Wrestlers Protest in Delhi: ಜಂತರ್ ಮಂತರ್‌ ನಲ್ಲಿ ಕುಸ್ತಿಪಟುಗಳ ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದೆಹಲಿ ಪೊಲೀಸರು ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಹಾಗೂ ಸಂಘಟಕರು ಮತ್ತು ಅವರ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಭಾನುವಾರ ಎಫ್‌ ಐ ಆರ್ ಕೂಡ ದಾಖಲಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Team India: ಟೀಂ ಇಂಡಿಯಾಗೆ ಸಿಕ್ಕಾಯ್ತು ಧೋನಿಯಂತಹ ‘ಸ್ಮಾರ್ಟ್ ಕ್ಯಾಪ್ಟನ್’: ಈ ಆಲ್ ರೌಂಡರ್ ಹೆಸರೇಳಿದ ಗವಾಸ್ಕರ್!


ಈ ಹಿಂದೆ ಮಹಿಳಾ 'ಮಹಾಪಂಚಾಯತ್' ಗಾಗಿ ಹೊಸ ಸಂಸತ್ ಭವನದತ್ತ ತೆರಳಲು ಪ್ರಯತ್ನಿಸಿ ಭದ್ರತಾ ಕವಚವನ್ನು ಭೇದಿಸಲು ಪ್ರಯತ್ನಿಸಿದ ನಂತರ ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಿದ್ದಕ್ಕಾಗಿ ದೆಹಲಿ ಪೊಲೀಸರು ಭಾನುವಾರ ಅವರನ್ನು ಬಂಧಿಸಿದ್ದರು.


ಜಂತರ್ ಮಂತರ್‌ ನಲ್ಲಿ 109 ಪ್ರತಿಭಟನಾಕಾರರು ಸೇರಿದಂತೆ ದೆಹಲಿಯಾದ್ಯಂತ 700 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ವಿನೇಶ್ ಫೋಗಟ್, ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ ಐ ಆರ್ ದಾಖಲಿಸಲು ದೆಹಲಿ ಪೊಲೀಸರು ಏಳು ದಿನಗಳನ್ನು ತೆಗೆದುಕೊಂಡರು, ಆದರೆ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಲು ಏಳು ಗಂಟೆಗಳನ್ನೂ ತೆಗೆದುಕೊಂಡಿಲ್ಲ ಎಂದು ಹೇಳಿದರು.


ಬ್ರಿಜ್ ಭೂಷಣ್ ಬಂಧನಕ್ಕೆ ಒತ್ತಾಯಿಸಿ ದೇಶದ ಅಗ್ರ ಕುಸ್ತಿಪಟುಗಳು ಏಪ್ರಿಲ್ 23 ರಂದು ತಮ್ಮ ಆಂದೋಲನವನ್ನು ಪುನರಾರಂಭಿಸಿದ್ದರು. ಬ್ರಿಜ್ ಭೂಷಣ್ ಅಪ್ರಾಪ್ತ ವಯಸ್ಕ ಸೇರಿದಂತೆ ಹಲವಾರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಪ್ರತಿಭಟನಾನಿರತ ಕುಸ್ತಿಪಟುಗಳು ಆರೋಪಿಸಿದ್ದಾರೆ. ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ಸಂಗೀತಾ ಫೋಗಟ್ ಮತ್ತು ಇತರರ ವಿರುದ್ಧ ನವದೆಹಲಿ ಜಿಲ್ಲೆಯ ಸಂಸದ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಫ್‌ ಐ ಆರ್ ದಾಖಲಿಸಲಾಗಿದೆ.


ಅಧಿಕಾರಿಯ ಪ್ರಕಾರ, ಎಫ್‌ ಐ ಆರ್ ಅನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಸಾರ್ವಜನಿಕ ಸೇವಕನ ಆದೇಶಕ್ಕೆ ಅವಿಧೇಯತೆ), 186 (ಕರ್ತವ್ಯ ನಿರ್ವಹಣೆಯಲ್ಲಿ ಸಾರ್ವಜನಿಕ ಸೇವಕನಿಗೆ ಅಡ್ಡಿಪಡಿಸುವುದು) ಮತ್ತು 353 (ಸಾರ್ವಜನಿಕ ಸೇವಕನಿಗೆ ಕ್ರಿಮಿನಲ್ ಬಲವನ್ನು ಬಳಸುವುದು) ಅಡಿಯಲ್ಲಿ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 352 (ಗಂಭೀರ ಪ್ರಚೋದನೆ ಹೊರತುಪಡಿಸಿ ಹಲ್ಲೆ ಅಥವಾ ಕ್ರಿಮಿನಲ್ ಶಕ್ತಿ), 147 (ಗಲಭೆ) ಮತ್ತು 149 (ಕಾನೂನುಬಾಹಿರ ಸಭೆ) ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ತಡೆ ಕಾಯ್ದೆಯ ಸೆಕ್ಷನ್ 3 ಅನ್ನು ಸಹ ಎಫ್‌ ಐ ಆರ್‌ ನಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.


ಪ್ರತಿಭಟನಾಕಾರರ ವಿರುದ್ಧ ಎಫ್‌ ಐ ಆರ್ ದಾಖಲಿಸಿರುವ ದೆಹಲಿ ಪೊಲೀಸರನ್ನು ವಿನೇಶ್ ಫೋಗಟ್ ಟೀಕಿಸಿದ್ದಾರೆ. ಟ್ವಿಟರ್‌ನಲ್ಲಿ  ಬರೆದುಕೊಂಡಿರುವ ಅವರು, "ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬ್ರಿಜ್ ಭೂಷಣ್ ವಿರುದ್ಧ ಎಫ್‌ ಐ ಆರ್ ದಾಖಲಿಸಲು ದೆಹಲಿ ಪೊಲೀಸರು ಏಳು ದಿನಗಳನ್ನು ತೆಗೆದುಕೊಳ್ಳುತ್ತಾರೆ. ಶಾಂತಿಯುತ ಆಂದೋಲನ ನಡೆಸಿದ್ದಕ್ಕಾಗಿ ನಮ್ಮ ವಿರುದ್ಧ ಎಫ್‌ ಐ ಆರ್ ದಾಖಲಿಸಲು ಏಳು ಗಂಟೆಗಳು ಸಹ ತೆಗೆದುಕೊಂಡಿಲ್ಲ" ಎಂದು ಹೇಳಿದ್ದಾರೆ.


“ಈ ದೇಶದಲ್ಲಿ ಸರ್ವಾಧಿಕಾರ ಆರಂಭವಾಗಿದೆಯೇ? ಸರ್ಕಾರ ತನ್ನ ಆಟಗಾರರನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದನ್ನು ಇಡೀ ಜಗತ್ತು ಗಮನಿಸುತ್ತಿದೆ. ಹೊಸ ಇತಿಹಾಸ ಬರೆಯಲಾಗುತ್ತಿದೆ” ಎಂದು ಅಸಮಾಧಾನ ಹೊರಹಾಕಿದ್ದಾರೆ.


ಇದನ್ನೂ ಓದಿ: WTC Finalಗೂ ಮುನ್ನ ಟೀಂ ಇಂಡಿಯಾದ ಈ ಬ್ಯಾಟ್ಸ್’ಮನ್ ಅಬ್ಬರ: ಆಸೀಸ್ ಪಡೆಗೆ ದುಃಸ್ವಪ್ನವಾಗುವುದು ಖಂಡಿತ!


ಕುಸ್ತಿಪಟುಗಳನ್ನು ವಿವಿಧೆಡೆಗೆ ಬಸ್‌ ಗಳಲ್ಲಿ ಕರೆದೊಯ್ದ ತಕ್ಷಣ ಪೊಲೀಸ್ ಸಿಬ್ಬಂದಿ ಜಂತರ್ ಮಂತರ್‌ ನ್ನು ಸ್ವಚ್ಛಗೊಳಿಸಲು ಪ್ರಾರಂಭಿಸಿದರು. ಕುಸ್ತಿಪಟುಗಳ ಮಂಚಗಳು, ಹಾಸಿಗೆಗಳು, ಕೂಲರ್‌’ಗಳು, ಫ್ಯಾನ್‌’ಗಳು ಮತ್ತು ಟಾರ್ಪಾಲಿನ್‌ಗಳನ್ನು ತೆಗೆದುಹಾಕಿದ್ದಾರೆ. ಬಂಧಿತ ಎಲ್ಲ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆ ಮಾಡಲಾಗಿದ್ದು, ಪುರುಷ ಕುಸ್ತಿಪಟುಗಳನ್ನೂ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.