Team India Playing XI: ಚಿತ್ತಗಾಂಗ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದಲ್ಲಿ ದಿಢೀರ್ ಮಹತ್ವದ ಬದಲಾವಣೆಗಳಾಗಿವೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಇನ್ನು ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದ ಸಂದರ್ಭದಲ್ಲಿ ಆದ ಹೆಬ್ಬೆರಳು ಗಾಯದಿಂದಾಗಿ ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಕೆಎಲ್ ರಾಹುಲ್ ಅವರು ಟೀಮ್ ಇಂಡಿಯಾ ನಾಯಕರಾಗಿರುತ್ತಾರೆ. ಇದಲ್ಲದೆ, ವೇಗದ ಬೌಲರ್ ಮೊಹಮ್ಮದ್ ಶಮಿ ಮತ್ತು ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಬಾಂಗ್ಲಾದೇಶ ವಿರುದ್ಧದ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Team India: ಟೀಂ ಇಂಡಿಯಾದಲ್ಲಿ ಪಂತ್-ಧವನ್ ಸ್ಥಾನಕ್ಕೆ ಅಪಾಯ ತಂದಿಟ್ಟ ಈ ಸ್ಟಾರ್ ಆಟಗಾರ!


ಭಾರತದ ಟೆಸ್ಟ್ ತಂಡದಲ್ಲಿ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಬದಲಿಗೆ ವೇಗದ ಬೌಲರ್ ನವದೀಪ್ ಸೈನಿ ಮತ್ತು ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆಗಳ ನಂತರ ಇದೀಗ ಅತ್ಯುತ್ತಮ ಪ್ಲೇಯಿಂಗ್ XI ಆಯ್ಕೆ ಮಾಡುವ ಜವಾಬ್ದಾರಿ ನಾಯಕ ಕೆಎಲ್ ರಾಹುಲ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರ ಮೇಲಿದೆ.


ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ಕೆಎಲ್ ರಾಹುಲ್ ಮತ್ತು ಶುಬ್ಮನ್ ಗಿಲ್ ಅವರು ಆರಂಭಿಕರಾಗಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಶುಭಮನ್ ಗಿಲ್ ಅವರು ಕೆಎಲ್ ರಾಹುಲ್ ಅವರೊಂದಿಗೆ ಬ್ಯಾಟಿಂಗ್ ಆರಂಭಿಸಲಿದ್ದಾರೆ. ರೋಹಿತ್ ಶರ್ಮಾ ಆರಂಭಿಕ ಕೊರತೆಯನ್ನು ಶುಭ್‌ಮನ್ ಗಿಲ್ ಸಾಕಷ್ಟು ಮಟ್ಟಿಗೆ ಸರಿದೂಗಿಸಬಹುದು. ಶುಭ್‌ಮನ್ ಗಿಲ್ ಸ್ಫೋಟಕ ಬ್ಯಾಟಿಂಗ್‌ನಲ್ಲಿ ಪರಿಣತಿ ಹೊಂದಿದ್ದು, ಪಂದ್ಯದ ಮೊದಲ ಬಾಲ್‌ನಲ್ಲೇ ಇಡೀ ಆಟವನ್ನು ತಿರುಗಿಸುವ ಶಕ್ತಿ ಹೊಂದಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವ ಅವಕಾಶವನ್ನು ಶುಭಮನ್ ಗಿಲ್ ಪಡೆಯಲಿಲ್ಲ. ಆದರೆ ಈ ಟೆಸ್ಟ್ ಸರಣಿಯಲ್ಲಿ ಬಾಂಗ್ಲಾದೇಶ ತಂಡವನ್ನು ಬಗ್ಗುಬಡಿಯಲು ಕಾತುರದಿಂದ ಕಾಯುತ್ತಿದ್ದಾರೆ.


ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದಾರೆ. 4ನೇ ಸ್ಥಾನದಲ್ಲಿ ಡ್ಯಾಶಿಂಗ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್  ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ 5ನೇ ಕ್ರಮಾಂಕದಲ್ಲಿ, ಶ್ರೇಯಸ್ ಅಯ್ಯರ್ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಅಕ್ಷರ್ ಪಟೇಲ್ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದಾರೆ. ಇನ್ನು ಅಕ್ಷರ್ ಪಟೇಲ್ ಅವರನ್ನು ನಂಬರ್ 7 ರ ಅತ್ಯಂತ ಅಪಾಯಕಾರಿ ಆಟಗಾರ ಎಂದು ಪರಿಗಣಿಸಲಾಗಿದೆ. ಇದಲ್ಲದೆ, ಅವರು ಟೆಸ್ಟ್ ಪಂದ್ಯಗಳಲ್ಲಿ ಅತ್ಯಂತ ಮಾರಕವಾದ ಎಡಗೈ ಸ್ಪಿನ್ ಬೌಲಿಂಗ್ ಮಾಡುತ್ತಾರೆ.


ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸ್ಪಿನ್ ವಿಭಾಗದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ರವಿಚಂದ್ರನ್ ಅಶ್ವಿನ್ ಭಾರತ ಪರ 86 ಟೆಸ್ಟ್ ಪಂದ್ಯಗಳಲ್ಲಿ 442 ವಿಕೆಟ್ ಪಡೆದಿದ್ದಾರೆ. ಬಾಂಗ್ಲಾದೇಶದ ಪಿಚ್‌ಗಳು ಸ್ಪಿನ್ ಬೌಲರ್‌ಗಳಿಗೆ ಸಹಾಯ ಮಾಡುತ್ತವೆ.


ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ನವದೀಪ್ ಸೈನಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ವೇಗದ ಬೌಲರ್‌ಗಳಾಗಿ ಸ್ಥಾನ ಪಡೆಯಲಿದ್ದಾರೆ.


ಭಾರತದ ಪ್ಲೇಯಿಂಗ್ 11:


ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ (ಉಪನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ನವದೀಪ್ ಸೈನಿ.


ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ಗೆ ಭಾರತೀಯ ತಂಡ:


ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಭ್ ಕುಮಾರ್, ಜಯದೇವ್ ಉನದ್ಕತ್


ಇದನ್ನೂ ಓದಿ: Rohit Sharma : ಟೀಂ ಇಂಡಿಯಾಗೆ ಭಾರಿ ಹೊಡೆತ, ಮೊದಲ ಟೆಸ್ಟ್‌ನಿಂದ ರೋಹಿತ್ ಔಟ್!


ಭಾರತ vs ಬಾಂಗ್ಲಾದೇಶ ಟೆಸ್ಟ್ ಸರಣಿಯ ಪಂದ್ಯಗಳು (ಭಾರತೀಯ ಕಾಲಮಾನ) ಬೆಳಗ್ಗೆ 9 ಗಂಟೆಗೆ ಡಿಸೆಂಬರ್ 14 ರಿಂದ 18ರ ವರೆಗೆ ಚಿತ್ತಾಗಾಂಗ್ ನಲ್ಲಿ ನಡೆಯಲಿದೆ.


2ನೇ ಟೆಸ್ಟ್ ಡಿಸೆಂಬರ್ 22ರಿಂದ 26ರವರೆಗೆ ಬೆಳಗ್ಗೆ 9 ಗಂಟೆಗೆ ಢಾಕಾದಲ್ಲಿ ನಡೆಯಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.