Team India : ಈ ಆಟಗಾರ ಟೀಂ ಇಂಡಿಯಾದ ಮುಂದಿನ ಕ್ಯಾಪ್ಟನ್ ಆಗಬೇಕು, ಫ್ಯಾನ್ಸ್ ಬೇಡಿಕೆ!
Shubman Gill : ಅಹಮದಾಬಾದ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯವನ್ನು ಭಾರತ ತಂಡವು ದಾಖಲೆಯ ಅಂತರದಿಂದ ಗೆದ್ದುಬಿಗಿದೆ. ಇದರೊಂದಿಗೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ 3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.
Shubman Gill Match Winner : ಅಹಮದಾಬಾದ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯವನ್ನು ಭಾರತ ತಂಡವು ದಾಖಲೆಯ ಅಂತರದಿಂದ ಗೆದ್ದುಬಿಗಿದೆ. ಇದರೊಂದಿಗೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ 3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ. ಮೂರನೇ ಟಿ20 ಪಂದ್ಯದಲ್ಲಿ, ಸ್ಟಾರ್ ಆರಂಭಿಕ ಆಟಗಾರ ಶುಭಮನ್ ಗಿಲ್ ಅದ್ಭುತ ಪ್ರದರ್ಶನ ನೀಡಿ, ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಈಗ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಂ ಇಂಡಿಯಾದ ಮುಂದಿನ ಕ್ಯಾಪ್ಟನ್ ಶುಭಮನ್ ಗಿಲ್ ಆಗಬೇಕು ಎಂದು ಅವರ ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ.
ಅಬ್ಬರದ ಪ್ರದರ್ಶನ ನೀಡಿದ ಶುಭಮನ್ ಗಿಲ್
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೂಪರ್‌ಸ್ಟಾರ್ ಆರಂಭಿಕ ಆಟಗಾರ ಶುಭಮನ್ ಗಿಲ್ ಬುಧವಾರ ಅಬ್ಬರದ ಪ್ರದರ್ಶನ ನೀಡಿದರು. ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಗಿಲ್ ಅಜೇಯ ಶತಕ ಗಳಿಸಿದರು. ಪಂಜಾಬ್ ಸೇರಿರುವ ಈ ಡ್ಯಾಶಿಂಗ್ ಬ್ಯಾಟ್ಸ್ ಮನ್ ಕಿವೀಸ್ ತಂಡದ ಬೌಲರ್ ಗಳಿಗೆ ಬಿರುಸಿನ ಕ್ಲಾಸ್ ತೆಗೆದುಕೊಂಡರು. ಶುಭಮನ್ ಗಿಲ್ 54 ಎಸೆತಗಳಲ್ಲಿ ತಮ್ಮ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದ ಶತಕವನ್ನು ಪೂರ್ಣಗೊಳಿಸಿದರು. 126 ರನ್ ಗಳಿಸಿ ಅಜೇಯರಾಗಿ ಮರಳಿದರು. ಈ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್‌ಗೆ 234 ರನ್‌ಗಳ ಬೃಹತ್ ಮೊತ್ತ ನೀಡಿತ್ತು.
ಇದನ್ನೂ ಓದಿ : Shubman Gill : ಶುಭಮನ್ ಗಿಲ್ ಶತಕದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಕೊಹ್ಲಿ!
'ಭವಿಷ್ಯದ ಕ್ಯಾಪ್ಟನ್' ಎಂದ ಫ್ಯಾನ್ಸ್
ಈಗ ಗಿಲ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಟ್ರೆಂಡಿಂಗ್ ಟಾಪಿಕ್ ಕೂಡ ಆಗಿದೆ. ಗಿಲ್ ಟ್ವಿಟರ್‌ನಲ್ಲಿ ಪೋಸ್ಟ್ ಅನ್ನು ಸಹ ಹಂಚಿಕೊಂಡಿದ್ದಾರೆ. ಇದರಲ್ಲಿ ಪಂದ್ಯಕ್ಕೆ ಸಂಬಂಧಿಸಿದ ತಮ್ಮ ಫೋಟೋಗಳನ್ನು ಪೋಸ್ಟ್ ಮಾಡಿ ಗಿಲ್, ಇದು ತುಂಬಾ ವಿಶೇಷವಾಗಿತ್ತು ಎಂದು ಬರೆದುಕೊಂಡಿದ್ದಾರೆ.
ಪೋಟಿಗಳಲ್ಲಿ ಅವರು ಶತಕ ಬಾರಿಸಿ ಸಂಭ್ರಮಿಸುತ್ತಿರುವುದನ್ನು ಕಾಣಬಹುದು. ಗಿಲ್ ಭಾರತದ ಮುಂದಿನ ಕ್ಯಾಪ್ಟನ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅನೇಕ ನೆಟ್ಟಿಗರು ಗಿಲ್ ಪೋಸ್ಟ್ ಕಾಮೆಂಟ್ ಬಾಕ್ಸ್ ನಲ್ಲಿ, ಭಾರತದ ಭವಿಷ್ಯ, ಕೆಲವರು ಟೀಂ ಇಂಡಿಯಾದ ಮುಂದಿನ ಕ್ಯಾಪ್ಟನ್ ಎಂದು ಕಾಮೆಂಟ್ ಮಾಡಿದ್ದಾರೆ.
ದಾಖಲೆಯ ಅಂತರದಿಂದ ಪಂದ್ಯ ಗೆದ್ದ ಭಾರತ
ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡುತ್ತಿರುವ ಟೀಂ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 2-1 ಅಂತರದಲ್ಲಿ ಜಯ ಸಾಧಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಆತಿಥೇಯರು 168 ರನ್‌ಗಳ ದಾಖಲೆಯ ಅಂತರದಿಂದ ಜಯ ಸಾಧಿಸಿದರು. ಬುಧವಾರ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 234 ರನ್‌ಗಳ ಬೃಹತ್ ಸ್ಕೋರ್ ಮಾಡಿತು, ನಂತರ ಕಿವೀಸ್ ತಂಡ 12.1 ಓವರ್‌ಗಳಲ್ಲಿ 66 ರನ್‌ಗಳಿಗೆ ಆಲೌಟ್ ಆಯಿತು. ಇದು ಟ್ವೆಂಟಿ-20 ಮಾದರಿಯಲ್ಲಿ ರನ್‌ಗಳ ವಿಷಯದಲ್ಲಿ ಭಾರತದ ಅತಿ ದೊಡ್ಡ ಗೆಲುವಾಗಿದೆ.
ಇದನ್ನೂ ಓದಿ : Team India : 2023 ರ ವಿಶ್ವಕಪ್‌ನಲ್ಲಿ ಆಡಲಿದ್ದಾರೆ ರೋಹಿತ್-ವಿರಾಟ್ ಈ ಶತ್ರು!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.