ಭಾರತೀಯ ಕ್ರೀಡಾ ಪ್ರಾಧಿಕಾರವು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು,  ಅರ್ಹ ಅಭ್ಯರ್ಥಿಗಳಿಂದ ಈ ವರದಿಯಲ್ಲಿ ನೀಡಲಾದ ಆನ್ಲೈನ್ ಲಿಂಕ್ ಅಥವಾ ಆಫ್ಲೈನ್ ವಿಳಾಸಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ಗುತ್ತಿಗೆ ಆಧಾರದ ಮೇಲೆ ಇರಲಿದೆ. ಇನ್ನು ಭೌತ ಚಿಕಿತ್ಸಕರು, ಶಕ್ತಿ ಮತ್ತು ಕಂಡೀಷನಿಂಗ್ ತಜ್ಞರು, ಶರೀರ ಶಾಸ್ತ್ರಜ್ಞರು, ಮನೋವಿಜ್ಞಾನಿಗಳು, ಬಯೋಮೆಕಾನಿಕ್ಸ್ ಮತ್ತು ಪೌಷ್ಟಿಕತಜ್ಞರ ನೇಮಕಾತಿಗಾಗಿ  ಅರ್ಜಿಗಳನ್ನು ಆಹ್ವಾನಿಸಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Aisa Cup 2022: ಸಂಕಷ್ಟದಲ್ಲಿ ಟೀಂ ಇಂಡಿಯಾ! ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ಗೆ ಕೋವಿಡ್‌ ದೃಢ


ಸದ್ಯ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಒಟ್ಟು 138 ಹುದ್ದೆಗಳು  ಖಾಲಿ ಇವೆ. ಇನ್ನು ಕ್ರೀಡಾ ಇಲಾಖೆಯಲ್ಲಿ ಕೆಲಸ ಪಡೆಯಲು ಯೋಜಿಸುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಇನ್ನು ಆನ್‌ಲೈನ್ ಮೂಲಕ ಹೆಸರು ನೋಂದಣಿ ಮಾಡಲು ಈ ಕೆಳಗೆ ಲಿಂಕ್ ನ್ನು ನೀಡಲಾಗಿದೆ. ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಆನ್‌ಲೈನ್  ನಲ್ಲಿ ಸೆಪ್ಟೆಂಬರ್ 5ರೊಳಗೆ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ ಸೈಟ್ https://sportsauthorityofindia.gov.in/sai/ ಗೆ ಭೇಟಿ ನೀಡಬಹುದು.


ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆ ಹೀಗಿರಲಿದೆ: ಭಾರತೀಯ ಕ್ರೀಡಾ ಪ್ರಾಧಿಕಾರದ ಪ್ರಕಾರ ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಅರ್ಜಿ ಸಲ್ಲಿಸುವ ವ್ಯಕ್ತಿ 45 ವರ್ಷದೊಳಗಿವರಾಗಿರಬೇಕು. ಇನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಶಾರ್ಟ್‌ಲಿಸ್ಟಿಂಗ್ ಮಾಡಿ ಬಳಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಇನ್ನು ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಸದ್ಯ ಖಾಲಿ ಇರುವ ನಿರ್ದೇಶಕ ಮತ್ತು ಉಪ ನಿರ್ದೇಶಕ  ಹುದ್ದೆಗಳು ಸೇರಿದಂತೆ ಒಟ್ಟು 30 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಜನರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 8. ಇಲ್ಲಿ ಮುಖ್ಯವಾಗಿ ಗಮನಿಸಬೇಕಾದ ಸಂಗತಿಯೆಂದರೆ ಈಗಾಗಲೇ ಸರ್ಕಾರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿ, ನಿವೃತ್ತರಾಗಿರುವ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.


ಕ್ರೀಡಾ ಪ್ರಾಧಿಕಾರದ ನಿರ್ದೇಶಕ ಮತ್ತು ಉಪನಿರ್ದೇಶಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಬಳಿಕ ಅವರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ 67,700 ರೂ ನಿಂದ 2,09,200 ರೂ ವರೆಗೆ ತಿಂಗಳ ವೇತನ ದೊರೆಯಲಿದೆ.  


ಇದನ್ನೂ ಓದಿ: Team India Dance Video: ಜಿಂಬಾಬ್ವೆ ವಿರುದ್ಧ ಸರಣಿ ಗೆದ್ದ ಸಂಭ್ರಮ: ಸೊಂಟ ಬಳುಕಿಸಿದ ಡ್ರೆಸ್ಸಿಂಗ್ ರೂಂನಲ್ಲಿ ಕುಣಿದಾಡಿದ ಬ್ಲೂ ಬಾಯ್ಸ್


ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ವಿಳಾಸವನ್ನು ಗಮನಿಸಿ:
ಡೈ. ನಿರ್ದೇಶಕರು (ನೇಮಕಾತಿ),
ಭಾರತೀಯ ಕ್ರೀಡಾ ಪ್ರಾಧಿಕಾರ, ಪ್ರಧಾನ ಕಛೇರಿ, ಗೇಟ್ ನಂ.10 (ಪೂರ್ವ ದ್ವಾರ),
ಜವಾಹರಲಾಲ್ ನೆಹರು ಕ್ರೀಡಾಂಗಣ, ಲೋಧಿ ರಸ್ತೆ, ನವದೆಹಲಿ-110003  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ