IND vs WI 2nd Test: ವೆಸ್ಟ್ ಇಂಡೀಸ್ ಮತ್ತು ಭಾರತ ನಡುವಿನ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ಅಂದರೆ ಜುಲೈ 20 ರಿಂದ ಟ್ರಿನಿಡಾಡ್‌ನಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 7:30ಕ್ಕೆ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 141 ರನ್‌ಗಳಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರನೊಬ್ಬನನ್ನು ಕಂಡರೆ ವೆಸ್ಟ್ ಇಂಡೀಸ್ ತಂಡ ನಡುಗುತ್ತದೆ ಎಂಬ ಸುದ್ದಿ ತಿಳಿದುಬಂದಿದೆ. ಈ ಆಟಗಾರ ಕ್ಯಾಪ್ಟನ್ ರೋಹಿತ್ ಶರ್ಮಾ ಅವರ ಬ್ರಹ್ಮಾಸ್ತ್ರವಂತೆ.
ಇದನ್ನೂ ಓದಿ: ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತವರಣ-14 ಸಾವಿರ ಉದ್ಯೋಗ ಸೃಷ್ಟಿ ಭರವಸೆ: ಸಿಎಂ ಸಿದ್ದರಾಮಯ್ಯ
ಟ್ರಿನಿಡಾಡ್‌ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ತಂದುಕೊಡುವ ಸಾಮಾರ್ಥ್ಯವುಳ್ಳ ಆಟಗಾರನಿದ್ದಾನೆ. ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದ ಪ್ಲೇಯಿಂಗ್ 11ಗೆ ಎಂಟ್ರಿ ಕೊಟ್ಟರೆ ಮಾತ್ರ ಟೀಂ ಇಂಡಿಯಾ ಬಲ ದ್ವಿಗುಣಗೊಳ್ಳಲಿದೆ.
ಟೀಂ ಇಂಡಿಯಾದ ಈ ಡ್ಯಾಶಿಂಗ್ ಮ್ಯಾಚ್ ವಿನ್ನರ್ ಬೇರೆ ಯಾರೂ ಅಲ್ಲ ಶಾರ್ದೂಲ್ ಠಾಕೂರ್. ಶಾರ್ದೂಲ್ ಠಾಕೂರ್ ಅತ್ಯಂತ ಮಾರಕ ಸ್ವಿಂಗ್ ಬೌಲಿಂಗ್‌ನಲ್ಲಿ ಪರಿಣತಿ ಪಡೆದಿದ್ದಾರೆ. ನಿರಂತರವಾಗಿ ತನ್ನ ವೇಗವನ್ನು ಹೆಚ್ಚಿಸುತ್ತಾ ವಿಭಿನ್ನ ಬದಲಾವಣೆಗಳೊಂದಿಗೆ ಬೌಲಿಂಗ್ ಮಾಡುತ್ತಾರೆ, ಇದು ಬ್ಯಾಟ್ಸ್‌ಮನ್‌ಗಳಿಗೆ ಇನ್ನಷ್ಟು ಅಪಾಯಕಾರಿಯಾಗಿದೆ. ಶಾರ್ದೂಲ್ ಠಾಕೂರ್ ಆಗಮನದೊಂದಿಗೆ, ಟೀಮ್ ಇಂಡಿಯಾವು ಬ್ಯಾಟ್ಸ್‌ಮನ್ ಮತ್ತು ಬೌಲರ್‌ನ ಸಂಯೋಜನೆಯನ್ನು ಪಡೆಯುತ್ತದೆ,
ಶಾರ್ದೂಲ್ ಠಾಕೂರ್ ಆರಂಭ ಮತ್ತು ಮಧ್ಯಮ ಓವರ್ ಗಳಲ್ಲಿ ಅತ್ಯಂತ ಅಪಾಯಕಾರಿ ಸ್ವಿಂಗ್ ಬೌಲಿಂಗ್ ಗೆ ಹೆಸರುವಾಸಿಯಾಗಿದ್ದಾರೆ. ಶಾರ್ದೂಲ್ ಠಾಕೂರ್ ಮಧ್ಯಮ ಓವರ್‌ಗಳಲ್ಲಿ ಎದುರಾಳಿ ತಂಡದ ಅತಿದೊಡ್ಡ ಜೊತೆಯಾಟವನ್ನು ಮುರಿದು ಹೆಸರುವಾಸಿಯಾಗಿದ್ದಾರೆ. ತೀಕ್ಷ್ಣವಾದ ಸ್ವಿಂಗ್ ಬೌಲಿಂಗ್‌ನೊಂದಿಗೆ ಬಿರುಗಾಳಿಯ ಬ್ಯಾಟಿಂಗ್‌ನಲ್ಲಿ ಪರಿಣತಿ ಹೊಂದಿದ್ದಾರೆ.
ಶಾರ್ದೂಲ್ ಠಾಕೂರ್ ಭಾರತ ಪರ ಇದುವರೆಗೆ 10 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 30 ವಿಕೆಟ್ ಪಡೆದಿದ್ದಾರೆ. ಶಾರ್ದೂಲ್ ಠಾಕೂರ್ 35 ಏಕದಿನ ಪಂದ್ಯಗಳಲ್ಲಿ 50 ವಿಕೆಟ್ ಹಾಗೂ 25 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 33 ವಿಕೆಟ್ ಕಬಳಿಸಿದ ದಾಖಲೆ ಹೊಂದಿದ್ದಾರೆ.
ಇದನ್ನೂ ಓದಿ: ತ್ರಿಶತಕ ಬಾರಿಸಿದ ಈ ಸ್ಫೋಟಕ ಬ್ಯಾಟ್ಸ್’ಮನ್’ಗೆ ನಿವೃತ್ತಿ ನೀಡಲು ಒತ್ತಾಯಿಸುತ್ತಿದೆ ಆಯ್ಕೆ ಸಮಿತಿ!?
ಶಾರ್ದೂಲ್ ಠಾಕೂರ್ ಕೂಡ ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಮಾಡುತ್ತಾರೆ. ಜೂನ್ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಠಾಕೂರ್ ಬಾಲ್ ಹಾಗೂ ಬ್ಯಾಟ್ ಮೂಲಕ ಭಾರತವನ್ನು ಏಕಾಂಗಿಯಾಗಿ ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Thread Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.