RR vs RCB, IPL 2025: ಸಾಲ್ಟ್‌ & ಕೊಹ್ಲಿ ಭರ್ಜರಿ ಅರ್ಧಶತಕ, ರಾಜಸ್ಥಾನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಆರ್‌ಸಿಬಿ!!

RR vs RCB: ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 173 ರನ್‌ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಟಾರ್ಗೆಟ್‌ ಬೆನ್ನತ್ತಿದ ಆರ್‌ಸಿಬಿ 17.3 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು

Written by - Puttaraj K Alur | Last Updated : Apr 13, 2025, 07:38 PM IST
  • ಫಿಲ್‌ ಸಾಲ್ಟ್‌ & ವಿರಾಟ್‌ ಕೊಹ್ಲಿ ಭರ್ಜರಿ ಅರ್ಧಶತಕ
  • ರಾಜಸ್ಥಾನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಆರ್‌ಸಿಬಿ!!
  • ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಮಿಂಚಿದ ರೆಡ್‌ ಆರ್ಮಿ
RR vs RCB, IPL 2025: ಸಾಲ್ಟ್‌ & ಕೊಹ್ಲಿ ಭರ್ಜರಿ ಅರ್ಧಶತಕ, ರಾಜಸ್ಥಾನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಆರ್‌ಸಿಬಿ!!

Indian Premier League 2025: ಫಿಲ್‌ ಸಾಲ್ಟ್‌ ಮತ್ತು ವಿರಾಟ್‌ ಕೊಹ್ಲಿ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 18ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ 28ನೇ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕ ರಜತ್‌ ಪಾಟೀದಾರ್‌ ಫೀಲ್ಡಿಂಗ್‌ ಆಯ್ದುಕೊಂಡಿದ್ದರು.

Add Zee News as a Preferred Source

ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 173 ರನ್‌ ಗಳಿಸಿತ್ತು. ಈ ಟಾರ್ಗೆಟ್‌ ಬೆನ್ನತ್ತಿದ ಆರ್‌ಸಿಬಿ 17.3 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು. ಆಡಿದ ಆರು ಪಂದ್ಯಗಳಲ್ಲಿ 4 ಜಯ, 2 ಸೋಲು ಕಂಡಿರುವ ಆರ್‌ಸಿಬಿ 8 ಅಂಕ ಕಲೆ ಹಾಕಿದೆ. ಈ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. 

ಇದನ್ನೂ ಓದಿ: ಗಂಡಿಂದ ಸುಂದರ ಹೆಣ್ಣಾಗಿ ಬದಲಾದ ಸ್ಟಾರ್ ಕ್ರಿಕೆಟಿಗನ ಮಗ..! ಫೋಟೋಸ್‌ ನೋಡಿ "ಸಖತ್‌ ಹಾಟ್‌" ಎಂದು ನೆಟಿಜನ್ಸ್‌..

ಸಾಲ್ಟ್‌ & ಕೊಹ್ಲಿ ಅಬ್ಬರ!!

ರಾಜಸ್ಥಾನ್‌ ವಿರುದ್ಧ ಇಂದು ಆರಂಭಿಕರಾಗಿ ಕಣಕ್ಕಿಳಿದ ಫಿಲ್‌ ಸಾಲ್ಟ್‌ ಮತ್ತು ವಿರಾಟ್‌ ಕೊಹ್ಲಿ ಅಬ್ಬರ ಬ್ಯಾಟಿಂಗ್‌ ಪ್ರದರ್ಶಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 92 ರನ್‌ಗಳ ಅದ್ಭುತ ಜೊತೆಯಾಟವಾಡಿತು. ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದ ಸಾಲ್ಟ್‌ 33 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಸಿಕ್ಸತ್‌ ಸಹಿತ 65 ರನ್‌ ಗಳಿಸಿ ಭರ್ಜರಿ ಅರ್ಧಶತಕ ಸಿಡಿಸಿದರು. 

ಅದ್ಭುತ ಪ್ರದರ್ಶನ ನೀಡಿದ ವಿರಾಟ್‌ ಕೊಹ್ಲಿ ಅಜೇಯ ಅರ್ಧಶಕತ ಗಳಿಸಿದರು. 45 ಎಸೆತಗಳಲ್ಲಿ ಅವರು 4 ಬೌಂಡರಿ ಮತ್ತು 2 ಸಿಕ್ಸರ್‌ ಸಹಿತ 62 ರನ್‌ ಗಳಿಸಿದರು. ದೇವದತ್‌ ಪಡಿಕ್ಕಲ್‌ ಕೂಡ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 28 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್‌ ಇದ್ದ ಅಜೇಯ 40 ರನ್‌ ಗಳಿಸಿದರು. ಕೊಹ್ಲಿ-ಪಡಿಕ್ಕಲ್‌ 2ನೇ ವಿಕೆಟ್‌ಗೆ ಮುರಿಯದ 83 ರನ್‌ಗಳ ಜೊತೆಯಾಟವಾಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ರಾಜಸ್ಥಾನ ಪರ ಕುಮಾರ್ ಕಾರ್ತಿಕೇಯ ಏಕೈಕ ವಿಕೆಟ್‌ ಪಡೆದರು. 

ಇದನ್ನೂ ಓದಿ: IPL 2025: ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ರೋಚಕ ಕದನಕ್ಕೆ ಸಜ್ಜು.!

ಯಶಸ್ವಿ ಜೈಸ್ವಾಲ್‌ ಭರ್ಜರಿ ಅರ್ಧಶತಕ!

ಇದಕ್ಕೂ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ಪರ ನಾಯಕ ಸಂಜು ಸ್ಯಾಮ್ಸನ್‌ (15) ಬಹುಬೇಗನೇ ವಿಕೆಟ್‌ ಒಪ್ಪಿಸಿದರು. ಆದರೆ ಸ್ಫೋಟಕ ಆಟವಾಡಿದ ಯಶಸ್ವಿ ಜೈಸ್ವಾಲ್‌ ಭರ್ಜರಿ ಅರ್ಧಶತಕ ಸಿಡಿಸಿದರು. 47 ಎಸೆತಗಳಲ್ಲಿ ಅವರು 10 ಬೌಂಡರಿ ಮತ್ತು 2 ಸಿಕ್ಸರ್‌ ಇದ್ದ 75 ರನ್‌ ಗಳಿಸಿದರು. ಇನ್ನುಳಿದಂತೆ ರಿಯಾನ್‌ ಪರಾಗ್‌ (30) ಮತ್ತು ಧ್ರುವ್ ಜುರೆಲ್ (35) ರನ್‌ ಗಳಿಸಿದರು. ಆರ್‌ಸಿಬಿ ಪರ ಬೌಲಿಂಗ್‌ನಲ್ಲಿ ಭುವನೇಶ್ವರ್‌ ಕುಮಾರ್‌, ಕೃನಾಲ್‌ ಪಾಂಡ್ಯ, ಜೋಶ್ ಹ್ಯಾಜಲ್‌ವುಡ್ ಮತ್ತು ಯಶ್‌ ದಯಾಳ್‌ ತಲಾ ಒಂದೊಂದು ವಿಕೆಟ್‌ ಪಡೆದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News