Asian Games 2018: ಕಬಡ್ಡಿಯಲ್ಲಿ ಬೆಳ್ಳಿ ಗೆದ್ದ ಉಷಾರಾಣಿ 15 ಲಕ್ಷ ರೂ. ಚೆಕ್ ವಿತರಣೆ

ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್ ಆಗಿದ್ದ ಉಷಾರಾಣಿ ಅವರು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ.

Last Updated : Aug 28, 2018, 10:34 AM IST
Asian Games 2018: ಕಬಡ್ಡಿಯಲ್ಲಿ ಬೆಳ್ಳಿ ಗೆದ್ದ ಉಷಾರಾಣಿ 15 ಲಕ್ಷ ರೂ. ಚೆಕ್ ವಿತರಣೆ title=

ಬೆಂಗಳೂರು: ಇಂಡೋನೇಷಿಯಾದಲ್ಲಿ ನಡೆದ ಏಷಿಯನ್ ಗೇಮ್ಸ್‌‌ನ ಮಹಿಳಾ ಕಬಡ್ಡಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಉಷಾರಾಣಿ ಅವರಿಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು 15 ಲಕ್ಷ ರೂ. ಚೆಕ್ ವಿತರಿಸಿದರು. 

ಸದಾಶಿವನಗರ ಬಿಡಿಎ ಕ್ವಾಟ್ರಸ್‌ನಲ್ಲಿ ಇಂದು ಬೆಳಿಗ್ಗೆ ಯುವಜನ ಮತ್ತು ಕ್ರೀಡಾಇಲಾಖೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಉಷಾರಾಣಿ ಅವರನ್ನು ಸನ್ಮಾನಿಸಲಾಯಿತು. 
ಬಳಿಕ ಮಾತಾನಾಡಿದ ಪರಮೇಶ್ವರ, ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್ ಆಗಿದ್ದ ಉಷಾರಾಣಿ ಅವರು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ಕ್ರೀಡಾ ಇಲಾಖೆಯಿಂದ 15 ಲಕ್ಷ ರೂ. ಚೆಕ್ ನೀಡಲಾಗಿದೆ ಎಂದರು.

ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಪದಕ ಗೆದ್ದವರಿಗೆ ಪೊಲೀಸ್ ಇಲಾಖೆಯಲ್ಲಿ ಹುದ್ದೆ‌ ನೀಡುವ ನಿಯಮಾವಳಿಯನ್ನು ಸಡಿಲಗೊಳಿಸಲಾಗುತ್ತಿದ್ದು, ಉಷಾರಾಣಿ ಅವರಿಗೆ ಪೊಲೀಸ್ ಇಲಾಖೆಯಲ್ಲಿ 'ಬಿ' ದರ್ಜೆ ಹುದ್ದೆ ನೀಡಲಾಗುವುದು ಎಂದು ಭರವಸೆ‌ ನೀಡಿದರು. 
ಮುಂದಿನ‌ ದಿನಗಳಲ್ಲಿ ಚಿನ್ನ ಗೆಲ್ಲುವಂತಾಗಲಿ ಎಂದು ಆಶಿಸಿದರು.

ಇದೇ ಕ್ರೀಡಾಕೂಟದಲ್ಲಿ ಟೆನ್ನಿಸ್‌ ಡಬಲ್ಸ್‌ನಲ್ಲಿ ಚಿನ್ನ ಗೆದ್ದಿರುವ ರೋಹನ್ ಬೋಪಣ್ಣ ಹಾಗೂ ಫೌದ್ ಮಿರ್ಜಾ ಅವರಿಗೂ ಶೀಘ್ರವೇ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

Trending News