Shubman Gill T20I First Century: ಭಾರತ ತಂಡದ ಸೂಪರ್ ಸ್ಟಾರ್ ಓಪನರ್ ಶುಭಮನ್ ಗಿಲ್ ಅಹಮದಾಬಾದ್ ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಬ್ಬರಿಸಿದ್ದಾರೆ. ಪ್ರವಾಸಿ ತಂಡದ ಬೌಲರ್ ಗಳಿಗೆ ಬಿರುಸಿನ ಕ್ಲಾಸ್ ತೆಗೆದುಕೊಂಡು ಭರ್ಜರಿ ಶತಕ ಬಾರಿಸಿದ್ದಾರೆ. ಶುಭಮನ್ ಗಿಲ್ 54 ಎಸೆತಗಳಲ್ಲಿ ಶತಕ ಪೂರೈಸಿದ್ದು ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಲು ಸಹಾಯ ಮಾಡಿದೆ. ಇನ್ನು ಗಿಲ್ ತಮ್ಮ T20 ಅಂತಾರಾಷ್ಟ್ರೀಯ ವೃತ್ತಿಜೀವನದ ಮೊದಲ ಶತಕವನ್ನು ಬೌಂಡರಿಗಳೊಂದಿಗೆ ಪೂರ್ಣಗೊಳಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Asia Mixed Team Badminton Championship 2023: ಭಾರತದ ಗುಂಪು ಪ್ರಕಟ; ಈ ಆಟಗಾರರ ಮೇಲೆ ಹೆಚ್ಚಿದ ನಿರೀಕ್ಷೆ


ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ್ದಾರೆ. ನಾಯಕ ಹಾರ್ದಿಕ್ ಪಾಂಡ್ಯ ತಂಡದ ಒಬ್ಬ ಆಟಗಾರನ ಮೇಲೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿ ಈ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಅವರಿಗೆ ಅವಕಾಶ ನೀಡಿದರು. ಆ ಬ್ಯಾಟ್ಸ್‌ಮನ್ ಮೊದಲ ಎರಡು ಪಂದ್ಯಗಳಲ್ಲಿ ವಿಫಲರಾದರೆ, ಮೂರನೇ ಟಿ 20 ನಲ್ಲಿ ಶತಕ ಬಾರಿಸಿದ್ದಾರೆ.  


ಇನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಟಿ20 ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಟೀಂ ಇಂಡಿಯಾದ ಪ್ಲೇಯಿಂಗ್-11ರಲ್ಲಿ ಒಂದೇ ಒಂದು ಬದಲಾವಣೆಯಾಗಿದೆ. ಆತಿಥೇಯ ತಂಡದ ನಾಯಕರಾಗಿರುವ ಆಲ್ ರೌಂಡರ್ ವೇಗಿ ಉಮ್ರಾನ್ ಮಲಿಕ್ ಅವರಿಗೆ ಅವಕಾಶ ನೀಡಿದ್ದು, ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರನ್ನು ಮೂರನೇ ಟಿ20 ಪಂದ್ಯದಿಂದ ಕೈಬಿಡಲಾಗಿದೆ.


ನ್ಯೂಜಿಲೆಂಡ್ ತಂಡದಲ್ಲಿ ಬದಲಾವಣೆಯಾಗಿದ್ದು, ಜಾಕೋಬ್ ಡಫ್ಫಿ ಬದಲಿಗೆ ಬೆನ್ ಲಿಸ್ಟರ್ ಪ್ಲೇಯಿಂಗ್-11 ರಲ್ಲಿ ಅವಕಾಶ ಪಡೆದರು.


ಇದನ್ನೂ ಓದಿ: IND vs NZ : ಟೀಂ ಇಂಡಿಯಾದ ಈ ಆಟಗಾರನ ವೃತ್ತಿಜೀವನ ಇಂದು ಹಾರ್ದಿಕ್ ಪಾಂಡ್ಯ ಕೈಯಲ್ಲಿ!


ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 234 ರನ್ ಕಲೆ ಹಾಕಿದೆ. ಇಶಾನ್ ಕಿಶನ್ ಹೊರತುಪಡಿಸಿ ಉಳಿದೆಲ್ಲಾ ಆಟಗಾರರು ಉತ್ತಮ ಬ್ಯಾಟಿಂಗ್ ಮಾಡಿದ್ದಾರೆ. ಇನ್ನು ಶುಭಮನ್ ಗಿಲ್ ಅಂತೂ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿ 63 ಎಸೆತಕ್ಕೆ 126 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 12 ಫೋರ್, 7 ಸಿಕ್ಸ್ ಸೇರಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ