IND vs WI: ವಿಂಡೀಸ್ ವಿರುದ್ಧ ಮೊದಲ T20 ಸೋಲಲು ಈತನೇ ಕಾರಣ! ಪಬ್ಲಿಕ್’ನಲ್ಲಿಯೇ ನಿಂದಿಸಲ್ಪಟ್ಟ ಕ್ರಿಕೆಟಿಗ
IND vs WI 1st Cricket, Shubman Gill: ವೆಸ್ಟ್ ಇಂಡೀಸ್ ವಿರುದ್ಧ ಗುರುವಾರ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ 4 ರನ್‌ಗಳ ಸೋಲನ್ನು ಎದುರಿಸಬೇಕಾಯಿತು.
IND vs WI 1st Cricket, Shubman Gill: ಟೀಂ ಇಂಡಿಯಾದ ಆಟಗಾರನೊಬ್ಬ ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಆತನನ್ನು ತೀವ್ರವಾಗಿ ಟ್ರೋಲ್ ಮಾಡಲಾಗುತ್ತಿದೆ. ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿಗೆ ಈ ಆಟಗಾರ ಎಂದು ಫ್ಯಾನ್ಸ್ ಗರಂ ಆಗಿದ್ದಾರೆ.
ಇದನ್ನೂ ಓದಿ: ವಿಕೆಟ್ ಕೀಪರ್ ಆಗಿದ್ದು ಬ್ಯಾಟಿಂಗ್’ನಲ್ಲಿ ಅತೀ ಹೆಚ್ಚು ರನ್ ಕಲೆ ಹಾಕಿದ ಕ್ರಿಕೆಟಿಗ ಯಾರು? ಅಗ್ರ 5ರಲ್ಲಿ ನಮ್ಮವ ಒಬ್ಬನೇ
ವೆಸ್ಟ್ ಇಂಡೀಸ್ ವಿರುದ್ಧ ಗುರುವಾರ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ 4 ರನ್‌ಗಳ ಸೋಲನ್ನು ಎದುರಿಸಬೇಕಾಯಿತು. ಐದು ಪಂದ್ಯಗಳ ಈ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ವಿಂಡೀಸ್ ವಿರುದ್ಧ 0-1 ಅಂತರದ ಹಿನ್ನಡೆ ಅನುಭವಿಸಿದೆ.
ವೆಸ್ಟ್ ಇಂಡೀಸ್ ವಿರುದ್ಧ ಗುರುವಾರ ನಡೆದ ಮೊದಲ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ 4 ರನ್’ಗಳ ಸೋಲಿನ ನಂತರ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ತೀವ್ರವಾಗಿ ಟ್ರೋಲ್ ಮಾಡಲಾಗುತ್ತಿದೆ. ಶುಭ್ಮನ್ ಗಿಲ್ ಅವರನ್ನು ಭಾರತದ ಸೋಲಿನ ದೊಡ್ಡ ಅಪರಾಧಿ ಎಂದು ಸಾರ್ವಜನಿಕವಾಗಿ ಹೇಳಲಾಗುತ್ತಿದೆ.
ಶುಭ್ಮನ್ ಗಿಲ್ ಮೊದಲ ಟಿ20 ಪಂದ್ಯದಲ್ಲಿ ಸೋಲು ಕಂಡಿದ್ದರು. ಕೇವಲ 3 ರನ್ ಗಳಿಸಿ ಪೆವಿಲಿಯನ್ ಹಾದಿಗೆ ಮರಳಿದ್ದರು. ಈ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಶುಭ್ಮನ್ ಗಿಲ್ ಇಲ್ಲಿಯವರೆಗೆ 2 ಟೆಸ್ಟ್, 3 ODI ಮತ್ತು 1 T20 ಪಂದ್ಯವನ್ನು ಆಡಿದ್ದಾರೆ, ಇದರಲ್ಲಿ ಅವರ ಪ್ರದರ್ಶನವು ತುಂಬಾ ಕಳಪೆಯಾಗಿದೆ.
ಶುಭಮನ್ ಗಿಲ್ ವೆಸ್ಟ್ ಇಂಡೀಸ್ ಬೌಲರ್‌ಗಳ ಮುಂದೆ ರನ್ ಗಾಗಿ ಹೋರಾಡುತ್ತಿರುವುದು ಕಂಡುಬಂದಿದೆ. ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ಶುಭಹಮನ್ ಗಿಲ್ ಕೇವಲ 49 ರನ್ ಗಳಿಸಲು ಶಕ್ತರಾಗಿದ್ದಾರೆ. 3 ಏಕದಿನ ಪಂದ್ಯಗಳಲ್ಲಿ ಶುಭ್ಮನ್ ಗಿಲ್ 126 ರನ್ ಗಳಿಸಿದರೆ, ಈ ಪ್ರವಾಸದಲ್ಲಿ ಇದುವರೆಗೆ ಕೇವಲ ಒಂದು ಅರ್ಧಶತಕವನ್ನು ಗಳಿಸಿದ್ದಾರೆ.
ಇದನ್ನೂ ಓದಿ: ಇನ್ಮುಂದೆ RCBಗೆ ಜಿಂಬಾಬ್ವೆಯ ಮಾಜಿ ಆಟಗಾರ ನೂತನ ಹೆಡ್’ಕೋಚ್! ಹೊಸ ಪರ್ವದಲ್ಲಿ “ಈ ಸಲ ಕಪ್ ನಮ್ದೇ…”
ಗುರುವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ 3 ರನ್ ಗಳಿಸಿ ಔಟಾದ ಶುಭ್ಮನ್ ಗಿಲ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ರಂತರ ಟ್ರೋಲ್ ಮಾಡಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ