ರಾಖಿ ಕಟ್ಟಲು ಬಂದ ತಂಗಿಗೆ ಕಾಡಿದ ಶ್ರೇಯಸ್ ಅಯ್ಯರ್..! ಅಣ್ಣ-ತಂಗಿ ಕ್ಯೂಟ್‌ ವಿಡಿಯೋ ವೈರಲ್‌

Shreyas Iyer sister : ದೇಶಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ನಟ - ನಟಿಯರು, ರಾಜಕೀಯ ಗಣ್ಯರು, ಕ್ರಿಕೆಟ್ ಆಟಗಾರರು ತಮ್ಮ ಸಹೋದರ/ಸಹೋದರಿಯರ ಜೊತೆ ರಾಖಿ ಹಬ್ಬ ಆಚರಿಸುತ್ತಿದ್ದಾರೆ. ಈ ಮಧ್ಯ ಕ್ರಿಕೆಟಿಗ ಶ್ರೇಯಸ್‌ ಅಯ್ಯರ್‌ ತಮ್ಮ ತಂಗಿ ಶ್ರೇಷ್ಠಾ ಜೊತೆ ರಕ್ಷಾ ಬಂಧನ ಆಚರಿಸಿದ್ದು, ಈ ಕುರಿತು ವಿಡಿಯೋ ಹಂಚಿಕೊಂಡಿದ್ದಾರೆ.

Written by - Krishna N K | Last Updated : Aug 30, 2023, 05:20 PM IST
  • ದೇಶಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.
  • ಕ್ರಿಕೆಟಿಗ ಶ್ರೇಯಸ್‌ ಅಯ್ಯರ್‌ ತಮ್ಮ ತಂಗಿ ಶ್ರೇಷ್ಠಾ ಜೊತೆ ರಕ್ಷಾ ಬಂಧನ ಆಚರಿಸಿದ್ದಾರೆ.
  • ಈ ಕುರಿತು ವಿಡಿಯೋವನ್ನು ಶ್ರೇಯಸ್‌ ಅಯ್ಯರ್‌ ತಮ್ಮ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.
ರಾಖಿ ಕಟ್ಟಲು ಬಂದ ತಂಗಿಗೆ ಕಾಡಿದ ಶ್ರೇಯಸ್ ಅಯ್ಯರ್..! ಅಣ್ಣ-ತಂಗಿ ಕ್ಯೂಟ್‌ ವಿಡಿಯೋ ವೈರಲ್‌ title=

Shreyas Iyer : ಏಷ್ಯಾ ಕಪ್ 2023 ರಲ್ಲಿ ಆಡಲು ಶ್ರೇಯಸ್ ಅಯ್ಯರ್ ಸಜ್ಜಾಗಿದ್ದಾರೆ. ಆಗಸ್ಟ್ 30 ಮುಲ್ತಾನ್‌ನಲ್ಲಿ ಪಾಕಿಸ್ತಾನ ಮತ್ತು ನೇಪಾಳ ನಡುವಿನ ಪಂದ್ಯದೊಂದಿಗೆ ಕಾಂಟಿನೆಂಟಲ್ ಟೂರ್ನಮೆಂಟ್‌ಗೆ ಚಾಲನೆ ದೊರೆತಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 2 ರಂದು ಆಡಲಿದೆ. ಇದು ಪಾಕಿಸ್ತಾನದ ವಿರುದ್ಧ ಹೈ-ವೋಲ್ಟೇಜ್ ಆಟವಾಗಿದೆ. ಈ ಮಧ್ಯ ಶ್ರೇಯಸ್‌ ತನ್ನ ಸಹೋದರಿಯ ಜೊತೆ ರಕ್ಷಾ ಬಂಧನ ಆಚರಿಸಿದ್ದು, ವಿಡಿಯೋ ವೈರಲ್‌ ಆಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಆಟಗಾರ ಶ್ರೇಯಸ್‌ ಅಯ್ಯರ್‌ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ಮೊದಲು, ತಮ್ಮ ಸಹೋದರಿ ಶ್ರೇಷ್ಠಾ ಜೊತೆ ರಕ್ಷಾ ಬಂಧನ ಆಚರಿಸಿಕೊಂಡಿದ್ದಾರೆ. ಈ ಕುರಿತು ರೀಲ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ರಾಖಿ ಕಟ್ಟಲು ಬಂದ ತಂಗಿಯನ್ನು ಶ್ರೇಯಸ್‌ ಕಾಡುತ್ತಿರುವ ದೃಶ್ಯವಿದೆ.

 
 
 
 

 
 
 
 
 
 
 
 
 
 
 

A post shared by Shresta Iyer (@shresta002)

ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಏಷ್ಯಾಕಪ್’ನಿಂದ ಹೊರಬಿದ್ದ ಸ್ಟಾರ್ ಓಪನರ್! ಬದಲಿಯಾಗಿ 30ರ ಹರೆಯದ ಕ್ರಿಕೆಟಿಗನಿಗೆ ಸ್ಥಾನ

ಇನ್ನು ಅಣ್ಣನಿಗೆ ರಕ್ಷಾಬಂಧನದ ಶುಭ ಕೋರಿರುವ ಶೇಷ್ಠಾ, ʼನನ್ನ ಜೀವನದ ಅತ್ಯಂತ ಪ್ರಮುಖ ವ್ಯಕ್ತಿಗಳಲ್ಲಿ ನೀವು ಒಬ್ಬರು. ನಿಮ್ಮಂತ ಸಹೋದರನನ್ನು ಪಡೆದಿದ್ದಕ್ಕೆ ನಾನು ಹೆಮ್ಮೆ ಪಡುತ್ತೇನೆ. ನನ್ನ ಪ್ರತಿಯೊಂದು ಕೆಲಸಕ್ಕೆ ಬೆನ್ನೆಲುಬಾಗಿ ನಿಂತಿದ್ದಕ್ಕೆ ಧನ್ಯವಾದಗಳು ಅಂತ ಶೀರ್ಷಿಕೆ ಬರೆದುಕೊಂಡಿದ್ದಾರೆ.

ಸಧ್ಯ ಭಾರತ ತಂಡದ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ನಿರ್ಣಾಯಕ ನಂಬರ್ 4 ಸ್ಥಾನದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಈ ವರ್ಷದ ಆರಂಭದಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯ ನಂತರ ಶ್ರೇಯಸ್‌ ಐಪಿಎಲ್‌ನಿಂದ ಹೊರಗುಳಿದಿದ್ದರು. ಅವರ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಅವರು ಕೆಕೆಆರ್ ತಂಡವನ್ನು ಮುನ್ನಡೆಸಿದ್ದರು. ಮುಂದಿನ ವರ್ಷ ಅವರು ತಂಡದ ನಾಯಕರಾಗಿ ತಮ್ಮ ಸ್ಥಾನವನ್ನು ಮರಳಿ ಪಡೆಯುವ ಸಾಧ್ಯತೆಯಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News