ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ತಮ್ಮ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ವಿಶ್ವಕಪ್ ಆಡುವ ಇಲೆವೆನ್ ನಾಯಕನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಚ್ಚರಿ ಎಂದರೆ ವಿರಾಟ್ ಕೊಹ್ಲಿ ಸ್ಥಾನ ಪಡೆಯದೆ ಇರುವುದು.
ಈಗ ಸುನಿಲ್ ಗವಾಸ್ಕರ್ ಪಟ್ಟಿ ಮಾಡಿರುವ ವಿಶ್ವಕಪ್ XI ತಂಡದಲ್ಲಿ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್ ಫಿಂಚ್ರೊಂದಿಗೆ ಸ್ಥಾನ ಪಡೆದಿದ್ದಾರೆ. ಈ ವಿಶ್ವಕಪ್ ಟೂರ್ನಿಯಲ್ಲಿ ಅವರು 648 ರನ್ ಗಳನ್ನು ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನ್ನುವ ಖ್ಯಾತಿ ಪಡೆದಿದ್ದಾರೆ. ಇನ್ನೊಂದೆಡೆ ಈ ಪಟ್ಟಿಯ ವಿಶೇಷವೆಂದರೆ ಕೇನ್ ವಿಲಿಯಮ್ಸನ್ ಅವರು 10 ಇನಿಂಗ್ಸ್ ಗಳಿಂದ 548 ರನ್ ಗಳಿಸಿದ್ದಾರೆ. ಆ ಮೂಲಕ ವಿಶ್ವಕಪ್ ವೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ತಂಡದ ನಾಯಕ ಎನ್ನುವ ಖ್ಯಾತಿ ಪಡೆದಿದ್ದಾರೆ.
ಭಾರತದ ಪರವಾಗಿ ಸ್ಥಾನ ಪಡೆದಿರುವ ಉಳಿದ ಆಟಗಾರರಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ರವಿಂದ್ರ ಜಡೇಜಾ ಸೇರಿದ್ದಾರೆ. ವಿರಾಟ್ ಕೊಹ್ಲಿ ಈ ತಂಡದಲ್ಲಿ ಸ್ಥಾನ ಪಡೆಯದಿರುವುದಕ್ಕೆ ಪ್ರಮುಖವಾಗಿ ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿರುವುದೇ ಇದಕ್ಕೆ ಕಾರಣವೆನ್ನಲಾಗಿದೆ.
ಸುನಿಲ್ ಗವಾಸ್ಕರ್ ಅವರ ಅತ್ಯುತ್ತಮ ವಿಶ್ವಕಪ್ XI ತಂಡ: ರೋಹಿತ್ ಶರ್ಮಾ, ಡೇವಿಡ್ ವಾರ್ನರ್, ಜೋ ರೂಟ್, ಕೇನ್ ವಿಲಿಯಮ್ಸನ್, ಶಕೀಬ್-ಅಲ್-ಹಸನ್, ಅಲೆಕ್ಸ್ ಕ್ಯಾರಿ, ಬೆನ್ ಸ್ಟೋಕ್ಸ್, ಮಿಚೆಲ್ ಸ್ಟಾರ್ಕ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ಜಸ್ಪ್ರಿತ್ ಬುಮ್ರಾ.