Pathum Nissanka ODI Record: ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿ ಹೊಸ ದಾಖಲೆ ಬರೆದ ಪಥುಮ್‌ ನಿಸ್ಸಾಂಕ!

Sri Lanka Cricket: Pathum Nissanka Breaks Record: ಅಫ್ಘಾನಿಸ್ತಾನದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾದ ಆರಂಭಿಕ ಆಟಗಾರ ನಿಸ್ಸಾಂಕಾ ದ್ವಿಶತಕ ಸಿಡಿಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ಎಂಬ ದಾಖಲೆ ಬರೆದರು. 

Written by - Chetana Devarmani | Last Updated : Feb 10, 2024, 08:50 AM IST
  • ಅಫ್ಘಾನಿಸ್ತಾನದ ವಿರುದ್ಧ ಶ್ರೀಲಂಕಾ ಮೊದಲ ಏಕದಿನ ಪಂದ್ಯ
  • ಶ್ರೀಲಂಕಾದ ಆರಂಭಿಕ ಆಟಗಾರ ನಿಸ್ಸಾಂಕಾ ದ್ವಿಶತಕ
  • ಈ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ಎಂಬ ದಾಖಲೆ
Pathum Nissanka ODI Record: ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿ ಹೊಸ ದಾಖಲೆ ಬರೆದ ಪಥುಮ್‌ ನಿಸ್ಸಾಂಕ! title=

Sri Lanka's Rising Star: Pathum Nissanka's ODI Milestone: ಶ್ರೀಲಂಕಾದ ಆರಂಭಿಕ ಆಟಗಾರ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ದ್ವಿಶತಕ ಬಾರಿಸಿದ್ದಾರೆ. 136 ಎಸೆತಗಳಲ್ಲಿ 20 ಬೌಂಡರಿ ಮತ್ತು 8 ಸಿಕ್ಸರ್‌ಗಳೊಂದಿಗೆ 211 ರನ್ ಗಳಿಸಿದರು. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಮೊದಲ ಲಂಕಾ ಆಟಗಾರ ಎಂಬ ದಾಖಲೆ ಬರೆದರು. 24 ವರ್ಷಗಳ ಹಿಂದೆ ಜಯಸೂರ್ಯ ಅವರ ಅತ್ಯಧಿಕ ರನ್‌ಗಳ ದಾಖಲೆಯನ್ನು ನಿಸ್ಸಾಂಕ ಮುರಿದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ನಿಸ್ಸಾಂಕಾ ಮತ್ತು ಫೆರ್ನಾಂಡೋ ಅವರ ಜೊತೆಯಾಟದಲ್ಲಿ ಶುಭಾರಂಭ ಮಾಡಿತು. ನಿಸ್ಸಾಂಕ ವಿಶೇಷವಾಗಿ ಬೌಂಡರಿ ಹಾಗೂ ಸಿಕ್ಸರ್ ಗಳ ಮಳೆ ಸುರಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 182 ರನ್ ಕಲೆಹಾಕಿದರು.

ಇದನ್ನೂ ಓದಿ:  18 ಬೌಂಡರಿ, 3 ಸಿಕ್ಸರ್, ಒಂದೇ ಇನ್ನಿಂಗ್ಸ್’ನಲ್ಲಿ 159 ರನ್… 24ರ ಹರೆಯದ ಭಾರತದ ಕ್ರಿಕೆಟಿಗನಿಂದ ಅಮೋಘ ಶತಕದಾಟ! 

88 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ 8 ಬೌಂಡರಿಗಳ ನೆರವಿನಿಂದ 88 ರನ್ ಗಳಿಸಿದ್ದ ಫೆರ್ನಾಂಡೊ ಔಟಾದರು. ಬಳಿಕ ಬಂದ ಕುಶಾಲ್ ಮೆಂಡಿಸ್ ಅಲ್ಪ ಮೊತ್ತಕ್ಕೆ ಔಟಾದರು. ಬಳಿಕ ಬಂದ ಸಮರ ವಿಕ್ರಮ ಕೂಡ ಅದ್ಭುತ ಪ್ರದರ್ಶನ ನೀಡಿದರು. ಪಥುಮ್‌ ನಿಸ್ಸಾಂಕ ದ್ವಿಶತಕ ಸಿಡಿಸಿ ಅಜೇಯರಾಗಿ ಉಳಿದರು. ಈ ಮೂಲಕ ಶ್ರೀಲಂಕಾ ಪರ ಏಕದಿನದಲ್ಲಿ ದ್ವಿಶತಕ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ ಶ್ರೀಲಂಕಾ 50 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು 381 ರನ್‌ ಗಳಿಸಿತು. 

ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ ದ್ವಿಶತಕ ಸಿಡಿಸಿದ ವಿಶ್ವದಾಖಲೆಯನ್ನು ಭಾರತದ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಹೊಂದಿದ್ದಾರೆ. ಕಿಶನ್ ಬಾಂಗ್ಲಾದೇಶದ ವಿರುದ್ಧ ಕೇವಲ 126 ಎಸೆತಗಳಲ್ಲಿ ಡಬಲ್ ಸೆಂಚುರಿ ಮಾಡಿದ್ದರು. 128 ಎಸೆತಗಳಲ್ಲಿ ದ್ವಿಶತಕ ಸಾಧನೆ ಮಾಡುವ ಮೂಲಕ ಆಸ್ಟ್ರೇಲಿಯಾದ ಗ್ಲೇನ್ ಮ್ಯಾಕ್ಸ್​ವೆಲ್ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ನಿಸ್ಸಾಂಕ ಮೂರನೇ ಸ್ಥಾನದಲ್ಲಿದ್ದಾರೆ.  

ಇದನ್ನೂ ಓದಿ: ಇನ್’ಸ್ಟಾಗ್ರಾಂನಲ್ಲಿ ಪರಸ್ಪರ ಅನ್’ಫಾಲೋ ಮಾಡಿದ ರೋಹಿತ್-ಹಾರ್ದಿಕ್! ಕಾರಣವಾಗಿದ್ದು ‘ಆಕೆಯ’ ಪೋಸ್ಟ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News