ಶೋಯೆಬ್ ಅಖ್ತರ್ ಆಸ್ಪತ್ರೆಗೆ ದಾಖಲು! ರಾವಲ್ಪಿಂಡಿ ಎಕ್ಸ್‌ಪ್ರೆಸ್`ಗೆ ಏನಾಗಿದೆ ಗೊತ್ತಾ..?
ಆಸ್ಟ್ರೇಲಿಯಾದ ಮೆಲ್ಬೋರ್ನ್ನ ಆಸ್ಪತ್ರೆಗೆ ದಾಖಲಾಗಿರುವ 46 ವರ್ಷದ ಶೋಯೆಬ್ ಅಖ್ತರ್ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ನವದೆಹಲಿ: ರಾವಲ್ಪಿಂಡಿ ಎಕ್ಸ್‌ಪ್ರೆಸ್ ಖ್ಯಾತಿಯ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಮೊಣಕಾಲಿನ ಸಮಸ್ಯೆಗೆ ಒಳಗಾಗಿರುವ ಶೋಯೇಬ್ ಅಖ್ತರ್ ಆಸ್ಪತ್ರೆಗೆ ದಾಖಲಾಗಿರುವ ವಿಡಿಯೋ ಹಂಚಿಕೊಂಡಿದ್ದಾರೆ.
ರೋಗಿಗಳ ಡ್ರೇಸ್ ಹಾಕಿಕೊಂಡು ಆಸ್ಪತ್ರೆಯ ಬೇಡ್ ಮೇಲೆ ಮಲಗಿರುವ ವಿಡಿಯೋವನ್ನು ಅಖ್ತರ್ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಸದ್ಯ ಮೊಣಕಾಲಿನ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರು ಶೀಘ್ರವೇ ಗುಣಮುಖರಾಗಲು ಪ್ರಾರ್ಥಿಸುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: CWG 2022: 40ನೇ ವಯಸ್ಸಿನಲ್ಲಿ ಕಮಾಲ್ ಮಾಡಿದ ಅಚಂತಾ ಶರತ್ ಕಮಲ್, ಭಾರತದ ಮಡಿಲಿಗೆ 22ನೇ ಚಿನ್ನ
ಆಸ್ಟ್ರೇಲಿಯಾದ ಮೆಲ್ಬೋರ್ನ್ನ ಆಸ್ಪತ್ರೆಗೆ ದಾಖಲಾಗಿರುವ 46 ವರ್ಷದ ಅಖ್ತರ್ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಎರಡೂ ಮೊಣಕಾಲಿಗೆ 5-6 ಗಂಟೆಗಳ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನೀವೆಲ್ಲರೂ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಬೇಕು. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಶೀಘ್ರವೇ ಚೇತರಿಸಿಕೊಳ್ಳುವಂತೆ ನನಗಾಗಿ ನೀವು ಪ್ರಾರ್ಥಿಸಬೇಕೆಂದು ಅಖ್ತರ್ ಮನವಿ ಮಾಡಿಕೊಂಡಿದ್ದಾರೆ.
‘ಕ್ರಿಕೆಟ್‍ನಿಂದ ನಿವೃತ್ತಿಯಾಗಿ 11 ವರ್ಷ ಕಳೆದರೂ ನಾನು ಈಗಲೂ ಸಂಕಷ್ಟದಲ್ಲಿದ್ದೇನೆ. ನಾನು ಇನ್ನೂ ನಾಲ್ಕೈದು ವರ್ಷ ಆಡಬಹುದಿತ್ತು. ಆದರೆ ಹಾಗೆ ಮಾಡಿದರೆ ನಾನು ವೀಲ್ ಚೇರ್ ಮೇಲೆ ಇರಬೇಕಾಗುತ್ತಿತ್ತು. ಹೀಗಾಗಿ ನಾನು ಕ್ರಿಕೆಟ್‍ಗೆ ಗುಡ್ ಬೈ ಹೇಳಿದೆ ಎಂದು ಅಖ್ತರ್ ಹೇಳಿದ್ದಾರೆ.
ಇದನ್ನೂ ಓದಿ: CWG 2022: ಭಾರತಕ್ಕೆ ಚಿನ್ನದ ‘ಸಿಂಧೂ’ರ – ಬ್ಯಾಡ್ಮಿಂಟನ್ ನಲ್ಲಿ ಬಂಗಾರ
ಪಾಕಿಸ್ತಾನ ಪರ ಅಖ್ತರ್ 46 ಟೆಸ್ಟ್, 163 ಏಕದಿನ ಮತ್ತು 15 T-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ 178, ಏಕದಿನದಲ್ಲಿ 247 ಮತ್ತು ಟಿ-20ಯಲ್ಲಿ 19 ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದಾರೆ. ಇದೀಗ ತಮ್ಮ ಗಾಯದ ಸಮಸ್ಯೆಗೆ ಶಾಶ್ವತ ಪರಿಹಾರ ಕಾಣಲು ಶಸ್ತ್ರಚಿಕಿತ್ಸೆಯ ಮೊರೆ ಹೋಗಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.