Sanjay Manjrekar on Chahal's ODI selection : 2023 ರ ವಿಶ್ವಕಪ್‌ನಲ್ಲಿ  ತಂಡದಿಂದ ಹೊರಗಿಡಲ್ಪಟ್ಟಿದ್ದ  ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್, ಮತ್ತೆ ಟೀಂ ಇಂಡಿಯಾಗೆ ಮರಳಿದ್ದಾರೆ.  ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆಡುವ ಏಕದಿನ ಸರಣಿಯಲ್ಲಿ ಅವರಿಗೆ ಅವಕಾಶ ನೀಡಲಾಗಿದೆ. ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿದ್ದು, ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದಾದ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಇದೀಗ ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅವರು ಏಕದಿನ ತಂಡಕ್ಕೆ ಚಹಾಲ್ ಆಯ್ಕೆಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿ, ಈ ಹೇಳಿಕೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಚಹಲ್ ಆಯ್ಕೆ ಬಗ್ಗೆ ಮಾಂಜ್ರೇಕರ್  ಹೇಳಿದ್ದೇನು ? :
ಚಹಲ್ ಭಾರತ ತಂಡಕ್ಕೆ ಮರಳಿರುವ ಬಗ್ಗೆ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್, ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈ ಸ್ಪಿನ್ನರ್‌ನನ್ನು ತಂಡಕ್ಕೆ  ಸೇರಿಸಿಕೊಂಡಿರುವುದು ಅಚ್ಚರಿ ತಂದಿದೆ ಎಂದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಚಹಾಲ್ ಹೆಚ್ಚು ಸೂಕ್ತವಾದ ಬೌಲರ್ ಎಂದು ನಾನು ಭಾವಿಸಿದ್ದೆ . ಆದರೆ ರವಿ ಬಿಷ್ಣೋಯ್  ಆ ತಂಡದಲ್ಲಿ ಅವಕಾಶ ಪಡೆದಿದ್ದಾರೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ : ಟೀಂ ಇಂಡಿಯಾಗೆ ಬಿಗ್ ಶಾಕ್: ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಆಡಲ್ಲ ಈ ಪವರ್ ಫುಲ್ ವೇಗಿ!


ದೀಪಕ್ ಚಹರ್ ವಾಪಸಾತಿ ಬಗ್ಗೆಯೂ ಹೇಳಿಕೆ : 
ಇನ್ನು  ದೀಪಕ್ ಚಹಾರ್ ತಂಡಕ್ಕೆ ಮರಳಿರುವ ಬಗ್ಗೆ ಕೂಡಾ ಮಂಜ್ರೇಕರ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ದೀಪಕ್ ಚಹಾರ್ ತಂಡಕ್ಕೆ ಮರಳಿರುವುದು ಸಂತೋಷ ತಂದಿದೆ ಎಂದಿದ್ದಾರೆ. ಒಬ್ಬ ಕ್ರಿಕೆಟರ್ ಆಗಿ ನಾನು ಅವರನ್ನು ಇಷ್ಟ ಪಡುತ್ತೇನೆ ಎಂದು ಹೇಳಿದ್ದಾರೆ. ಅವೇಶ್ ಖಾನ್ ಗೆ ಮತ್ತೊಂದು ಅವಕಾಶ ಸಿಕ್ಕಿದೆ. ಆಸ್ಟ್ರೇಲಿಯಾ ವಿರುದ್ಧದ ಟಿ 20 ಸರಣಿಯಲ್ಲಿ ದೀಪಕ್ ಚಹಾರ್ ಐದನೇ ಮತ್ತು ಅಂತಿಮ ಟಿ 20 ಪಂದ್ಯದ ಭಾಗವಾಗಿರಲಿಲ್ಲ. ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಅವರು ವಾಪಾಸಾಗಿದ್ದರು. ಚಹರ್ 2022 ರಲ್ಲಿ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ತಮ್ಮ ಕೊನೆಯ ODI ಪಂದ್ಯವನ್ನು ಆಡಿದ್ದರು. 


ಏಕದಿನ ಸರಣಿಗೆ ಭಾರತ ತಂಡ :
ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್, ಅರ್ಷದೀಪ್ ಸಿಂಗ್, ದೀಪಕ್ ಚಹಾರ್


ಇದನ್ನೂ ಓದಿ : ಟಿ20 ವಿಶ್ವಕಪ್’ಗೆ ನಾಯಕ ಯಾರು?: ಸಂದರ್ಶನದಲ್ಲಿ ಸತ್ಯ ಬಹಿರಂಗಪಡಿಸಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ