ಮುಂಬೈ: ಇಲ್ಲಿನ ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಏಳು ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಕೊಲ್ಕತ್ತಾ ತಂಡವು ರಾಜಸ್ಥಾನ ರಾಯಲ್ಸ್ ತಂಡವನ್ನು ಕನಿಷ್ಠ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ವಿಫಲವಾಯಿತು.ಮೊದಲ ಬ್ಯಾಟಿಂಗ್ ಅವಕಾಶ ಪಡೆದ ರಾಜಸ್ಥಾನ ತಂಡವು ಭರ್ಜರಿ ಆರಂಭವನ್ನೇ ಪಡೆಯಿತು. ಜೋಸ್ ಬಟ್ಲರ್ ಕೇವಲ 61 ಎಸೆತಗಳಲ್ಲಿ ಒಂಬತ್ತು ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ 103 ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.ಇವರಿಗೆ ಸಾಥ್ ನೀಡಿದ ಪಡಿಕ್ಕಲ್ 24 ರನ್ ಗಳಿಸಿದರು.
ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಹಾಗೂ ಹೆತ್ಮಾರ್ ಕ್ರಮವಾಗಿ 38, ಹಾಗೂ 26 ರನ್ ಗಳನ್ನು ಗಳಿಸುವ ಮೂಲಕ ತಂಡದ ಮೊತ್ತ 200 ರ ಗಡಿ ದಾಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಕೊನೆಗೆ ರಾಜಸ್ಥಾನ ರಾಯಲ್ಸ್ ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು.ಕೋಲ್ಕತ್ತಾ ಪರವಾಗಿ ನರೈನ್ ಅವರು ಎರಡು ವಿಕೆಟ್ ಗಳನ್ನು ಪಡೆಯುವ ಮೂಲಕ ಯಶಸ್ವಿ ಬೌಲರ್ ಎನಿಸಿದರು.
After an absolute thriller of a Match 3⃣0⃣ in the #TATAIPL 2022, here's how the Points Table looks 🔽 #RRvKKR pic.twitter.com/K5e3L9edGP
— IndianPremierLeague (@IPL) April 18, 2022
ರಾಜಸ್ಥಾನ ರಾಯಲ್ಸ್ ತಂಡವು ನೀಡಿದ ಈ 218 ರನ್ ಗಳ ಬೃಹತ್ ಗೆಲುವಿನ ಗುರಿಯನ್ನು ಬೆನ್ನತ್ತಿದ ಕೋಲ್ಕತ್ತಾ ತಂಡಕ್ಕೆ ಆರಂಭದಲ್ಲಿಯೇ ಸುನಿಲ್ ನರೈನ್ ಅವರು ರನ್ ಔಟ್ ಆಗಿದ್ದರಿಂದ ತೀವ್ರ ಆಘಾತವನ್ನು ಎದುರಿಸಿತು. ಈ ಹಂತದಲ್ಲಿ ಜೊತೆಗೂಡಿದ ಆರನ್ ಪಿಂಚ್ ಕೇವಲ 28 ಎಸೆತಗಳಲ್ಲಿ ಒಂಬತ್ತು ಬೌಂಡರಿ ಹಾಗೂ ಎರಡು ಸಿಕ್ಸರ್ ಗಳ ನೆರವಿನಿಂದ 58 ರನ್ ಗಳಿಗೆ ವಿಕೆಟ್ ಒಪ್ಪಿಸಿದರು.ಇನ್ನೊಂದೆಡೆಗೆ ಸ್ಪೋಟಕ ಬ್ಯಾಟಿಂಗ್ ಮಾಡಿದ ನಾಯಕ ಶ್ರೇಯಸ್ ಅಯ್ಯರ್ ಅವರು ಏಳು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಗಳ ನೆರವಿನಿಂದ ಕೇವಲ 51 ಎಸೆತಗಳಲ್ಲಿ 85 ರನ್ ಗಳನ್ನು ಗಳಿಸಿದರು.
With a hat-trick & a match-winning five-wicket haul against his name, @yuzi_chahal bagged the Player of the Match award as @rajasthanroyals beat #KKR. 👌 👌 #TATAIPL | #RRvKKR
Scorecard ▶️ https://t.co/f4zhSrBNHi pic.twitter.com/q7Bfnjyegm
— IndianPremierLeague (@IPL) April 18, 2022
ಈ ಇಬ್ಬರು ಆಟಗಾರರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಕೋಲ್ಕತ್ತಾ ತಂಡದ ಗೆಲುವಿನ ಆಸೆ ಚಿಗುರಿತ್ತಾದರೂ ಸಹಿತ 17 ನೇ ಓವರ್ ನಲ್ಲಿ ಯುಜುವೆಂದ್ರ ಚಹಾಲ್ ತಮ್ಮ ಬೌಲಿಂಗ್ ಕೈಚಳಕದಿಂದ ಪಂದ್ಯದ ಚಿತ್ರಣವನ್ನೇ ಬದಲಿಸಿದರು ಎಂದು ಹೇಳಬಹುದು. ಆ ಓವರ್ ನಲ್ಲಿ ಚಹಾಲ್ ಶ್ರೇಯಸ್ ಅಯ್ಯರ್, ಶಿವಂ ದುಬೆ, ಹಾಗೂ ಪ್ಯಾಟ್ ಕಮಿನ್ಸ್ ಅವರ ವಿಕೆಟ್ ಕಬಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು.ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಅಂಕಪಟ್ಟಿಯಲ್ಲಿ 8 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ತಲುಪಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.