ಮಹಿಳಾ ಏಷ್ಯಾಕಪ್​ 2022ರಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಾರತ ಇಂದು ಥಾಯ್ಲೆಂಡ್ ವಿರುದ್ಧ ಗೆಲುವು ಸಾಧಿಸಿ, ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಈ ಪಂದ್ಯದಲ್ಲಿ 15.1 ಓವರ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡ ಥಾಯ್ಲೆಂಡ್ ಕೇವಲ 37 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನತ್ತಿದ ಭಾರತ ಒಂದು ವಿಕೆಟ್ ನಷ್ಟಕ್ಕೆ ಕೇವಲ 6 ಓವರ್ ನಲ್ಲಿ 40 ರನ್ ಬಾರಿಸಿ ಸೆಮಿ ಫೈನಲ್ ಪ್ರವೇಶಿಸಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ICC Player of the Month: ಐಸಿಸಿ ತಿಂಗಳ ಶ್ರೇಷ್ಠ ಆಟಗಾರ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಮಹಿಳೆ ಹರ್ಮನ್ ಪ್ರೀತ್ ಕೌರ್


ಈ ಗೆಲುವಿನ ಪಾಯಿಂಟ್ ಮೂಲಕ ಅಂಕಪಟ್ಟಿಯಲ್ಲಿ ಹರ್ಮನ್​ ಪಡೆ ನಂ.1 ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇನ್ನೊಂದೆಡೆ ಭಾರತದ ಸ್ಟಾರ್ ಓಪನರ್ ಸ್ಮೃತಿ ಮಂಧಾನ ಈ ಪಂದ್ಯದೊಂದಿಗೆ ದಾಖಲೆ ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ಪಂದ್ಯಗಳನ್ನು ಪೂರ್ಣಗೊಳಿಸಿದ ಎರಡನೇ ಭಾರತೀಯ ಆಟಗಾರ್ತಿಯ ಎಂಬ ಹೆಗ್ಗಳಿಕೆಗೆ ಮಂಧಾನ ಪಾತ್ರರಾಗಿದ್ದಾರೆ.


ಇನ್ನು ಇವರ ಹೊರತಾಗಿ ಹರ್ಮನ್‌ ಪ್ರೀತ್ ಕೌರ್ ಸಹ ಭಾರತದ ಪರ 100 T20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಹರ್ಮನ್‌ಪ್ರೀತ್ ಭಾರತದ ಪರ 135 T20 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, 27.28 ಸರಾಸರಿಯಲ್ಲಿ 2,647 ಗಳಿಸಿದ್ದಾರೆ. ಜೊತೆಗೆ ಒಂದು ಶತಕ ಮತ್ತು ಎಂಟು ಅರ್ಧ ಶತಕಗಳು ಬಾರಿಸಿದ್ದಾರೆ.


ಇದನ್ನೂ ಓದಿ: ಮಹಿಳಾ ಏಷ್ಯಾಕಪ್ 2022: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಸೆಮಿ ಫೈನಲ್ ಪ್ರವೇಶ


ಇಂದು 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡಿರುವ ಸ್ಮೃತಿ, 26.96 ಸರಾಸರಿಯಲ್ಲಿ 2,373 ರನ್ ಗಳಿಸಿದ್ದಾರೆ. ಜೊತೆಗೆ 17 ಅರ್ಧ ಶತಕಗಳನ್ನು ಬಾರಿಸಿರುವ ಸ್ಮೃತಿ ಅವರ ಅತ್ಯುತ್ತಮ ಸ್ಕೋರ್ 86 ರನ್ ಆಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.