕ್ಕೇರಿದ ಪಂಜಾಬ್‌; ಆರ್‌ಸಿಬಿ ಹಾದಿ ಮತ್ತಷ್ಟು ಸುಲಭ..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News