ರಿಷಬ್ ಪಂತ್ ಗೆ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ
ಕಳೆದ ವಾರ ನಡೆದ ಭೀಕರ ಕಾರು ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಮುಂಬೈ: ಕಳೆದ ವಾರ ನಡೆದ ಭೀಕರ ಕಾರು ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಬದುಕಿನಲ್ಲಿ ದೈವಭಕ್ತಿಗೆ ಮಹತ್ವದ ಪಾತ್ರವಿದೆ: ಅಶ್ವತ್ಥ ನಾರಾಯಣ
ರಿಷಭ್ ಪಂತ್ ಅವರು ಶುಕ್ರವಾರದಂದು ಮೊಣಕಾಲಿನ ಅಸ್ಥಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.ಅವರು ಈಗ ವೈದ್ಯಕೀಯ ಚಿಕಿತ್ಸೆಯಲ್ಲಿದ್ದಾರೆ.ಮುಂದಿನ ಕ್ರಮ ಮತ್ತು ಪುನರ್ವಸತಿಯನ್ನು ಡಾ ದಿನ್ಶಾ ಪರ್ದಿವಾಲಾ ಮತ್ತು ಬಿಸಿಸಿಐ ಕ್ರೀಡಾ ವಿಜ್ಞಾನ ಮತ್ತು ಔಷಧ ತಂಡವು ವಹಿಸಲಿದೆ " ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.
ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಸ್ಪೋರ್ಟ್ಸ್ ಮೆಡಿಸಿನ್ ಕೇಂದ್ರದ ಮುಖ್ಯಸ್ಥ ಮತ್ತು ಆರ್ತ್ರೋಸ್ಕೊಪಿ ಮತ್ತು ಭುಜದ ಸೇವೆಯ ನಿರ್ದೇಶಕ ಡಾ ಪಾರ್ದಿವಾಲಾ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯಿತು.ರಾಷ್ಟ್ರೀಯ ಯುವಜನೋತ್ಸವ: ಅರಬಿಂದೋ ಸೊಸೈಟಿಯಿಂದ 7 ಸಾವಿರ ಪುಸ್ತಕಗಳ ಕೊಡುಗೆ
ಪಂತ್ ಅವರು ವಾಣಿಜ್ಯ ವಿಮಾನಯಾನದಿಂದ ಹಾರುವ ಸ್ಥಿತಿಯಲ್ಲಿಲ್ಲದ ಕಾರಣ ಡೆಹ್ರಾಡೂನ್‌ನಿಂದ ಏರ್ ಆಂಬ್ಯುಲೆನ್ಸ್ ಮೂಲಕ ಮುಂಬೈಗೆ ಕರೆದೊಯ್ಯಲಾಯಿತು.
ಡಿಸೆಂಬರ್ 30 ರ ಮುಂಜಾನೆ ದೆಹಲಿಯಿಂದ ರೂರ್ಕಿಗೆ ಚಾಲನೆ ಮಾಡುತ್ತಿದ್ದ 25 ವರ್ಷದ ರಿಶಬ್ ಪಂತ್, ಈ ವೇಳೆ ವೇಗವಾಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ನಂತರ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.