Prithvi Shaw and Sapna Gill : ಸೆಲ್ಫಿಗಾಗಿ ಬಂದು ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಅವರ ಕಾರಿನ ಮೇಲೆ ದಾಳಿ ಮಾಡಿರುವ ಆರೋಪ ಹೊತ್ತು ಜೈಲು ಸೇರಿರುವ ಸೋಷಿಯಲ್‌ ಮೀಡಿಯಾ ಸ್ಟಾರ್‌, ನಟಿ, ಸಪ್ನಾ ಗಿಲ್ ಅವರು ಪೃಥ್ವಿ ಶಾ ಹಾಗೂ ಅವರು ಸ್ನೇಹಿತರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 


COMMERCIAL BREAK
SCROLL TO CONTINUE READING

ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಸೆಲ್ಫಿ ವಿಚಾರವಾಗಿ ನಡೆದ ಜಗಳದಲ್ಲಿ, ಪೃಥ್ವಿ ನೀಡಿರುವ ಎಲ್ಲ ಹೇಳಿಕೆಗಳು ಸುಳ್ಳು ಎಂದು ಸಪ್ನಾ ಹೇಳಿದ್ದಾರೆ. ಅಲ್ಲದೆ, ತಾವು ಯಾರ ಮೇಲೂ ಹಲ್ಲೆ ನಡೆಸಿಲ್ಲ ಮತ್ತು ಹಣ ಕೇಳಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಪೃಥ್ವಿಯವರೇ ಮಾರಕಾಯುಧದಿಂದ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ. ಹಾಗೂ ತಮ್ಮ ಖಾಸಗಿ ಭಾಗಗಳನ್ನು ಸ್ಪರ್ಶಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.


ಇದನ್ನೂ ಓದಿ: ಐಸಿಸಿ ಟೆಸ್ಟ್ ರ್ಯಾಂಕಿಂಗ್ ಟಾಪ್ 10 ಪಟ್ಟಿಯಲ್ಲಿ ಮೂವರು ಭಾರತೀಯರಿಗೆ ಸ್ಥಾನ..!


ಸಪ್ನಾ ಪರ ವಕೀಲರು ಹೇಳುವಂತೆ ಪೃಥ್ವಿ ಹಾಗೂ ಅವರ ಸ್ನೇಹಿತರ ವಿರುದ್ಧ ಕಿರುಕುಳ ಸೇರಿದಂತೆ ಕಾನೂನುಬಾಹಿರ ಕೃತ್ಯಗಳಿಗಾಗಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಸಪ್ನಾ ಸೇರಿದಂತೆ ನಾಲ್ವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. ಪೃಥ್ವಿ ಶಾ, ಆಶಿಶ್ ಸುರೇಂದ್ರ ಯಾದವ್, ಬ್ರಿಜೇಶ್ ಮತ್ತು ಇತರರ ವಿರುದ್ಧ ಕಾನೂನುಬಾಹಿರವಾಗಿ ಕಿರುಕುಳ ನೀಡಿರುವ ಮತ್ತು ಸಪ್ನಾ ಗಿಲ್ ಅವರ ಮೇಲೆ ದೌರ್ಜನ್ಯ ಎಸಗಿದ್ದಕ್ಕಾಗಿ ಐಪಿಸಿ ಸೆಕ್ಷನ್ 34, 120b, 144, 146, 148, 149, 323, 324, 351, 354 ಮತ್ತು 509ರ ಅಡಿಯಲ್ಲಿ ದೂರು ದಾಖಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.