Shubman Gill Record: ಶುಭ್ಮನ್ ಗಿಲ್ ಏಕದಿನದಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಮೊದಲನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 149 ಎಸೆತಗಳಲ್ಲಿ 208 ರನ್ ಗಳಿಸಿ ಇತಿಹಾಸ ಸೃಷ್ಟಿಸಿದ್ದಾರೆ.


COMMERCIAL BREAK
SCROLL TO CONTINUE READING

23 ವರ್ಷ ವಯಸ್ಸಿನ ಶುಭ್ಮನ್, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ನಂತರ ಏಕದಿನ ಪಂದ್ಯಗಳಲ್ಲಿ ಭಾರತಕ್ಕಾಗಿ ದ್ವಿಶತಕಗಳನ್ನು ಗಳಿಸಿದ ಐದನೇ ಭಾರತೀಯರಾಗಿ ಹೊರಹೊಮ್ಮಿದ್ದಾರೆ.


ಇದನ್ನೂ ಓದಿ: Shubman Gill Double Century : ದ್ವಿಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ ಶುಭಮನ್ ಗಿಲ್!


ಇದರ ಜೊತೆಗೆ ಗಿಲ್ ODI ಪಂದ್ಯಗಳಲ್ಲಿ ಅತ್ಯಂತ ವೇಗವಾಗಿ 1000 ರನ್ ಕಲೆ ಹಾಕಿದವರ ಪಟ್ಟಿಯಲ್ಲಿ ಮೊದಲಿಗರಾಗಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಭಾರತದ ಪರ ಏಕದಿನದಲ್ಲಿ ಅತಿ ವೇಗವಾಗಿ 1000 ರನ್ ಗಳಿಸಿದ್ದರು. ಇಬ್ಬರೂ 24 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು. ಗಿಲ್ ಅವರಿಗಿಂತ 5 ಇನ್ನಿಂಗ್ಸ್ ಕಡಿಮೆ ಇರುವಾಗಲೇ ಈ ದಾಖಲೆ ಮಾಡಿದ್ದಾರೆ. ಗಿಲ್ ಅವರು ತಮ್ಮ 19ನೇ ಇನ್ನಿಂಗ್ಸ್‌ನಲ್ಲಿ 106 ರನ್‌ಗಳನ್ನು ತಲುಪಿದಾಗ ಈ ಗಡಿಯನ್ನು ದಾಟಿದ್ದಾರೆ.


ತಿರುವನಂತಪುರಂನಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸಹ ಗಿಲ್ ಶತಕ ಬಾರಿಸಿದ್ದರು. ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಶುಭ್ಮನ್ ಗಿಲ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 500 ರನ್‌ಗಳನ್ನು ವೇಗವಾಗಿ ತಲುಪಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈ ದಾಖಲೆ ಮುಟ್ಟಲು 10 ಇನ್ನಿಂಗ್ಸ್ ತೆಗೆದುಕೊಂಡಿದ್ದರು. ದಕ್ಷಿಣ ಆಫ್ರಿಕಾದ ಜನೆಮನ್ ಮಲಾನ್ ಕೇವಲ ಏಳು ಇನ್ನಿಂಗ್ಸ್‌ಗಳಲ್ಲಿ ಈ ದಾಖಲೆ ಮಾಡಿದ್ದಾರೆ.


ಶುಭ್ಮನ್ ಗಿಲ್ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ 150 ರನ್ ಬಾರಿಸಿದ ಅತ್ಯಂತ ಕಿರಿಯ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ ಸಾಧನೆಯನ್ನು ಗಿಲ್ ಮೀರಿಸಿದ್ದಾರೆ. ಅಂದರೆ 2012ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಮೀರ್‌ಪುರದಲ್ಲಿ 183 ರನ್ ಗಳಿಸಿದಾಗ ಕೊಹ್ಲಿಗೆ 23 ವರ್ಷ ವಯಸ್ಸಾಗಿತ್ತು.


ಇದನ್ನೂ ಓದಿ: Rohit Sharma: ಮೊದಲ ಏಕದಿನ ಪಂದ್ಯದಲ್ಲಿ ಈ ಆಟಗಾರನಿಗೆ ಸ್ಥಾನ ನೀಡಿ ತಪ್ಪು ಮಾಡಿದ ರೋಹಿತ್!


ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದಿನಿಂದ ಆರಂಭವಾಗಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಸೆಣಸಾಡುತ್ತಿದೆ. ಉಳಿದ ಏಕದಿನ ಪಂದ್ಯಗಳು ಕ್ರಮವಾಗಿ ಜನವರಿ 21 ಮತ್ತು 24 ರಂದು ರಾಯ್‌ಪುರ ಮತ್ತು ಇಂದೋರ್‌ನಲ್ಲಿ ನಡೆಯಲಿವೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.