ಜೋಹೆನ್ಸ್​ಬರ್ಗ್​: ದಕ್ಷಿಣ ಆಫ್ರಿಕಾದ ಶ್ರೇಷ್ಠ ವೇಗದ ಬೌಲರ್​​​​​​ ಡೇಲ್​​ ಸ್ಟೇನ್​​ ಅವರು ಭುಜದ ನೋವಿನಿಂದ ಬಳಲುತ್ತಿದ್ದು,  ಐಸಿಸಿ ವಿಶ್ವಕಪ್​​ 2019ರ ತಂಡದಿಂದ ಹೊರ ನಡೆದಿದ್ದಾರೆ. ಇವರ ಸ್ಥಾನದಲ್ಲಿ ಎಡಗೈ ಬೌಲರ್​​​​​​​ ಬ್ಯೂರಾನ್​​​ ಹ್ಯಾಂಡ್ರಿಕ್ಸ್ ಆಡಲಿದ್ದಾರೆ ಎಂದು ದಕ್ಷಿಣ ಆಫ್ರಿಕ ಕ್ರಿಕೆಟ್ ಮಂಡಳಿ ತಿಳಿಸಿದೆ. 


COMMERCIAL BREAK
SCROLL TO CONTINUE READING

ವಿಶ್ವಕಪ್ ಪಂದ್ಯದಲ್ಲಿ ಭಾರತವನ್ನು ಎದುರಿಸಲು ಸಿದ್ಧವಾಗಿರುವ ದಕ್ಷಿಣ ಆಫ್ರಿಕಾಕ್ಕೆ ಸ್ಟೇನ್ ಹೊರಗುಳಿದಿರುವುದು ಭಾರೀ ಹೊಡೆತ ನೀಡಿದೆ. ಬಲಗೈ ವೇಗದ ಬೌಲರ್ ಆದ ಸ್ಟೇನ್,  ಇದೇ ಜನವರಿಯಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಏಕದಿನ ಸರಣಿಯಲ್ಲಿಯೂ ಸ್ಟೇನ್​​ ಗಾಯಗೊಂಡಿದ್ದರು. ಬಳಿಕ ಚಿಕಿತ್ಸೆ ನೀಡಲಾಗಿತ್ತಾದರೂ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ವಿಶ್ವಕಪ್ ಪಂದ್ಯದಿಂದ ಹೊರಗುಳಿಯುವಂತಾಗಿದೆ.


ಇತ್ತೀಚೆಗೆ ನಡೆದ ಇಂಡಿಯನ್​​ ಪ್ರೀಮಿಯರ್​ ಲೀಗ್​ (ಐಪಿಎಲ್​)ನಲ್ಲಿ ರಾಯಲ್​ ಚಾಲೆಂಜರ್ಸ್​ ತಂಡದಲ್ಲಿಯೂ ಅದ್ಭುತ ಪ್ರದರ್ಶನ ನೀಡಿ ಸ್ಟೇನ್ ಬೆಂಗಳೂರು ಕ್ರಿಕೆಟ್​​ ಅಭಿಮಾನಿಗಳ ಮನ ಗೆದ್ದಿದ್ದರು. ಆದರೆ ವಿಶ್ವ ಕಪ್ ಪಂದ್ಯಕ್ಕಾಗಿ ಇಂಗ್ಲೆಂಡ್ ಗೆ ಬಂದ ಬಳಿಕ ಸ್ಟೇನ್ ಎರಡನೇ ಬಾರಿಗೆ ಭುಜದ ನೋವಿನಿಂದ ಬಳಲುತ್ತಿದ್ದಾರೆ ಎಂದು ದಕ್ಷಿಣ ಆಫ್ರಿಕಾ ತಂಡದ ವೈದ್ಯ ಮೊಹಮ್ಮದ್ ಮೊಸಝೀ ಹೇಳಿದ್ದಾರೆ. 


ದಕ್ಷಿಣ ಆಫ್ರಿಕಾ ತಂಡ ಈಗಾಗಲೇ ವಿಶ್ವಕಪ್​ನಲ್ಲಿ ಆಡಿದ ಎರಡು ಪಂದ್ಯದಲ್ಲಿ ಸೋಲನುಭವಿಸಿದ್ದು, ಮೂರನೇ ಪಂದ್ಯದಲ್ಲಿ ಭಾರತ ವಿರುದ್ಧ ಸೆಣಸಲಿದೆ.