Shivam Dube Cricket News: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಸೆಪ್ಟೆಂಬರ್-ಅಕ್ಟೋಬರ್‌ ನಲ್ಲಿ ಚೀನಾದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ 2023 ಗಾಗಿ ಪುರುಷರ ಮತ್ತು ಮಹಿಳಾ ತಂಡಗಳ ತಂಡವನ್ನು ಪ್ರಕಟಿಸಿದೆ. ಏಷ್ಯನ್ ಗೇಮ್ಸ್ ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ನಡೆಯಲಿದೆ. ಆದರೆ, ICC ODI ವಿಶ್ವಕಪ್ 2023 ರ ದೃಷ್ಟಿಯಿಂದ, BCCI ಈ ಕ್ರೀಡಾಕೂಟಕ್ಕೆ ಭಾರತದ B ತಂಡವನ್ನು ಕಳುಹಿಸಲು ನಿರ್ಧರಿಸಿದೆ. 3 ವರ್ಷಗಳ ಹಿಂದೆ ಭಾರತಕ್ಕಾಗಿ ಕೊನೆಯ ಪಂದ್ಯವನ್ನು ಆಡಿದ ಆಟಗಾರನನ್ನು ಈ ತಂಡದಲ್ಲಿ ಸೇರಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 44 ವರ್ಷದಿಂದ Team India ಹಂಬಲಿಸುತ್ತಿದ್ದ ಆ ಘಳಿಗೆಯನ್ನು ಒಂದೇ ಹೊಡೆತಕ್ಕೆ ಈಡೇರಿಸಿದ ರೋಹಿತ್-ಜೈಸ್ವಾಲ್!


ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದು, ಅದರ ನಾಯಕತ್ವವನ್ನು ಯುವ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್‌ ಗೆ ಹಸ್ತಾಂತರಿಸಲಾಗಿದೆ. ಇನ್ನು ಡ್ಯಾಶಿಂಗ್ ಆಲ್ ರೌಂಡರ್ ಶಿವಂ ದುಬೆ ಕೂಡ ಈ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ. ಶಿವಂ ದುಬೆ ಫೆಬ್ರವರಿ 2020 ರಲ್ಲಿ ಭಾರತಕ್ಕಾಗಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. ಆದರೆ ಐಪಿಎಲ್ 2023 ರ ಶ್ರೇಷ್ಠ ಪ್ರದರ್ಶನದ ಆಧಾರದ ಮೇಲೆ, ಈ ಆಟಗಾರ ಮತ್ತೊಮ್ಮೆ ತಂಡಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ.


ಶಿವಂ ದುಬೆ 2019 ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದಾರೆ. ಭಾರತ ಪರ 13 ಟಿ20 ಪಂದ್ಯಗಳಲ್ಲಿ 105 ರನ್ ಹಾಗೂ 5 ವಿಕೆಟ್ ಪಡೆದಿದ್ದಾರೆ. ಎಡಗೈ ಬ್ಯಾಟ್ಸ್‌ಮನ್ ದುಬೆ ಕಳೆದ ಋತುವಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ವಿಜೇತ ಚೆನ್ನೈ ಸೂಪರ್ ಕಿಂಗ್ಸ್‌ ನಿಂದ 158.33 ಸ್ಟ್ರೈಕ್ ರೇಟ್‌ನಲ್ಲಿ 16 ಪಂದ್ಯಗಳಲ್ಲಿ 418 ರನ್ ಗಳಿಸಿದ್ದರು. ಶಿವಂ ದುಬೆ ಕೆಳ ಕ್ರಮಾಂಕದಲ್ಲಿ ಫಿನಿಶರ್ ಪಾತ್ರವನ್ನು ನಿರ್ವಹಿಸಿದ್ದಾರೆ.


ಏಷ್ಯನ್ ಕ್ರೀಡಾಕೂಟಕ್ಕಾಗಿ ಭಾರತೀಯ ಪುರುಷರ ತಂಡ:


ರಿತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್).


ಇದನ್ನೂ ಓದಿ: ಬರೋಬ್ಬರಿ 91 ವರ್ಷಗಳ ಬಳಿಕ ಟೆಸ್ಟ್’ನಲ್ಲಿ ಈ ಶ್ರೇಷ್ಠ ದಾಖಲೆ ಬರೆದ Team India! ಕೆರಿಬಿಯನ್ ನಾಡಲ್ಲಿ ‘ಗತವೈಭವ’


ಸ್ಟ್ಯಾಂಡ್‌ ಬೈ ಆಟಗಾರರು: ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ ಮತ್ತು ಸಾಯಿ ಸುದರ್ಶನ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ