ಸುನಿಲ್ ಗವಾಸ್ಕರ್ ಅತ್ಯುತ್ತಮ ವಿಶ್ವಕಪ್ XI ತಂಡದಲ್ಲಿ ವಿರಾಟ್ ಕೊಹ್ಲಿಗಿಲ್ಲ ಸ್ಥಾನ...!
ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ತಮ್ಮ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ವಿಶ್ವಕಪ್ ಆಡುವ ಇಲೆವೆನ್ ನಾಯಕನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಚ್ಚರಿ ಎಂದರೆ ವಿರಾಟ್ ಕೊಹ್ಲಿ ಸ್ಥಾನ ಪಡೆಯದೆ ಇರುವುದು.
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ತಮ್ಮ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ವಿಶ್ವಕಪ್ ಆಡುವ ಇಲೆವೆನ್ ನಾಯಕನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಚ್ಚರಿ ಎಂದರೆ ವಿರಾಟ್ ಕೊಹ್ಲಿ ಸ್ಥಾನ ಪಡೆಯದೆ ಇರುವುದು.
ಈಗ ಸುನಿಲ್ ಗವಾಸ್ಕರ್ ಪಟ್ಟಿ ಮಾಡಿರುವ ವಿಶ್ವಕಪ್ XI ತಂಡದಲ್ಲಿ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್ ಫಿಂಚ್ರೊಂದಿಗೆ ಸ್ಥಾನ ಪಡೆದಿದ್ದಾರೆ. ಈ ವಿಶ್ವಕಪ್ ಟೂರ್ನಿಯಲ್ಲಿ ಅವರು 648 ರನ್ ಗಳನ್ನು ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನ್ನುವ ಖ್ಯಾತಿ ಪಡೆದಿದ್ದಾರೆ. ಇನ್ನೊಂದೆಡೆ ಈ ಪಟ್ಟಿಯ ವಿಶೇಷವೆಂದರೆ ಕೇನ್ ವಿಲಿಯಮ್ಸನ್ ಅವರು 10 ಇನಿಂಗ್ಸ್ ಗಳಿಂದ 548 ರನ್ ಗಳಿಸಿದ್ದಾರೆ. ಆ ಮೂಲಕ ವಿಶ್ವಕಪ್ ವೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ತಂಡದ ನಾಯಕ ಎನ್ನುವ ಖ್ಯಾತಿ ಪಡೆದಿದ್ದಾರೆ.
ಭಾರತದ ಪರವಾಗಿ ಸ್ಥಾನ ಪಡೆದಿರುವ ಉಳಿದ ಆಟಗಾರರಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ರವಿಂದ್ರ ಜಡೇಜಾ ಸೇರಿದ್ದಾರೆ. ವಿರಾಟ್ ಕೊಹ್ಲಿ ಈ ತಂಡದಲ್ಲಿ ಸ್ಥಾನ ಪಡೆಯದಿರುವುದಕ್ಕೆ ಪ್ರಮುಖವಾಗಿ ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿರುವುದೇ ಇದಕ್ಕೆ ಕಾರಣವೆನ್ನಲಾಗಿದೆ.
ಸುನಿಲ್ ಗವಾಸ್ಕರ್ ಅವರ ಅತ್ಯುತ್ತಮ ವಿಶ್ವಕಪ್ XI ತಂಡ: ರೋಹಿತ್ ಶರ್ಮಾ, ಡೇವಿಡ್ ವಾರ್ನರ್, ಜೋ ರೂಟ್, ಕೇನ್ ವಿಲಿಯಮ್ಸನ್, ಶಕೀಬ್-ಅಲ್-ಹಸನ್, ಅಲೆಕ್ಸ್ ಕ್ಯಾರಿ, ಬೆನ್ ಸ್ಟೋಕ್ಸ್, ಮಿಚೆಲ್ ಸ್ಟಾರ್ಕ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ಜಸ್ಪ್ರಿತ್ ಬುಮ್ರಾ.