Sachin Tendulkar: ಕ್ರಿಕೆಟ್ ಜಗತ್ತಿನ ದೇವರು ಎಂದೆ ಪ್ರಖ್ಯಾತಿ ಪಡೆದಿರುವ ಸಚಿನ್ ತೆಂಡೂಲ್ಕರ್ ಅವರ ಮಗಳ ಹೆಗಲಿಗೆ ಇದೀಗ ಒಂದು ಹೊಸ ಜವಾಬ್ದಾರಿಯನ್ನು ನೀಡಲಾಗಿದೆ. ಮಗಳ ಸಾಧನೆಯನ್ನು ಮೆಚ್ಚಿ ಸಚಿನ್ ಇದೀಗ ತಮ್ಮ ಟ್ವಿಟ್ಟ್ರ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
ಟೀಂ ಇಂಡಿಯಾದ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಪುತ್ರಿ, ತಮ್ಮ ಸೌಂದರ್ಯದ ಮೂಲಕ ಅಷ್ಟೆ ಅಲ್ಲದೆ ತಮ್ಮ ವೈಯಕ್ತಿಕ ಜೀವನ್ದ ಕುರಿತಾಗಿಯೂ ಆಗಾಗ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುತ್ತಾರೆ. ಇದೀಗ ತಮ್ಮ ಹಾಟ್ ಫೋಟೋಸ್ ಮೂಲಕ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದ ಸಾರಾ, ಹೊಸ ಜವಾಬ್ದಾರಿಯೊಂದನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡಿದ್ದಾರೆ. ಹೌದು, ಈ ಕುರಿತದ ಮಾಹಿತಿಯನ್ನು ಸ್ವತಃ ಸಚಿನ್ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸಚಿನ್ ಅವರ ಮಗಳಾದ ದಾರಾ ತೆಂಡೂಲ್ಕರ್ ಅವರನ್ನು ಇದೀಗ, ಸಚಿನ್ ತೆಂಡೂಲ್ಕರ್ ಫೌಂಡೇಶನ್ (ಎಸ್‌ಟಿಎಫ್) ನಿರ್ದೇಶಕಿಯಾಗಿ ನೇಮಿಸಲಾಗಿದೆ. ಇದೀಗ ಇದರ ಕುರಿತು ತಮ್ಮ ಎಕ್ಸ್ ಕಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿರುವ ಸಚಿನ್ ತೆಂಡೂಲ್ಕರ್ " ನನ್ನ ಮಗಳು ಸಾರಾ ಎಸ್‌ಟಿಎಫ್‌ನ ನಿರ್ದೇಶಕಿಯಾಗಿ ಅಧಿಕಾರ ವಹಿಸಿಕೊಂಡಿರುವುದನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ. ಇದನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನಗೆ ತುಂಬಾ ಸಂತೋಷವಾಗುತ್ತಿದೆ. ಮಗಳ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿನ ಜ್ಞಾನ ಸಮಾಜಕ್ಕೆ ಇನ್ನಷ್ಟು ಸಹಕಾರಿಯಾಗಲಿದೆ" ಎಂದು ಬರೆದುಕೊಂಡಿದ್ದಾರೆ.
ಇದರ ಜೊತೆಗೆ, ಸಾರಾ ತೆಂಡೂಲ್ಕರ್ ಅವರು ಫೌಂಡೇಶನ್‌ನ ಮಕ್ಕಳ ಜೊತೆಗೆ ಇರುವ ಫೋಟೋಗಳನ್ನು ಕೂಡ ಅವರು ಹಂಚಿಕೊಂಡು, ಮಗಲ ಹೆಗಲ ಮೇಲಿರುವ ವಿಶೇಷವಾದ ಜವಬ್ದಾರಿಯ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸಚಿನ್ ಫೌಂಡೇಶನ್ ದೂರದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತದೆ ಮತ್ತು ಅಪೌಷ್ಟಿಕತೆಯನ್ನು ಹೋಗಲಾಡಿಸಲು ಪರಿಹಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಸಾರಾ ಲಂಡನ್ ವಿಶ್ವವಿದ್ಯಾಲಯದಿಂದ ಕ್ಲಿನಿಕಲ್ ಮತ್ತು ಪಬ್ಲಿಕ್ ಹೆಲ್ತ್ ನ್ಯೂಟ್ರಿಷನ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಈಗ ಈ ಜವಾಬ್ದಾರಿಯನ್ನು ಸಾರಾ ತಮ್ಮ ಹೆಗಲ ಮೇಲೆ ತೆಗೆದುಕೊಂಡಿದ್ದಾರೆ.
I’m overjoyed to share that my daughter Sara Tendulkar has joined the @STF_India as Director.
She holds a Master’s degree in Clinical and Public Health Nutrition from University College London. As she embarks on this journey to empower India through sports, healthcare, and… pic.twitter.com/B78HvgbK62
— Sachin Tendulkar (@sachin_rt) December 4, 2024
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.