Sachin Tendulkar: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಭಾರತೀಯ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಹೊಗಳಿದ್ದಾರೆ. ಬುಮ್ರಾ ಅವರನ್ನು ವಿಶ್ವದ ಅತ್ಯುತ್ತಮ ಕ್ರಿಕೆಟಿಗ ಎಂದು ಪ್ರಶಂಶೆ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ನೀಡಿತ್ತು. ಇದೀಗ ಇದರ ಬೆನ್ನಲ್ಲೆ ಸಚಿನ್ ತೆಂಡೂಲ್ಕರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಪರ್ತ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವಿನೊಂದಿಗೆ ಸರಣಿ ಆರಂಭಿಸಿದ್ದ ಭಾರತ, ನಂತರದ ನಾಲ್ಕು ಪಂದ್ಯಗಳಲ್ಲಿ ಸೋಲುಂಡಿತ್ತು. ಮಳೆಯ ಕಾರಣದಿಂದಾಗಿ ಒಂದು ಪಂದ್ಯದಲ್ಲಿ ಡ್ರಾ ಮಡಿಕೊಂಡಿದ್ದ ಟೀಂ ಇಂಡಿಯಾ, ಉಳಿದ ಮೂರು ಪಂದ್ಯಗಳಲ್ಲಿ ಸೋಲನುಭವಿಸುತ್ತು. 10 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಆಸೀಸ್ 3-1 ಅಂಕಗಳಿಂದ ಸರಣಿ ವಶಪಡಿಸಿಕೊಂಡು ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಯಿತು. ಈ ಗೆಲುವಿನೊಂದಿಗೆ ಆಸೀಸ್ ಡಬ್ಲ್ಯುಟಿಸಿ 2025 ಫೈನಲ್ ಸ್ಥಾನಕ್ಕೆ ಬಡ್ತಿ ಪಡೆಯುವಲ್ಲಿ ಯಶಸ್ವಿ ಕೂಡ ಆಯಿತು.
ಟೀಂ ಇಂಡಿಯಾ ಐದು ಟೆಸ್ಟ್ಗಳಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದ್ದರೂ, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅಸಾಮಾನ್ಯ ಪ್ರದರ್ಶನ ನೀಡಿದ್ದರು, ಅದ್ಭುತ ಆಟ ಪ್ರದರ್ಶಿಸುವ ಮೂಲಕ ಅಭಿಮಾನಿಗಳ ಮನ ಗೆದ್ದರು. 9 ಇನ್ನಿಂಗ್ಸ್ಗಳಲ್ಲಿ 13.06 ಸರಾಸರಿಯಲ್ಲಿ 32 ವಿಕೆಟ್ಗಳನ್ನು ಪಡೆಯುವ ಮೂಲಕ ಬೂಮ್ರಾ ಅವರು, ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ತಮ್ಮ ಬೌಲಿಂಗ್ನಿಂದ ಎದುರಾಳಿಗಳ ಬೆವರಿಳಿಸಿದ ಬೂಮ್ರಾ ಅವರು ತಮ್ಮ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ಆಸಿಸ್ ಕಲಿಗಳ ಎದೆ ನಡುಗಿಸಿದ್ದರು. ಇದನ್ನು ಸ್ವತಃ ಆಸಿಸ್ ಬೌಲರ್ಗಳೆ ಒಪ್ಪಿಕೊಂಡರು.
ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಬುಮ್ರಾ ಅವರನ್ನು ಹೊಗಳಿದ್ದಾರೆ. "0-1ರಿಂದ ಹಿನ್ನಡೆ ಸಾಧಿಸಿ ಸರಣಿಯನ್ನು 3-1ರಿಂದ ಗೆದ್ದುಕೊಂಡಿರುವ ಆಸ್ಟ್ರೇಲಿಯಾದ ಪ್ರದರ್ಶನ ಶ್ಲಾಘನೀಯ. ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಜಸ್ಪ್ರೀತ್ ಬುಮ್ರಾ ಬಗ್ಗೆ ವಿಶೇಷವಾಗಿ ಮಾತನಾಡಬೇಕು. ಅವರು ವಿಶ್ವದ ಅತ್ಯುತ್ತಮ ಆಟಗಾರ" ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ. ಸದ್ಯ ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Commendable performance by Australia to come back from 0-1 down and win the series 3-1. Congratulations to them for winning the Border Gavaskar Trophy.
Special mention to @Jaspritbumrah93.
“Jas” is just the best in the world!#AUSvIND pic.twitter.com/K2pSQZOkVQ— Sachin Tendulkar (@sachin_rt) January 5, 2025
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.