WTC 2025 Final: ಕಳಚಿದ ಚೋಕರ್ಸ್‌ ಹಣೆಪಟ್ಟಿ: 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದ ದಕ್ಷಿಣ ಆಫ್ರಿಕಾ!!

ಐಸಿಸಿ ಟೂರ್ನಿಯ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಪರ ಮೊದಲ ಶತಕ ಸಿಡಿಸಿದ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದ ಐಡೆನ್ ಮಾರ್ಕ್ರಾಮ್ ಬರೋಬ್ಬರಿ 207 ಎಸೆತಗಳಲ್ಲಿ 14 ಬೌಂಡರಿ ಇದ್ದ 136 ರನ್ ಗಳಿಸಿದರು.  ಈ ಮೂಲಕ ತಂಡಕ್ಕೆ ಐತಿಹಾಸಿಕ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.

Written by - Puttaraj K Alur | Last Updated : Jun 14, 2025, 08:29 PM IST
  • 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದು ಐತಿಹಾಸಿ ಸಾಧನೆ ಮಾಡಿದ ದಕ್ಷಿಣ ಆಫ್ರಿಕಾ
  • ಐಡೆನ್ ಮಾರ್ಕ್ರಾಮ್ ಮತ್ತು ನಾಯಕ ತೆಂಬಾ ಬವುಮಾ ಆಟಕ್ಕೆ ಕಳಚಿದ ಚೋಕರ್ಸ್‌ ಹಣೆಪಟ್ಟಿ
  • ಕ್ರಿಕೆಟ್‌ ಕಾಶಿ ಲಾರ್ಡ್ಸ್‌ ಮೈದಾನದಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಮಣಿಸಿದ ದ.ಆಫ್ರಿಕಾ
WTC 2025 Final: ಕಳಚಿದ ಚೋಕರ್ಸ್‌ ಹಣೆಪಟ್ಟಿ: 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದ ದಕ್ಷಿಣ ಆಫ್ರಿಕಾ!!

WTC 2025 Final: ಕ್ರಿಕೆಟ್‌ ಕಾಶಿ ಲಂಡನ್‌ನ ಲಾರ್ಡ್ಸ್‌ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (WTC) ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿತು. ಬಲಿಷ್ಠ ಆಸೀಸ್‌ ತಂಡಕ್ಕೆ ಮಣ್ಣುಮುಕ್ಕಿಸಿದ ಹರಿಣಗಳು ತಮ್ಮ ಚೋಕರ್ಸ್‌ ಹಣೆಪಟ್ಟಿಯನ್ನು ಯಶಸ್ವಿಯಾಗಿ ಕಳಚಿಕೊಂಡಿವೆ. 

Add Zee News as a Preferred Source

ಬರೋಬ್ಬರಿ 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದ ದಕ್ಷಿಣ ಆಫ್ರಿಕಾ ಹೊಸ ಇತಿಹಾಸ ನಿರ್ಮಿಸಿದೆ. 282 ರನ್‌ಗಳ ಟಾರ್ಗೆಟ್‌ಅನ್ನು ಯಶಸ್ವಿಯಾಗಿ ಚೇಸ್‌ ಮಾಡುವ ಮೂಲಕ ಟ್ರೋಫಿ ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದೆ. ಆರಂಭಿಕ ಆಟಗಾರ ಐಡೆನ್ ಮಾರ್ಕ್ರಾಮ್ ಅವರ ದಾಖಲೆಯ ಶತಕ ಮತ್ತು ತೆಂಬಾ ಬವುಮಾರ ನಾಯಕನ ಆಟಕ್ಕೆ ಈ ಐತಿಹಾಸಿಕ ಗೆಲುವು ಸಿಕ್ಕಿದೆ. ಈ ಜೋಡಿ 3ನೇ ವಿಕೆಟ್‌ಗೆ 147 ರನ್‌ಗಳ ಅದ್ಭುತ ಜೊತೆಯಾಟವಾಡಿ ತಂಡದ ಗೆಲುವಿಗೆ ಅಮೂಲ್ಯ ಕೊಡುಗೆ ನೀಡಿದರು. 

ಇದನ್ನೂ ಓದಿ: ಇಷ್ಟೆಲ್ಲಾ ಯಶಸ್ಸು, ಖ್ಯಾತಿ, ಅಪಾರ ಸಂಪತ್ತಿದ್ದರೂ... ಆತ್ಮಹತ್ಯೆಗೆ ಯತ್ನಿಸಿದ್ದ ಟೀಂ ಇಂಡಿಯಾ ಸ್ಟಾರ್‌ ಬೌಲರ್‌ ಮೊಹಮ್ಮದ್‌ ಶಮಿ!! ಕಾರಣವೇನು?

ಕಳೆದ 27 ವರ್ಷಗಳಿಂದಲೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿರದ ದಕ್ಷಿಣ ಆಫ್ರಿಕಾ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ ಆಗುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಐಸಿಸಿ ಟೂರ್ನಿಯ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಪರ ಮೊದಲ ಶತಕ ಸಿಡಿಸಿದ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದ ಐಡೆನ್ ಮಾರ್ಕ್ರಾಮ್ ಬರೋಬ್ಬರಿ 207 ಎಸೆತಗಳಲ್ಲಿ 14 ಬೌಂಡರಿ ಇದ್ದ 136 ರನ್ ಗಳಿಸಿದರು. 

ಆಸೀಸ್‌ ಮಾರಕ ಬೌಲಿಂಗ್!!

ಈ ಮಹತ್ವದ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವುಮಾ ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡಿದ್ದರು. ಅದರಂತೆ ಆಸೀಸ್‌ ಮೊದಲ ಇನ್ಸಿಂಗ್ಸ್‌ನಲ್ಲಿ 56.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 212 ರನ್‌ ಗಳಿಸಿತ್ತು. ಆಸೀಸ್‌ ಬೌಲರ್‌ಗಳ ಮಾರಕ ದಾಳಿಗೆ ನಲುಗಿದ್ದ ದಕ್ಷಿಣ ಆಫ್ರಿಕಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 57.1 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನ ಕಳೆದುಕೊಂಡು ಕೇವಲ 138 ರನ್‌ ಗಳಿಸಲಷ್ಟೇ ಶಕ್ತವಾಗಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ 74 ರನ್‌ಗಳ ಮುನ್ನಡೆ ಕಾಯ್ದುಕೊಂಡ ಆಸ್ಟ್ರೇಲಿಯಾ 2ನೇ ಇನ್ಸಿಂಗ್ಸ್‌ನಲ್ಲಿ 65 ಓವರ್‌ಗಳಲ್ಲಿ 207 ರನ್‌ಗೆ ಆಲೌಟ್‌ ಆಯಿತು.‌

 282 ರನ್‌ಗಳ ಗುರಿ

ಆಸ್ಟ್ರೇಲಿಯಾ ಪರ ಮಿಚೆಲ್‌ ಸ್ಟಾರ್ಕ್ 58 ಮತ್ತು ಅಲೆಕ್ಸ್‌ ಕ್ಯಾರಿ 43 ರನ್‌ ಗಳಿಸಿ ಉತ್ತಮ ಆಟವಾಡಿದರು. ದಕ್ಷಿಣ ಆಫ್ರಿಕಾ ಪರ ಬೌಲಿಂಗ್‌ನಲ್ಲಿ ಕಗಿಸೋ ರಬಾಡಾ 59ಕ್ಕೆ 4 ಮತ್ತು ಲುಂಗಿ ಎನ್‌ಗಿಡಿ 38ಕ್ಕೆ 3 ವಿಕೆಟ್‌ ಪಡೆದು ಮಿಂಚಿದರು. 282 ರನ್‌ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಆರಂಭಿಕ ಆಘಾತ ಅನುಭವಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿಯೂ ಕಳಪೆ ಆಟವಾಡಿದ್ದ ರಯಾನ್ ರಿಕೆಲ್ಟನ್ ಕೇವಲ 6 ರನ್‌ ಗಳಿಸಿ ಔಟಾದರು. ಆದರೆ ಆರಂಭಿಕ ಆಟಗಾರ ಐಡೆನ್ ಮಾರ್ಕ್ರಾಮ್ ಕ್ರೀಸ್‌ಗೆ ಕಚ್ಚಿನಿಂತು ಆಟವಾಡಿದರು. ಆಸೀಸ್‌ ಬೌಲರ್‌ಗಳ ಬೆವರಿಳಿಸಿದ ಮಾಕ್ರಾಮ್‌ಗೆ ನಾಯಕ ತೆಂಬಾ ಬವುಮಾ ಉತ್ತಮ ಸಾಥ್‌ ನೀಡಿದರು. 

ಇದನ್ನೂ ಓದಿ: ವಿನೋದ್ ಕಾಂಬ್ಳಿಗೆ ಆ ಹುಡುಗೀರ ಸಹವಾಸ ಮಾಡಬೇಡ ಅಂತ ಮೊದಲೇ ಹೇಳಿದ್ದೆ..! ಮಾಜಿ ಕ್ರಿಕೆಟಿಗನ ದುಶ್ಚಟ ಬಟಾಬಯಲು

ಐಡೆನ್ ಮಾರ್ಕ್ರಾಮ್ ದಾಖಲೆಯ ಶತಕ!

3ನೇ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ 56 ಓವರ್‌ಗಳಲ್ಲಿ 2 ವಿಕೆಟ್‌ಗೆ 213 ರನ್‌ ಗಳಿಸಿತ್ತು. ಈ ವೇಳೆ ಮಾಕ್ರಾಮ್‌ (ಅಜೇಯ 102) ಮತ್ತು ಬವುಮಾ (ಅಜೇಯ 65) ರನ್‌ ಗಳಿಸಿ ತಂಡವನ್ನ ಗೆಲುವಿನ ಹಾದಿಗೆ ತಂದಿದ್ದರು. ಇಂದು 4ನೇ ದಿನದಾಟ ಮುಂದುವರಿಸಿದ ದ.ಆಫ್ರಿಕಾ ಅಂತಿಮವಾಗಿ 83.4 ಓವರ್‌ಗಳಲ್ಲಿ ಐದು ವಿಕೆಟ್‌ ಕಳೆದುಕೊಂಡು ಚಾಂಪಿಯನ್‌ ಪಟ್ಟಕ್ಕೇರಿತು. ಬವುಮಾ 134 ಎಸೆತಗಳಲ್ಲಿ 5 ಬೌಂಡರಿ ಇದ್ದ 66 ರನ್‌ ಗಳಿಸಿದರೆ, ಮಾಕ್ರಮ್‌ (207 ಎಸೆತಗಳಲ್ಲಿ 14 ಬೌಂಡರಿ ಇದ್ದ 136 ರನ್‌) ದಾಖಲೆಯ ಶತಕ ಸಿಡಿಸಿ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಆಸ್ಟ್ರೇಲಿಯಾ ಪರ ಮಿಚೆಲ್‌ ಸ್ಟಾರ್ಕ್ 66ಕ್ಕೆ 3 ವಿಕೆಟ್‌ ಪಡೆದು ಮಿಂಚಿದರು. ಈ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ಕಗಿಸೋ ರಬಾಡಾ 9 ವಿಕೆಟ್ ಕಬಳಿಸುವ ಮೂಲಕ ಮಿಂಚಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News