India vs Ireland 2nd T20: ಭಾರತ ಮತ್ತು ಐರ್ಲೆಂಡ್ ನಡುವೆ 3 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಡಬ್ಲಿನ್‌ನ ಮಲಾಹೈಡ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 185 ರನ್ ಗಳಿಸಿತು. ಇನ್ನು ಈ ಇನ್ನಿಂಗ್ಸ್’ನಲ್ಲಿ ಟೀಂ ಇಂಡಿಯಾದ ಯುವ ಆಟಗಾರನೊಬ್ಬ ಸ್ಫೋಟಕ ಇನ್ನಿಂಗ್ಸ್ ಆಡಿದ್ದು, ತಂಡದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 1 ವರ್ಷದ ನಂತರ Team Indiaಗೆ ಮರಳಿದ ಈ ಆಟಗಾರನಿಗೆ ಉಪನಾಯಕ ಸ್ಥಾನ: ಕಮರಿದ ಹಾರ್ದಿಕ್ ಕನಸು!


ಮಲಾಹೈಡ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ರುತುರಾಜ್ ಗಾಯಕ್ವಾಡ್ ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ. ಆರಂಭಿಕರಾಗಿ ಆಡಿದ ರುತುರಾಜ್ ಗಾಯಕ್ವಾಡ್ ಅದ್ಭುತ ಅರ್ಧಶತಕ ಗಳಿಸಿದರು. 43 ಎಸೆತಗಳಲ್ಲಿ 58 ರನ್’ಗಳ ಇನಿಂಗ್ಸ್‌ ಆಡಿದ ರುತುರಾಜ್ ಗಾಯಕ್ವಾಡ್ ಅವರ ಬ್ಯಾಟ್‌’ನಿಂದ 6 ಬೌಂಡರಿ ಮತ್ತು 1 ಸಿಕ್ಸರ್ ಹೊರಬಂದಿದೆ. ಗಾಯಕ್ವಾಡ್ 134.88 ಸ್ಟ್ರೈಕ್ ರೇಟ್‌’ನಲ್ಲಿ ರನ್ ಗಳಿಸುವ ಮೂಲಕ ತಂಡಕ್ಕೆ ದೊಡ್ಡ ಸ್ಕೋರ್ ತಲುಪಲು ಮಹತ್ವದ ಕೊಡುಗೆ ನೀಡಿದರು.


ಈ ಸರಣಿಗೆ ರುತುರಾಜ್ ಗಾಯಕ್ವಾಡ್ ಅವರನ್ನು ಟೀಂ ಇಂಡಿಯಾದ ಉಪನಾಯಕರನ್ನಾಗಿ ಮಾಡಲಾಗಿದೆ. ಇನ್ನು ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಟೀಮ್ ಇಂಡಿಯಾ ಏಷ್ಯನ್ ಗೇಮ್ಸ್ ಆಡಲಿದೆ. ಈ ಏಷ್ಯನ್ ಗೇಮ್ಸ್ 2023 ರ ಭಾರತೀಯ ಪುರುಷರ ಕ್ರಿಕೆಟ್ ತಂಡದ ನಾಯಕತ್ವವನ್ನು ರುತುರಾಜ್ ಗಾಯಕ್ವಾಡ್ ಅವರಿಗೆ ಹಸ್ತಾಂತರಿಸಲಾಗಿದೆ. ಗಾಯಕ್ವಾಡ್ ನೇತೃತ್ವದ ಪುರುಷರ ತಂಡವು ಜೂನ್ 1 ರವರೆಗೆ ಐಸಿಸಿ ಟಿ20 ಶ್ರೇಯಾಂಕದ ಆಧಾರದ ಮೇಲೆ ಕ್ವಾರ್ಟರ್ ಫೈನಲ್‌’ಗೆ ನೇರ ಪ್ರವೇಶ ಪಡೆದಿದೆ.


ಇದನ್ನೂ ಓದಿ: Ireland vs India, 2nd T20I: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 33 ರನ್ ಗಳ ಭರ್ಜರಿ ಗೆಲುವು


ಸಂಜು ಸ್ಯಾಮ್ಸನ್ ಶಕ್ತಿ ಪ್ರದರ್ಶನ:


ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೂಡ ಉತ್ತಮ ಇನಿಂಗ್ಸ್ ಆಡುವಲ್ಲಿ ಯಶಸ್ವಿಯಾದರು. ಸಂಜು ಸ್ಯಾಮ್ಸನ್ 26 ಎಸೆತಗಳಲ್ಲಿ 40 ರನ್ ಗಳಿಸಿದ್ದು, ಅವರ ಈ ಇನ್ನಿಂಗ್ಸ್‌’ನಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸಿದ್ದಾರೆ. ಇದಲ್ಲದೇ ಯಶಸ್ವಿ ಜೈಸ್ವಾಲ್ 11 ಎಸೆತಗಳಲ್ಲಿ 18 ರನ್ ಗಳಿಸಿದ್ದಾರೆ. ಉತ್ತಮ ಆರಂಭವನ್ನು ಪಡೆದರೂ ಸಹ ದೊಡ್ಡ ಮೊತ್ತವನ್ನು ಗಳಿಸುವಲ್ಲಿ ವಿಫಲರಾದರು. ಇನ್ನು, ರಿಂಕು ಸಿಂಗ್ ಕೂಡ 21 ಎಸೆತಗಳಲ್ಲಿ 38 ರನ್ ಕೊಡುಗೆ ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.