ಸಂಜು ಸ್ಯಾಮ್ಸನ್ ಭರ್ಜರಿ ಶತಕ, ಹರಿಣಗಳ ವಿರುದ್ಧ ಟೀಮ್ ಇಂಡಿಯಾಗೆ 2-1 ಅಂತರದಲ್ಲಿ ಸರಣಿ ಗೆಲುವು
ಇಲ್ಲಿನ ಬೋಲಾಂಡ್ ಪಾರ್ಕ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ಪಾರ್ಲ್: ಇಲ್ಲಿನ ಬೋಲಾಂಡ್ ಪಾರ್ಕ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ದಕ್ಷಿಣ ಆಫ್ರಿಕಾ ತಂಡವು ಭಾರತಕ್ಕೆ ಮೊದಲು ಬ್ಯಾಟಿಂಗ್ ಅವಕಾಶವನ್ನು ಕಲ್ಪಿಸಿತು.ಒಂದು ಹಂತದಲ್ಲಿ ಟೀಮ್ ಇಂಡಿಯಾ 49 ರನ್ ಗಳಿಸುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು ಈ ಹಂತದಲ್ಲಿ ಸಮಯೋಚಿತ ಆಟವಾಡಿದ ಸಂಜು ಸ್ಯಾಮ್ಸನ್ 114 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳಿಂದ 108 ಗಳನ್ನು ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.ಇವರಿಗೆ ಸಾಥ್ ನೀಡಿದ ತಿಲಕ್ ವರ್ಮಾ ಹಾಗೂ ರಿಂಕು ಸಿಂಗ್ ಕ್ರಮವಾಗಿ 52 ಹಾಗೂ 38 ರನ್ ಗಳಿಸುವ ಮೂಲಕ ತಂಡವನ್ನು ಸುಸ್ಥಿತಿಗೆ ತಂದರು.ಅಂತಿಮವಾಗಿ ಟೀಮ್ ಇಂಡಿಯಾ 50 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಳ್ಳುವ ಮೂಲಕ 296 ರನ್ ಗಳಿಸಿತು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ