ಮುಂಬೈ: ಇಲ್ಲಿನ ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಏಳು ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.


COMMERCIAL BREAK
SCROLL TO CONTINUE READING

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಕೊಲ್ಕತ್ತಾ ತಂಡವು ರಾಜಸ್ಥಾನ ರಾಯಲ್ಸ್ ತಂಡವನ್ನು ಕನಿಷ್ಠ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ವಿಫಲವಾಯಿತು.ಮೊದಲ ಬ್ಯಾಟಿಂಗ್ ಅವಕಾಶ ಪಡೆದ ರಾಜಸ್ಥಾನ ತಂಡವು ಭರ್ಜರಿ ಆರಂಭವನ್ನೇ ಪಡೆಯಿತು. ಜೋಸ್ ಬಟ್ಲರ್ ಕೇವಲ 61 ಎಸೆತಗಳಲ್ಲಿ ಒಂಬತ್ತು ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ 103 ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.ಇವರಿಗೆ ಸಾಥ್ ನೀಡಿದ ಪಡಿಕ್ಕಲ್ 24 ರನ್ ಗಳಿಸಿದರು.


ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಹಾಗೂ ಹೆತ್ಮಾರ್ ಕ್ರಮವಾಗಿ 38, ಹಾಗೂ 26 ರನ್ ಗಳನ್ನು ಗಳಿಸುವ ಮೂಲಕ ತಂಡದ ಮೊತ್ತ 200 ರ ಗಡಿ ದಾಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಕೊನೆಗೆ ರಾಜಸ್ಥಾನ ರಾಯಲ್ಸ್ ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು.ಕೋಲ್ಕತ್ತಾ ಪರವಾಗಿ ನರೈನ್ ಅವರು ಎರಡು ವಿಕೆಟ್ ಗಳನ್ನು ಪಡೆಯುವ ಮೂಲಕ ಯಶಸ್ವಿ ಬೌಲರ್ ಎನಿಸಿದರು.


ಕೋಲ್ಕತ್ತಾ ತಂಡದ ಗೆಲುವಿನ ಆಸೆ ಚಿಗುರಿತ್ತಾದರೂ ಸಹಿತ 17 ನೇ ಓವರ್ ನಲ್ಲಿ ಯುಜುವೆಂದ್ರ ಚಹಾಲ್ ತಮ್ಮ ಬೌಲಿಂಗ್ ಕೈಚಳಕದಿಂದ ಪಂದ್ಯದ ಚಿತ್ರಣವನ್ನೇ ಬದಲಿಸಿದರು ಎಂದು ಹೇಳಬಹುದು. ಆ ಓವರ್ ನಲ್ಲಿ ಚಹಾಲ್ ಶ್ರೇಯಸ್ ಅಯ್ಯರ್, ಶಿವಂ ದುಬೆ, ಹಾಗೂ ಪ್ಯಾಟ್ ಕಮಿನ್ಸ್ ಅವರ ವಿಕೆಟ್ ಕಬಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು.ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಅಂಕಪಟ್ಟಿಯಲ್ಲಿ 8 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ತಲುಪಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.