ಮತ್ತೆ ನಿಧಾನಗತಿಯ ಓವರ್ ರೇಟ್ : ಡೆಲ್ಲಿ ಕ್ಯಾಪಿಟಲ್ ತಂಡದ ನಾಯಕನಿಗೆ 12 ಲಕ್ಷ ದಂಡ
ಐಪಿಎಲ್ 2024 ರ 13ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ವಿರುದ್ಧ ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಅಂತರಗಳಿಂದ ಪಂದ್ಯವನ್ನು ಗೆಲ್ಲುವ ಮೂಲಕ ಮೊದಲ ಗೆಲುವನ್ನು ಸಂಭ್ರಮಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಯಕ ರಿಷಬ್ ಪಂತ್ ಹಾಗೂ ಡೇವಿಡ್ ವಾರ್ನರ್ ಭರ್ಜರಿ ಆಟದಿಂದ ಗೆಲುವನ್ನು ಸಾಧಿಸಿತ್ತು
ಇದನ್ನು ಓದಿ : ಇಂದಿನಿಂದ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ: ಪ್ರತಿ ಯುನಿಟ್ಗೆ 1.10 ರೂ. ಕಡಿತ
ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ 12 ಲಕ್ಷ ರೂ. ದಂಡ ಭರಿಸುವಂತಾಗಿದೆ.
ಐಪಿಎಲ್ 2024 ಈ ಟೂರ್ನಿಯ ನಿಧಾನಗತಿಯ ಓವರ್ ರೇಟ್ ಆಗಿದ್ದು, ಇದಕ್ಕೂ ಮುಂಚೆ ಶುಭಮನ್ ಗಿಲ್ ಅವರಿಗೆ ಕೂಡ ನಿಧಾನಗತಿಯ ಓವರ್ ರೇಟ್ ಗಾಗಿ ದಂಡ ವಿಧಿಸಲಾಗಿತ್ತು. ಇದೀಗ ಈ ಟೂರ್ನಿಯಲ್ಲಿ ಮತ್ತೆ ನಿಧಾನಗತಿಯ ಓವರ್ ರೇಟ್ ಕಂಡು ಬಂದಿದೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಇದನ್ನು ಓದಿ : ಮಹಿಳೆ ಜೊತೆ ಅನುಚಿತ ವರ್ತನೆ: ಶಿವರಾಜ್ ಕೆಆರ್ ಪೇಟೆ ವಿರುದ್ಧ ದೂರು !
'ಐಪಿಎಲ್ 2024ರ ಆವೃತ್ತಿಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಅವರಿಗೆ ದಂಡ ವಿಧಿಸಲಾಗಿದೆ' ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಲಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.