Sania Mirza social media post: ದೇಶದ ಖ್ಯಾತ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಬದುಕಲ್ಲಿ ವಿಚ್ಛೇದನದ ಬಿರುಗಾಳಿ ಎದ್ದಿದೆಯೇ ಎಂಬ ಪ್ರಶ್ನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿತ್ತು. ಇದೀಗ ಈ ವದಂತಿಗೆ ಪುಷ್ಠಿ ನೀಡುವಂತಹ ಪೋಸ್ಟ್ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಸಾನಿಯಾ ಶೇರ್ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಪಾಕ್ ವಿರುದ್ಧದ ಪಂದ್ಯದಲ್ಲಿ ಬಾಲ್’ಗೆ ಹೇಳಿದ ಮಂತ್ರ ಯಾವುದೆಂದು ಕೊನೆಗೂ ಬಾಯ್ಬಿಟ್ಟ ಹಾರ್ದಿಕ್!
ಟೆನಿಸ್ ಕ್ಷೇತ್ರದಲ್ಲಿ ಭಾರತವನ್ನು ಕೀರ್ತಿಯ ಶಿಖರಕ್ಕೆ ಕೊಂಡೊಯ್ದ ಸಾನಿಯಾ ಮಿರ್ಜಾ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಮತ್ತು ಮನ್ನಣೆಗಳನ್ನು ಪಡೆದಿದ್ದಾರೆ. ಆದರೆ ಅವರ ವೃತ್ತಿಪರ ಸಾಧನೆಗಳಿಗೆ ವ್ಯತಿರಿಕ್ತವಾಗಿ ಕಳೆದೆರಡು ತಿಂಗಳುಗಳಿಂದ ವೈಯಕ್ತಿಕ ಜೀವನವು ಗಮನ ಸೆಳೆಯುತ್ತಿದೆ.
ಸಾನಿಯಾ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾಗಿದ್ದಾರೆ. ಈ ದಂಪತಿಗೆ ಇಜಾನ್ ಎಂಬ ಮಗನಿದ್ದಾನೆ. ಕಳೆದ ಎರಡು ತಿಂಗಳುಗಳಿಂದ ಇಬ್ಬರ ವೈವಾಹಿಕ ಜೀವನವು ಸರಿಯಿಲ್ಲವೇನೋ ಎಂಬ ವದಂತಿಗಳು ಎಲ್ಲೆಡೆ ಹರಿದಾಡತೊಡಗಿವೆ.
ಇದನ್ನೂ ಓದಿ: ಮುಂದಿನ 2 ದಿನ ಈ ಭಾಗಗಳಲ್ಲಿ ಬಿಡುವಿಲ್ಲದೆ ಸುರಿಯಲಿದೆ ಭಾರೀ ಮಳೆ: ಮಿಂಚು-ಗುಡುಗು ಸಹಿತ ಬಿರುಗಾಳಿ
ಇತ್ತೀಚೆಗೆ ತನ್ನ ಇನ್’ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ ಸಾನಿಯಾ ಮಿರ್ಜಾ, "If I am communicating, I care. If I am quiet, I'm done," ಎಂದು ಹೇಳಿದ್ದಾರೆ. ಈ ಪೋಸ್ಟ್ ವಿಚ್ಛೇದನದ ವದಂತಿಗೆ ಮತ್ತಷ್ಟು ಪುಷ್ಠಿ ನೀಡಿದಂತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್