Sania Mirza Divorce: ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ವಿಚಾರದಿಂದ ಸುದ್ದಿಯಲ್ಲಿದ್ದರು. ಪಾಕಿಸ್ತಾನದ ಮಾಜಿ ನಾಯಕ ಶೋಯೆಬ್ ಮಲಿಕ್ ಅವರೊಂದಿಗಿನ ಸಾನಿಯಾ ಮದುವೆ ಆಗಿದ್ದಾರೆ. ಈಗ ಇವರಿಬ್ಬರ ವಿಚ್ಛೇದನ ವದಂತಿ ಶುರುವಾಗಿದೆ. ಡಿವೋರ್ಸ್ ವದಂತಿ ನಡುವೆ ಸಾನಿಯಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
ಸಾನಿಯಾ ಮಿರ್ಜಾ ಮತ್ತು ಅವರ ಪತಿ ಪಾಕಿಸ್ತಾನದ ಮಾಜಿ ನಾಯಕ ಶೋಯೆಬ್ ಮಲಿಕ್ ನಡುವೆ ಭಿನ್ನಾಭಿಪ್ರಾಯ ಶುರುವಾಗಿದೆ ಎನ್ನಲಾಗುತ್ತಿದೆ. ಇವರಿಬ್ಬರ ವಿಚ್ಛೇದನ ವಿಚಾರ ಹಲವು ದಿನಗಳಿಂದ ಸುದ್ದಿಯಲ್ಲಿದ್ದು, ಈ ಬಾರಿಯೂ ಅಂತಹದ್ದೇ ವಿಷಯ ಬೆಳಕಿಗೆ ಬಂದಿದೆ.
ಇದನ್ನೂ ಓದಿ: 16 ಸಿಕ್ಸರ್, 137 ರನ್… ಅಂದು RCB ಕೈಬಿಟ್ಟಿದ್ದ 24ರ ಹರೆಯದ ಈ ಬ್ಯಾಟ್ಸ್’ಮನ್ ಇಂದು ಟಿ20ಯಲ್ಲಿ ಅಬ್ಬರಿಸಿಯೇಬಿಟ್ಟ!
ಅವರಿಬ್ಬರೂ ಈ ಊಹಾಪೋಹಗಳನ್ನು ದೃಢಪಡಿಸಿಲ್ಲ. ಇತ್ತೀಚೆಗಷ್ಟೇ ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ ಬೇರೆಯಾಗಲಿದ್ದಾರೆ ಎಂಬ ವರದಿ ಬಂದಿತ್ತು. ಆದರೆ ಇದೀಗ ಭಾರತದ ಮಾಜಿ ಟೆನಿಸ್ ತಾರೆ ಸಾನಿಯಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಮದುವೆ ಮತ್ತು ವಿಚ್ಛೇದನದ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಸಾನಿಯಾ ಮಿರ್ಜಾ ಅವರ ಈ ಪೋಸ್ಟ್ನಿಂದ ಏನೂ ಸ್ಪಷ್ಟವಾಗಿಲ್ಲ. ಸಾನಿಯಾ ಮತ್ತು ಶೋಯೆಬ್ ತಮ್ಮ ಸಂಬಂಧದ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.
ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ 2010 ರಲ್ಲಿ ವಿವಾಹವಾದರು. ಆ ಸಮಯದಲ್ಲಿ ಈ ಮದುವೆಯು ಅನೇಕರಿಗೆ ಅಚ್ಚರಿ ಮೂಡಿಸಿತು. ಇವರಿಬ್ಬರಿಗೂ ಒಬ್ಬ ಮಗನಿದ್ದಾನೆ, ಅವನ ಹೆಸರು ಇಜಾನ್.
ಇದನ್ನೂ ಓದಿ: Rohit Sharma: ಕೇವಲ ಒಂದು ಗೆಲುವು… ಧೋನಿಯ ದಾಖಲೆ ಮುರಿದು ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.