ಗಾಯಗೊಂಡ ಶುಬ್ಮನ್ ಗಿಲ್,ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಹೊರಕ್ಕೆ
ಆಗಸ್ಟ್‌ನಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಭಾರತದ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಗಾಯದಿಂದಾಗಿ ಹೊರಗುಳಿದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮೂಲಗಳು (ಬಿಸಿಸಿಐ) ಬುಧವಾರ ತಿಳಿಸಿದೆ.
ನವದೆಹಲಿ: ಆಗಸ್ಟ್‌ನಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಭಾರತದ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಗಾಯದಿಂದಾಗಿ ಹೊರಗುಳಿದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮೂಲಗಳು (ಬಿಸಿಸಿಐ) ಬುಧವಾರ ತಿಳಿಸಿದೆ.
ಇದನ್ನೂ ಓದಿ: ದಿಯೋಧರ್ ಟ್ರೋಫಿ: ಕೊಹ್ಲಿಯ 10 ವರ್ಷ ಹಳೆಯ ದಾಖಲೆ ಮುರಿದ ಗಿಲ್
ಸ್ಟ್ಯಾಂಡ್‌ಬೈ ಆಟಗಾರನಾಗಿ ಹೆಸರಿಸಲ್ಪಟ್ಟ ಅಭಿಮನ್ಯು ಈಶ್ವರನ್ ಅವರ ಬದಲಿಯಾಗಿ ಆಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗ ಮಯಂಕ್ ಅಗರ್ವಾಲ್ ಮತ್ತು ಕೆ.ಎಲ್.ರಾಹುಲ್ ಅವರನ್ನು ಆರಂಭಿಕ ಸ್ಥಾನಕ್ಕೆ ಸ್ಪರ್ಧಿಗಳಾಗಿದ್ದಾರೆ, ಮತ್ತು ಸರಣಿ ಪ್ರಾರಂಭವಾದಾಗ ಅವರಲ್ಲಿ ಒಬ್ಬರು ರೋಹಿತ್ ಶರ್ಮಾ ಅವರ ಜೊತೆಗೆ ಇನಿಂಗ್ಸ್ ಪ್ರಾರಂಭಿಸುವ ಸಾದ್ಯತೆ ಇದೆ ಎನ್ನಲಾಗಿದೆ.
21 ವರ್ಷದ ಗಿಲ್ (Shubman Gill) ಎಂಟು ಟೆಸ್ಟ್ ಪಂದ್ಯಗಳನ್ನು ಆಡಿದ್ದು, 31.84 ಸರಾಸರಿಯಲ್ಲಿ 414 ರನ್ ಗಳಿಸಿದ್ದಾರೆ. ಮೂರು ಅರ್ಧಶತಕಗಳನ್ನು ಗಳಿಸಿರುವ ಗಿಲ್ ಅವರ ಗರಿಷ್ಟ ಸ್ಕೋರ್ 91 ಆಗಿದೆ.
IPL 2021: ನೋಡದೆ ಭವ್ಯವಾದ ಸಿಕ್ಸರ್ ಹೊಡೆದ Shubman Gill, ಅಚ್ಚರಿಗೊಂಡ ಫ್ಯಾನ್ಸ್
ಸೌತಾಂಪ್ಟನ್ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ಗಾಗಿ ಬಿಸಿಸಿಐ 20 ಸದಸ್ಯರ ತಂಡವನ್ನು ಘೋಷಿಸಿತ್ತು.ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಆಗಸ್ಟ್ 4 ರಂದು ನಾಟಿಂಗ್ಹ್ಯಾಮ್ನ ಟ್ರೆಂಟ್ ಬ್ರಿಡ್ಜ್ ನಲ್ಲಿ ಪ್ರಾರಂಭವಾಗಲಿದೆ.ಅದರ ನಂತರ ಲಾರ್ಡ್ಸ್, ಹೆಡಿಂಗ್ಲೆ, ಓವಲ್ ಮತ್ತು ಓಲ್ಡ್ ಟ್ರಾಫರ್ಡ್‌ನಲ್ಲಿ ಪಂದ್ಯಗಳು ನಡೆಯಲಿವೆ.
ಗಿಲ್ ನ್ಯೂಜಿಲೆಂಡ್ ವಿರುದ್ಧದ ಡಬ್ಲ್ಯೂಟಿಸಿ ಫೈನಲ್ ಪಂದ್ಯದ ಭಾಗವಾಗಿದ್ದರು ಆದರೆ ಅವರು ಉತ್ತಮ ಪ್ರದರ್ಶನ ನೀಡಲು ವಿಫಲರಾದರು, ಕೇನ್ ವಿಲಿಯಮ್ಸನ್ ನೇತೃತ್ವದ ತಂಡವು ಎಂಟು ವಿಕೆಟ್‌ಗಳಿಂದ ಜಯಗಳಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.