Indian Cricket Team: ಟೀಂ ಇಂಡಿಯಾ ಮಾರ್ಚ್ 17 ರಿಂದ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಈ ಸರಣಿಯ ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ಹಾರ್ದಿಕ್ ಪಾಂಡ್ಯ ತಂಡದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಮುಂದಿನ ಏಕದಿನ ನಾಯಕನ ಬಗ್ಗೆ ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ದೊಡ್ಡ ಭವಿಷ್ಯ ನುಡಿದಿದ್ದಾರೆ. ರೋಹಿತ್ ಬದಲಿಗೆ ಸಮರ್ಥ ಆಟಗಾರನನ್ನು ಹೆಸರಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Richest Cricketer: ವಿರಾಟ್-ಧೋನಿ ಅಲ್ಲ… ಈ ಆಟಗಾರನೇ ವಿಶ್ವದ ಶ್ರೀಮಂತ ಕ್ರಿಕೆಟಿಗ! ಇವರ ಆಸ್ತಿ ಮೌಲ್ಯ 3100 ಕೋಟಿ


ಈ ವರ್ಷದ ವಿಶ್ವಕಪ್ ನಂತರ ಏಕದಿನ ತಂಡವನ್ನು ಮುನ್ನಡೆಸಲು ಹಾರ್ದಿಕ್ ಪಾಂಡ್ಯ ಮೊದಲ ODI ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯವನ್ನು ಗೆಲ್ಲಬೇಕು ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಕೌಟುಂಬಿಕ ಬದ್ಧತೆಯಿಂದಾಗಿ ನಿಯಮಿತ ನಾಯಕ ರೋಹಿತ್ ಶರ್ಮಾ ಆಡುವಂತಿಲ್ಲ. ಈ ಪಂದ್ಯಕ್ಕೆ ಪಾಂಡ್ಯ ಅವರನ್ನು ಹಂಗಾಮಿ ನಾಯಕರನ್ನಾಗಿ ನೇಮಿಸಲಾಗಿದೆ. ಹಾರ್ದಿಕ್ ಪಾಂಡ್ಯ ಅವರು ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಋತುವಿನಲ್ಲಿ ಮೊದಲ ಬಾರಿಗೆ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿದ್ದರು ಮತ್ತು ತಂಡವನ್ನು ಚಾಂಪಿಯನ್ ಮಾಡುವಲ್ಲಿ ಗಣನೀಯ ಕೊಡುಗೆ ನೀಡಿದ್ದರು. ಈಗಾಗಲೇ ಟಿ20ಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ.


ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಗವಾಸ್ಕರ್ 'ಗುಜರಾತ್ ಟೈಟಾನ್ಸ್ ಮತ್ತು ನಂತರ ಟಿ 20 ಸ್ವರೂಪದಲ್ಲಿ ಅವರ ನಾಯಕತ್ವದಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ. ಅವರು ಮುಂಬೈನಲ್ಲಿ ಮೊದಲ ಪಂದ್ಯವನ್ನು ಗೆದ್ದರೆ, 2023 ರಲ್ಲಿ ವಿಶ್ವಕಪ್ ಮುಗಿದ ನಂತರ, ನೀವು ಅವರ ಹೆಸರನ್ನು ಭಾರತದ ನಾಯಕತ್ವಕ್ಕೆ ಸೂಚಿಸಬಹುದು ಎಂದು ನಾನು ನಂಬುತ್ತೇನೆ. ಮಧ್ಯಮ ಕ್ರಮಾಂಕದಲ್ಲಿ ಪಾಂಡ್ಯ ಇರುವಿಕೆ ಭಾರತಕ್ಕೆ ಬಹಳ ಮುಖ್ಯವಾಗಿದೆ” ಎಂದು ಗವಾಸ್ಕರ್ ಹೇಳಿದ್ದಾರೆ.


ಇದನ್ನೂ ಓದಿ: 18ರ ಹರೆಯದಲ್ಲಿ ಟೀಂ ಇಂಡಿಯಾಗೆ ಸವಾಲ್ ಹಾಕಿದ್ದ ಈ ನಟಿಗೆ ಬಿತ್ತು ಹಿಗ್ಗಾಮುಗ್ಗಾ ಗೂಸಾ…!


“ಅವರು ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧರಾಗಿರುವಂತಹ ಆಟಗಾರ. ತಂಡವನ್ನು ಮುನ್ನಡೆಸುತ್ತಾರೆ. ಪಾಂಡ್ಯ ಅವರ ನಾಯಕತ್ವ ಶೈಲಿಯು ಅವರನ್ನು ಇತರ ಆಟಗಾರರಲ್ಲಿ ನೆಚ್ಚಿನವರನ್ನಾಗಿ ಮಾಡುತ್ತದೆ” ಎಂದು ಗವಾಸ್ಕರ್ ಹೇಳಿದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.