ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ ವಿಫಲವಾದ ನಂತರ ಈಗ ಒಂದು ತಿಂಗಳ ವಿರಾಮದಲ್ಲಿದ್ದಾರೆ. ಇಲ್ಲಿವರೆಗೆ ತಮ್ಮ ಕಳಪೆ ಫಾರ್ಮ್‌ನಲ್ಲಿ ಆಡುತ್ತಿದ್ದ ಕೊಹ್ಲಿ ಮುಂದಿನ ದಿನಗಳಲ್ಲಿ ಸುಧಾರಿಸಬೇಕಾಗಿದೆ. ಇನ್ನು ವಿರಾಟ್‌ ಕೊಹ್ಲಿಗೆ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಸ್ಥಾನ ನೀಡಿಲ್ಲ. ಅವರ ಸ್ಥಾನದಲ್ಲಿ ಬೇರೆ ಆಟಗಾರರು ಆಡುತ್ತಿರುವುದು ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್‌ಗೆ ತಲೆನೋವು ತರಿಸುವಂತಾಗಿದೆ. ಇನ್ನು ಟೀಂ ಇಂಡಿಯಾದ ಈ ಆಟಗಾರ ವಿರಾಟ್ ಬದಲಿಗೆ ಉತ್ತಮ ಆಟಗಾರ ಎನಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬೆಳ್ಳಗಾದ ಕೂದಲನ್ನು ಕಪ್ಪಾಗಿಸುತ್ತದೆ ಈ ಹಣ್ಣಿನ ಎಲೆಗಳು ..!


ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಇದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈ ಸರಣಿಯ ಮೊದಲು ಶ್ರೇಯಸ್ ಅಯ್ಯರ್ ಕಳಪೆ ಫಾರ್ಮ್‌ನಲ್ಲಿ ಹೋರಾಡುತ್ತಿದ್ದರು. ಆದರೆ ಅವರ ಬ್ಯಾಟ್ ಈ ಸರಣಿಯಲ್ಲಿ ಬ್ಯಾಕ್‌ ಟು ಬ್ಯಾಕ್‌ ಹಿಟ್‌ಗಳನ್ನು ಬಾರಿಸುತ್ತಿದೆ. ಇತ್ತೀಚೆಗಷ್ಟೇ ಅವರನ್ನು ಟೀಮ್ ಇಂಡಿಯಾದ ಪ್ಲೇಯಿಂಗ್‌ 11ನಿಂದಲೂ ಕೈಬಿಡಲಾಗಿತ್ತು. ಆದರೆ ಇದೀಗ ಮತ್ತೆ ಫಾರ್ಮ್‌ಗೆ ಮರಳಿದ್ದು, ಅದ್ಭುತವಾಗಿ ಆಟವಾಡುತ್ತಿದ್ದಾರೆ. 


ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 57 ಎಸೆತಗಳಲ್ಲಿ 54 ರನ್ ಗಳಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ 94.73 ಸ್ಟ್ರೈಕ್ ರೇಟ್‌ನಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇನ್ನು ಎರಡನೇ ಏಕದಿನ ಪಂದ್ಯದಲ್ಲಿ ಅವರು 71 ಎಸೆತಗಳಲ್ಲಿ 88.73 ಸ್ಟ್ರೈಕ್ ರೇಟ್‌ನಲ್ಲಿ 63 ರನ್ ಬಾರಿಸಿದ್ದಾರೆ. ಇದು ಅವರ ಸತತ ಎರಡನೇ ಅರ್ಧಶತಕ. ಅವರ ಈ ಅಮೋಘ ಫಾರ್ಮ್ ಮುಂಬರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ದೊಡ್ಡ ಸಮಸ್ಯೆಯಾಗಬಹುದು. 


ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉತ್ತಮ ಅಂಕಿಅಂಶ:                                                             
ಶ್ರೇಯಸ್ ಅಯ್ಯರ್ ಇದುವರೆಗೆ ಟೀಂ ಇಂಡಿಯಾ ಪರ 29 ಏಕದಿನ ಪಂದ್ಯಗಳನ್ನು ಆಡಿದ್ದು, 42.56 ಸರಾಸರಿಯಲ್ಲಿ 1064 ರನ್ ಗಳಿಸಿದ್ದಾರೆ. ಶ್ರೇಯಸ್ ಅಯ್ಯರ್ ಕೂಡ 42 ಟಿ20 ಪಂದ್ಯಗಳನ್ನಾಡಿದ್ದು, 34.48ರ ಸರಾಸರಿಯಲ್ಲಿ 931 ರನ್ ಗಳಿಸಿದ್ದಾರೆ. ಟೀಂ ಇಂಡಿಯಾ ಪರ ಇದುವರೆಗೆ 5 ಟೆಸ್ಟ್ ಪಂದ್ಯಗಳಲ್ಲಿ 422 ರನ್ ಗಳಿಸಿದ್ದಾರೆ.


ಇದನ್ನೂ ಓದಿ: Vicky Katrina: ಸಲ್ಮಾನ್‌ ಖಾನ್‌ ಬಳಿಕ ವಿಕ್ಕಿ ಕೌಶಲ್-ಕತ್ರಿನಾಗೆ ಬಂತು ಕೊಲೆ ಬೆದರಿಕೆ


ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರನ್ ಗಳಿಸಲು ಸಾಕಷ್ಟು ಕಷ್ಟಪಡುತ್ತಿದ್ದಾರೆ. ವಿರಾಟ್ ಈ ಕ್ಷಣದಲ್ಲಿ ಎಂತಹ ಕೆಟ್ಟ ಹಂತವನ್ನು ಎದುರಿಸುತ್ತಿದ್ದಾರೆಂದರೆ, ಅವರು 30 ರನ್ ಗಡಿ ದಾಟಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಎರಡು ಇನ್ನಿಂಗ್ಸ್‌ಗಳಲ್ಲಿ 31 ರನ್ ಗಳಿಸಿದ್ದರು. ಟಿ20 ಸರಣಿಯ 2 ಪಂದ್ಯಗಳಲ್ಲಿ ಕೇವಲ 12 ರನ್ ಗಳಿಸಲು ಸಾಧ್ಯವಾಗಿತ್ತು. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.