Cricket World Record: ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್‌’ಗಳಿಂದಲೂ ಸಾಧ್ಯವಾಗದ, ಒಂದು ಅಪರೂಪದ ದಾಖಲೆಯನ್ನು ಹೊಸ ಬ್ಯಾಟ್ಸ್‌ಮನ್ ಮಾಡಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಎಂತೆಂಥಾ ದಾಖಲೆಗಳನ್ನು ತಮ್ಮ ತೆಕ್ಕೆಗೆ ಪಡೆದುಕೊಂಡಿದ್ದಾರೆ. ಆದರೆ ಪಾಕಿಸ್ತಾನದ ಈ ಬ್ಯಾಟ್ಸ್‌ಮನ್ ಕ್ರಿಕೆಟ್ ಜಗತ್ತನ್ನು ಆಳುವತ್ತ ಕಾಲಿಟ್ಟಿದ್ದಾರೆ. ಪಾಕಿಸ್ತಾನದ ಮಾರಕ ಬ್ಯಾಟ್ಸ್‌ಮನ್ ಸೌದ್ ಶಕೀಲ್ ಅವರು 146 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ವಿಶ್ವದ ಯಾವುದೇ ಕ್ರಿಕೆಟಿಗರು ಮಾಡದಂತಹ ವಿಶ್ವದಾಖಲೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs PAK: ಭಾರತ-ಪಾಕ್ ವಿಶ್ವಕಪ್ ಪಂದ್ಯದ ದಿನಾಂಕ ಬದಲಾವಣೆ! ಈ ದಿನದಂದು ನಡೆಯಲಿದೆ ಐತಿಹಾಸಿಕ ಮ್ಯಾಚ್


ಪಾಕಿಸ್ತಾನದ ಮಾರಕ ಬ್ಯಾಟ್ಸ್‌ಮನ್ ಸೌದ್ ಶಕೀಲ್ ತನ್ನ ಮೊದಲ 7 ಟೆಸ್ಟ್ ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಸೌದ್ ಶಕೀಲ್ ಈ ವಿಶ್ವ ದಾಖಲೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್. 146 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ವಿಶ್ವದ ಯಾವುದೇ ಕ್ರಿಕೆಟಿಗನಿಗೆ ಈ ವಿಶ್ವ ದಾಖಲೆ ಮಾಡಲು ಸಾಧ್ಯವಾಗಿಲ್ಲ. ಸೌದ್ ಶಕೀಲ್ ಇದುವರೆಗೆ ಕೇವಲ ಏಳು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಮೊದಲ 7 ಟೆಸ್ಟ್ ಪಂದ್ಯಗಳಲ್ಲಿ 50 ಕ್ಕಿಂತ ಹೆಚ್ಚು ರನ್ ಗಳಿಸಿದ ಇತಿಹಾಸದಲ್ಲಿ ಮೊದಲ ಬ್ಯಾಟ್ಸ್‌ಮನ್ ಆಗಿದ್ದಾರೆ. ಈ ಅವಧಿಯಲ್ಲಿ ಸೌದ್ ಶಕೀಲ್ ಒಂದು ಶತಕ ಮತ್ತು ದ್ವಿಶತಕ ಗಳಿಸಿದ್ದಾರೆ.


ಇದನ್ನೂ ಓದಿ: “ಕೊಹ್ಲಿಯಿಂದಲೇ ಅಂತ್ಯ ಕಂಡಿತ್ತು ಜಹೀರ್ ಖಾನ್ ವೃತ್ತಿಜೀವನ”: ಈ ಅನುಭವಿ ಹೇಳಿಕೆಗೆ ಕ್ರಿಕೆಟ್ ಲೋಕದಲ್ಲಿ ತಲ್ಲಣ


ಸೌದ್ ಶಕೀಲ್ ಸತತ 7 ಟೆಸ್ಟ್ ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ವಿಶ್ವದಾಖಲೆ ಮಾಡಿದ್ದಾರೆ. ಡಿಸೆಂಬರ್ 2022 ರಲ್ಲಿ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನಕ್ಕಾಗಿ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ ಸೌದ್ ಶಕೀಲ್ ಒಟ್ಟು 7 ಟೆಸ್ಟ್ ಪಂದ್ಯಗಳಲ್ಲಿ 875 ರನ್ ಗಳಿಸಿದ್ದಾರೆ. ಈ ಆಟಗಾರನ ಬ್ಯಾಟಿಂಗ್ ಸರಾಸರಿ 87.50 ಆಗಿದೆ. ತಮ್ಮ ಅಲ್ಪಾವಧಿಯಲ್ಲಿ 2 ಶತಕ, 1 ದ್ವಿಶತಕ ಮತ್ತು 6 ಅರ್ಧ ಶತಕಗಳನ್ನು ಗಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ