ಶಿಖರ್ ಧವನ್ ಭರ್ಜರಿ ಶತಕ, ಬೃಹತ್ ಮೊತ್ತ ಗಳಿಸಿದ ಭಾರತ
ಮೊಹಾಲಿಯಲ್ಲಿ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 358 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿದೆ.
ನವದೆಹಲಿ: ಮೊಹಾಲಿಯಲ್ಲಿ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 358 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿದೆ.
ಭಾರತದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ(95) ಹಾಗೂ ಶಿಖರ್ ಧವನ್ ಅವರ ಭರ್ಜರಿ ಶತಕ (143 )ದ ನೆರವಿನಿಂದ ಬೃಹತ್ ಮೊತ್ತವನ್ನು ಗಳಿಸಿತು.ಧವನ್ ಕೇವಲ 115 ಎಸೆತಗಳಲ್ಲಿ 18 ಬೌಂಡರಿ ಹಾಗೂ 3 ಸಿಕ್ಸರ್ ಗಳ ನೆರವಿನಿಂದ 143 ರನ್ ಗಳಿಸಿದರು.
ಇನ್ನೊಂದೆಡೆ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅವರು ಭಾರತದ ಐದು ವಿಕೆಟ್ ಗಳನ್ನು ಕಬಳಿಸಿದರು ಕೂಡ ರನ್ ಗಳ ನಿಯಂತ್ರಣಕ್ಕೆ ಕಡಿವಾಣ ಬಿಳಲಿಲ್ಲ. ಈಗಾಗಲೇ ಬೃಹತ್ ಮೊತ್ತವನ್ನು ಗಳಿಸಿರುವ ಭಾರತ ಈ ಪಂದ್ಯವನ್ನು ಗೆಲ್ಲುವ ಹುಮ್ಮಸ್ಸಿನಲ್ಲಿದೆ.