ನವದೆಹಲಿ: ಸೆಂಚುರಿಯನ್ ಸೂಪರ್ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಈಗ ಹೊಸ ಇತಿಹಾಸ ನಿರ್ಮಿಸಿದೆ.ಈ ಮೈದಾನದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದಿರುವ ಏಷ್ಯಾದ ಮೊದಲ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕಳಪೆ ಪ್ರದರ್ಶನ ಹಿನ್ನೆಲೆ ತಂಡದಿಂದ ಹೊರ ಬೀಳುವ ಸಾಧ್ಯತೆ, ರಿಷಬ್ ಪಂತ್ ವೃತ್ತಿಜೀವನಕ್ಕೆ ಮುಳುವಾಗಲಿದ್ದಾರೆ ಈ ಇಬ್ಬರು ಆಟಗಾರರು


ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ  ಭಾರತ ತಂಡವು ಮೊದಲ ಇನಿಂಗ್ಸ್ ನಲ್ಲಿ ಕೆ.ಎಲ್ ರಾಹುಲ್ ಅವರ 123 ಹಾಗೂ ಮಾಯಂಕ್ ಅಗರ್ವಾಲ್ ಅವರ 60 ಅರ್ಧಶತಕದಿಂದಾಗಿ 327 ರನ್ ಗಳಿಗೆ ಆಲ್ ಔಟ್ ಆಗಿತ್ತು, ಇದಾದ ನಂತರ ಮೊದಲ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡವು ಶಮಿ ಅವರು ಐದು ವಿಕೆಟ್ ಗಳನ್ನು ಕಬಳಿಸುವ ಮೂಲಕ ಹರಿಣಗಳ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು. ಇದರಿಂದಾಗಿ ಅದು ಕೇವಲ 197 ರನ್ ಗಳಿಗೆ ಆಲ್ ಔಟ್ ಆಯಿತು.


ಕೇರಳದ ಅಥ್ಲೀಟ್ ಜಿತಿನ್ ಜೊತೆ ಸಪ್ತಪದಿ ತುಳಿದ ಕರ್ನಾಟಕದ ಹೆಮ್ಮೆಯ ಅಥ್ಲೀಟ್ ಪೂವಮ್ಮ


ಎರಡನೇ ಇನಿಂಗ್ಸ್ ನಲ್ಲಿ ಭಾರತ ತಂಡವು 174 ರನ್ ಗಳಿಗೆ ಆಲ್ ಔಟ್ ಆದರೂ ಕೂಡ ಭಾರತ ತಂಡಕ್ಕೆ ಬೌಲರ್ ಗಳು ಆಸರೆಯಾದರು. ಆ ಮೂಲಕ ದಕ್ಷಿಣ ಆಫ್ರಿಕಾ ದಂಡವು ಎರಡನೇ ಇನಿಂಗ್ಸ್ ನಲ್ಲಿ ಕೇವಲ 191 ರನ್ ಗಳನ್ನು ಮಾತ್ರ ಗಳಿಸಲಷ್ಟೇ ಶಕ್ತವಾಯಿತು. ಭಾರತ ತಂಡದ ಪರವಾಗಿ ಬುಮ್ರಾ,ಶಮಿ ತಲಾ ಮೂರು ವಿಕೆಟ್ ಗಳನ್ನು ಪಡೆದರೆ, ಸಿರಾಜ್ ಮತ್ತು ಅಶ್ವಿನ್ ತಲಾ ಎರಡು ವಿಕೆಟ್ ಗಳನ್ನು ಪಡೆಯುವ ಮೂಲಕ ತಂಡದ ಗೆಲುವಿಗೆ ಆಸರೆಯಾದರು.


ಇದನ್ನೂ ಓದಿ: ಪಕ್ಷ ಬಯಸಿದರೆ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ: ಸಚಿವ ಕೆ.ಎಸ್.ಈಶ್ವರಪ್ಪ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.