Shubman gill on Rohit : ರೋಹಿತ್ ಶರ್ಮಾ ನಿವೃತ್ತರಾಗುತ್ತಾರೋ ಇಲ್ಲವೋ? ಚಾಂಪಿಯನ್ಸ್ ಟ್ರೋಫಿ ಫೈನಲ್ ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯವಾಗುತ್ತದೆಯೇ ಎಂಬ ಪ್ರಶ್ನೆಗಳು ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯ ಮನಸ್ಸಿನಲ್ಲಿವೆ. ಇದೀಗ ಕುರಿತು ಉಪನಾಯಕ ಶುಭಮನ್ ಗಿಲ್ ಪ್ರಮುಖ ಹೇಳಿಕೆ ನೀಡಿದ್ದಾರೆ..
ದುಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶುಭಮನ್ ಗಿಲ್ ಅವರನ್ನು ರೋಹಿತ್ ಶರ್ಮಾ ನಿವೃತ್ತಿ ಬಗ್ಗೆ ಕೇಳಲಾಯಿತು. ಈ ಪ್ರಶ್ನೆಗೆ ಗಿಲ್, ರೋಹಿತ್ ನಿವೃತ್ತಿಯ ಬಗ್ಗೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಇದರ ಬಗ್ಗೆ ಅವರು ಯೋಚಿಸುತ್ತಾರೆಂದು ನಾನು ಭಾವಿಸಿಲ್ಲ ಎಂದು ಗಿಲ್ ಹೇಳಿದರು.
ಇದನ್ನೂ ಓದಿ:ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇಂದಿನ ಫೈನಲ್‌ನಲ್ಲಿ 100% ಗೆಲ್ಲುವ ತಂಡ ಇದು..!
ಅಲ್ಲದೆ, 'ಫೈನಲ್ ಪಂದ್ಯಕ್ಕೂ ಮುನ್ನ ಪಂದ್ಯ ಗೆಲ್ಲುವ ಬಗ್ಗೆ ಚರ್ಚೆ ನಡೆದಿತ್ತು. ಚಾಂಪಿಯನ್ಸ್ ಟ್ರೋಫಿಯನ್ನು ಹೇಗೆ ಗೆಲ್ಲುವುದು ಎಂಬುದರ ಕುರಿತು ಚರ್ಚೆ ನಡೆಯಿತು. ರೋಹಿತ್ ಶರ್ಮಾ ನಿವೃತ್ತಿ ಬಗ್ಗೆ ತಂಡ ಅಥವಾ ನನ್ನೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ರೋಹಿತ್ ಶರ್ಮಾ ಅವರು ನಿವೃತ್ತಿಯ ಬಗ್ಗೆ ಯೋಚಿಸುತ್ತಿಲ್ಲ ಎಂದು ನಾನು ಭಾವಿಸುತ್ತೇನೆ. ಪಂದ್ಯ ಮುಗಿದ ನಂತರವೇ ಅವರು ತಮ್ಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಸಮಯದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಗಿಲ್ ಸ್ಪಷ್ಟ ಪಡಿಸಿದರು.
ರೋಹಿತ್ ಶರ್ಮಾ ಶೀಘ್ರದಲ್ಲೇ 38 ವರ್ಷಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ಅವರು ಟಿ20 ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಭಾರತವು 2027 ರಲ್ಲಿ ಮುಂದಿನ ಪ್ರಮುಖ ಐಸಿಸಿ ಟೂರ್ನಮೆಂಟ್ ಅನ್ನು ಆಡಲಿದೆ. ಆ ಸಮಯದಲ್ಲಿ ರೋಹಿತ್‌ಗೆ ಸುಮಾರು 40 ವರ್ಷ ವಯಸ್ಸಾಗಿರಬಹುದು. ಹಾಗಾಗಿ, ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಮುಂದೆ ಆಟವಾಡುವುದು ಕಷ್ಟಕರವೆಂದು ತೋರುತ್ತದೆ. ಈಗ ಚಾಂಪಿಯನ್ಸ್ ಟ್ರೋಫಿ ಫೈನಲ್ ನಂತರ ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂದು ಕಾಯ್ದು ನೋಡಬೇಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ









